Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅತಿಥಿ ಶಿಕ್ಷಕರು ಸರಿಯಾಗಿ ಶಾಲೆಗೆ ಬರುವ ಬಗ್ಗೆ ಖಾತರಿ ಪಡಿಸಿ:ಮೋಹನರಾಜ್

ಸುದ್ದಿಮೂಲವಾರ್ತೆ

ಕೊಪ್ಪಳ ಅ 30: ಕೊಪ್ಪಳ ಜಿಲ್ಲೆಯಲ್ಲಿ ಕೆಲಸ ಮಾಡುವ ಅತಿಥಿ ಶಿಕ್ಷಕರು ಸರಿಯಾಗಿ ಶಾಲೆಗೆ ಬರುತ್ತಾರಾ? ಅವರ ಪಾಠ ಹೇಗೆ ಮಾಡುತ್ತಾರೆ ಎಂಬ ಬಗ್ಗೆ ನಿಗಾ ವಹಿಸಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ ಪಿ ಮೋಹನರಾಜ್ ಸೂಚನೆ ನೀಡಿದರು.

ಅವರು ಇಂದು ಕೊಪ್ಪಳ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿಪರಿಶೀಲನೆ ಮಾಡಿದರು. ಜಿಲ್ಲೆಯಲ್ಲಿ ಒಟ್ಟು 2300 ಜನ ಅತಿಥಿ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗಿದೆ. ಕೆಕೆಆರ್ ಡಿಬಿಯಿಂದ ಜಿಲ್ಲೆಯಲ್ಲಿ ಅವಶ್ಯವಿರುವಷ್ಟು ಅತಿಥಿ ಶಿಕ್ಷಕರನ್ನು ನೇಮಕ‌ ಮಾಡಿಕೊಳ್ಳಲಾಗಿದೆ. ಹೊಸದಾಗಿ ಜಿಲ್ಲೆಗೆ 590 ಜನ ಶಿಕ್ಷಕರು ಬರುತ್ತಿದ್ದಾರೆ. ಜಿಲ್ಲೆಯಲ್ಲಿ 38 ಶಾಲೆಗಳಲ್ಲಿ ಖಾಯಂ ಶಿಕ್ಷಕರಿಲ್ಲ. ಅಂಥ ಕಡೆ ಎರವಲು ಸೇವೆಯನ್ನು ನಿಯೋಜನೆ ಮಾಡಲಾಗಿದೆ ಎಂದು ಡಿಡಿಪಿಐ ತಿಳಿಸಿದರು.

ಜಿಲ್ಲೆಯಲ್ಲಿ ಶಾಲೆಗಳಲ್ಲಿ ಶೌಚಾಲಯಗಳ ಬಳಕೆಗೆ ನೀರು ಸರಬರಾಜು ಮಾಡಬೇಕು. ನೀರು ಸರಬರಾಜು ಮಾಡಿದರೆ ಮಾತ್ರ ನೀರು ಶೌಚಾಲಯಗಳು ಬಳಕೆಯಾಗಬೇಕು ಎಂದು ಮೋಹನರಾಜ್ ತಿಳಿಸಿದರು.

ಕೊಪ್ಪಳ ಜಿಲ್ಲೆಯಲ್ಲಿ 1950 ಅಂಗನವಾಡಿಗಳಲ್ಲಿ 382 ನಗರ ಹಾಗು 1572 ಗ್ರಾಮೀಣ ಭಾಗದಲ್ಲಿ 1213 ಸ್ವಂತ ಕಟ್ಟಡಗಳಿವೆ. 20 ಹಾಗು 61 ಕಡೆ ಸರಕಾರಿ ಕಟ್ಟಡಗಳಲ್ಲಿ ಅಂಗನವಾಡಿಗಳಿವೆ. 321 ಖಾಸಗಿ ಕಟ್ಟಡಗಳಲ್ಲಿ ಅಂಗನವಾಡಿಗಳು ನಡೆಯುತ್ತಿವೆ. ಅವಶ್ಯವಿರುವ ಕಡೆ ಅಂಗನವಾಡಿಗಳ ನಿರ್ಮಿಸಬೇಕು ಎಂದು ಸೂಚನೆ ನೀಡಿದರು.

172 ಕಡೆ ಅಂಗನವಾಡಿಗಾಗಿ ಕಟ್ಟಿರುವ ಕಟ್ಟಡಗಳಿಗೆ ಕೆಕೆಆರ್ ಡಿಬಿಯಿಂದ ಕಟ್ಟಡ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

ಗಂಗಾವತಿ ನಗರದಲ್ಲಿ 35 ವಾರ್ಡಗಳಲ್ಲಿ 116 ಅಂಗನವಾಡಿಗಳಿವೆ. ಇಲ್ಲಿ ಅವಶ್ಯರುವಷ್ಟು ದೊಡ್ಡ ಅಂಗನವಾಡಿಗಳನ್ನು ಮರ್ಜ್ ಮಾಡಬೇಕೆಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ 23 ರಷ್ಟು ಅಂಗನವಾಡಿ‌ ಕಾರ್ಯಕರ್ತೆಯರ ಕೊರತೆ ಇದೆ. 129 ಅಂಗನವಾಡಿ ಕಾರ್ಯಕರ್ತೆಯರ ನೇಮಿಸಬೇಕು. ಅಲ್ಲಿಯವರೆಗೂ ಪ್ರತ್ಯೇಕವಾಗಿ ಅಂಗನವಾಡಿ ಕಾರ್ಯಕರ್ತೆಯರ ಹಾಗು ಸಹಾಯಕಿಯರು ಇರಬೇಕು ಈ ಕುರಿತು ಕ್ರಮ ಕೈಗೊಳ್ಳಲು ಸೂಚಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ರತ್ನಂ ಪಾಂಡೆಯಾ ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ