Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಒಂದು ನಿಲ್ದಾಣ- ಒಂದು ಉತ್ಪನ್ನ ಮಳಿಗೆಗೆ ಸಚಿವ ಶರಣ ಪ್ರಕಾಶ್ ಪಾಟೀಲ್ ಚಾಲನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.17: ನಗರದ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ಒಂದು ನಿಲ್ದಾಣ ಒಂದು ಉತ್ಪನ್ನ ಮಳಿಗೆಗೆ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಗುರುವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಒಂದು ನಿಲ್ದಾಣ ಒಂದು ಉತ್ಪನ್ನ ಕಾರ್ಯಕ್ರಮವು ಕೇಂದ್ರ ರೈಲ್ವೇ ಸಚಿವಾಲಯ ಮತ್ತು ರಾಷ್ಟ್ರೀಯ ಜೀವನೋವಾಯ ಅಭಿಯಾನದ ಸಹಯೋಗದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯ ಮುಖ್ಯ ಉದ್ದೇಶ ಸ್ಥಳೀಯ ಕುಶಲ ಕರ್ಮಿಗಳು, ಕೈಮಗ್ಗ ನೇಕಾರರು ಮುಂತಾದವರ ಜೀವನೋಪಾಯ ಮತ್ತು ಕೌಶಲ್ಯಾಭಿವೃದ್ಧಿಗೆ ಸೂಕ್ತ ಅವಕಾಶವನ್ನು ಕಲ್ಪಿಸುವುದಾಗಿದೆ ಎಂದು ತಿಳಿಸಿದರು.

ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಮುಖ್ಯ ಉದ್ದೇಶವು ಮಹಿಳಾ ಸ್ವ ಸಹಾಯ ಸಂಘಗಳಿಗೆ ಆರ್ಥಿಕ ನೆರವು, ಕೌಶಲ್ಯಾಭಿವೃದ್ಧಿ ತರಬೇತಿ, ಮಾರುಕಟ್ಟೆ ಸೌಲಭ್ಯ, ಇತ್ಯಾದಿಗಳನ್ನು ಒದಗಿಸಿ ನಗರ ಪ್ರದೇಶದಲ್ಲಿನ ಬಡತನದ ಪ್ರಮಾಣವನ್ನು ಕಡಿಮೆ ಮಾಡುವುದಾಗಿರುತ್ತದೆ ಎಂದು ಅವರು ತಿಳಿಸಿದರು.

ಸ್ಪ-ಸಹಾಯ ಸಂಘಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶಿಸಲು ಮತ್ತು ಮಾರಾಟ ಮಾಡಲು ಮಾರುಕಟ್ಟೆ ಸೌಲಭ್ಯಗಳನ್ನು ಒದಗಿಸುವುದರಿಂದ ಅವರ ಆರ್ಥಿಕ ಚಟುವಟಿಕೆಗಳನ್ನು ಉನ್ನತಗೊಳಿಸುವುದು ಮತ್ತು ಅವರ ಅತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಕರ್ನಾಟಕದ ಸಾಂಸ್ಕೃತಿಕ ಐತಿಹಾಸಿಕತೆಯನ್ನು ಪ್ರತಿನಿಧಿಸುವ ಹಸ್ತಶಿಲ್ಪಗಳು, ಕಲಾಕೃತಿಗಳು ಮತ್ತು ಸ್ಥಳೀಯವಾಗಿ ತಯಾರಿಸಲಾದ ಉತ್ಪನ್ನಗಳ ವಿವಿಧ ಕಲೆಗಳ ಪ್ರಾಮುಖ್ಯತೆಯನ್ನು ತಿಳಿಸುತ್ತದೆ. ಮಹಿಳಾ ಸ್ವ-ಸಹಾಯ ಸಂಘಗಳು ತಯಾರಿಸಿದ ಉತ್ಪನ್ನಗಳ ಪ್ರಚಾರದ ಮೂಲಕ ಪ್ರಾದೇಶಿಕವಾಗಿ ಕುಶಲಕರ್ಮಿಗಳು ಮತ್ತು ಉದ್ದಿಮೆದಾರರ ಸುಸ್ಥಿರ ಜೀವನೋಪಾಯಕ್ಕೆ ಉತ್ತೇಜನ ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಮಹಿಳಾ ಸ್ವ-ಸಹಾಯ ಸಂಘಗಳು, ಉತ್ಪಾದಿಸುವ, ವಾಣಿಜ್ಯಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉತ್ತೇಜನ ಮತ್ತು ನಿರಂತರ ಕೌಶಲ್ಲಿ ಸುಧಾರಣೆ, ಉತ್ಪನ್ನ ನವೀಕರಣ ಮತ್ತು ವ್ಯವಹಾರ ಜ್ಞಾನ ಇದರಿಂದ ಬೆಳವಣಿಗೆಯಾಗಲಿದೆ. ಪ್ರಸ್ತುತ ರಾಷ್ಟ್ರೀಯ ಜೀವನೋಪಾಯ ಅಭಿಯಾನದಿಂದ ರಾಜ್ಯದ 09 ರೈಲ್ವೆ ಕೇಂದ್ರಗಳಲ್ಲಿ ಸ್ವ-ಸಹಾಯ ಸಂಘಗಳು ಉತ್ಪನ್ನಗಳೊಂದಿಗೆ ಮಳಿಗೆಗಳಿವೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಜೀವನೋಪಾಯ ಅಭಿಯಾನದ ನಿರ್ದೇಶಕಿ ಡಾ.ರಾಧಾಪ್ರಿಯ ಆರ್. ಉಪಸ್ಥಿರಿದ್ದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ