Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಪುಟ್ಟಣ್ಣಪರ ಮತಯಾಚಿಸಿದ ಚಿದಂಬರ ಕ್ಷೇತ್ರದ ಸಂಸದ





ಸುದ್ದಿಮೂಲ ವಾರ್ತೆ

ಬೆಂಗಳೂರು, ಮೇ 4: ವಿಧಾನಸಭಾ ಚುನಾವಣೆಗೆ ಕೌಂಟ್‌ ಡೌನ್ ಶುರುವಾಗಿದೆ. ರಾಜಾಜಿನಗರದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಕ್ಷೇತ್ರದಲ್ಲಿ ವಿವಿಧಡೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಇಂದು ರಾಜಾಜಿನಗರ ಕ್ಷೇತ್ರದ ಪ್ರಕಾಶ್ ನಗರ ಹಾಗೂ ದಯಾನಂದ ನಗರ ವಾರ್ಡ್‌ಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪುಟ್ಟಣ್ಣ ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಈ ವೇಳೆ ಪುಟ್ಟಣ್ಣ ಅವರಿಗೆ ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ತೊಲ್ ತಿರುಮಾವಳನ್ ಸಾಥ್ ನೀಡಿದ್ದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ರಾಜಾಜಿನಗರದ ಜನರು ಭಾಗಿಯಾಗಿದ್ದರು.

ಈ ವೇಳೆ ಮಾತನಾಡಿದ ತಮಿಳುನಾಡಿನ ಸಂಸದ ತೊಲ್ ತಿರುಮಾವಳನ್, ಅಭಿವೃದ್ಧಿಗೆ ಪುಟ್ಟಣ್ಣ ಶ್ರಮವಹಿಸುತ್ತಿದ್ದಾರೆ. ಹಿಂದುಳಿದ ವರ್ಗಗಳ ಆಶಾಕಿರಣವಾಗಿ ಕೆಲಸ ಮಾಡುತ್ತಾರೆ. ಈ ಬಾರಿ ಪುಟ್ಟಣ್ಣನಿಗೆ ಒಂದು ಅವಕಾಶ ನೀಡಬೇಕು ಎಂದು ಮನವಿ ಮಾಡಿದರು.

ಇನ್ನು ಮತ ಪ್ರಚಾರದ ವೇಳೆ ನಾಗರಿಕರ ಅಹವಾಲುಗಳನ್ನು ಆಲಿಸಿ ಮಾತನಾಡಿದ ಪುಟ್ಟಣ್ಣ , ಕ್ಷೇತ್ರದಲ್ಲಿ ಹಲವಾರು ವರ್ಷಗಳಿಂದ ಹಾಲಿ ಶಾಸಕರು ಗೊಡ್ಡು ಭರವಸೆಗಳನ್ನು ನೀಡುತ್ತಾ ಬಂದಿದ್ದಾರೆ. ಕ್ಷೇತ್ರದಲ್ಲಿ ಮೂಲಸೌಕರ್ಯ ಸಮಸ್ಯೆಗಳು ಸಾಕಷ್ಟಿವೆ. ಯಾವುದೇ ಅಭಿವೃದ್ಧಿ ಕಾಮಗಾರಿ ನಡೆದಿಲ್ಲ, ನಡೆದರೂ ಗುಣಮಟ್ಟದಿಂದ ಕಾಮಗಾರಿಗಳನ್ನು ನಡೆಸಿಲ್ಲ. ಕ್ಷೇತ್ರದಲ್ಲಿ ಬದಲಾವಣೆಯ ಅಲೆ ಬೀಸುತ್ತಿದೆ. ಅಭಿವೃದ್ಧಿಗಾಗಿ ತಮಗೆ ಬೆಂಬಲ ನೀಡಬೇಕು ಬದಲಾವಣೆಗೆ ಒಂದು ಅವಕಾಶ ಮಾಡಿಕೊಂಡುವಂತೆ ಜನರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿಯ ಮಾಜಿ ಮೇಯರ್‌ ಜಿ. ಪದ್ಮಾವತಿ, ಮಾಜಿ ಸದಸ್ಯ ಪಳನಿಕಾಂತ್‌, ಕಾಂಗ್ರೆಸ್

ಮುಖಂಡರಾದ ಮಂಜುಳಾ ನಾಯ್ಡು‌ ‌ ಮತ್ತಿತರರು ಇದ್ದರು. ಪ್ರಚಾರದಲ್ಲಿ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಸುರೇಶ್ ಕುಮಾರ್ ವಿರುದ್ಧ ಘೋಷಣೆ

ರಾಜಾಜಿನಗರ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಕ್ಷೇತ್ರದ ಅಬ್ಬರದ ಪ್ರಚಾರದ ವೇಳೆ ಹಾಲಿ ಶಾಸಕ ಸುರೇಶ್ ಕುಮಾರ್ ವಿರುದ್ಧ ಘೋಷಣೆ ಕೇಳಿಬಂತು. ಕಳೆದ 20 ವರ್ಷಗಳಿಂದ ಹಾಲಿ ಶಾಸಕ ಸುರೇಶ್ ಕುಮಾರ್ ಯಾವುದೇ ಅಭಿವೃದ್ಧಿ ಮಾಡಿಲ್ಲ. ಚುನಾವಣೆ ವೇಳೆ ಮಾತ್ರ ಮತ ಕೇಳಲು ಬರುತ್ತಾರೆ. ಆದರೆ, ರಾಜಾಜಿನಗರ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ. ಹೀಗಾಗಿ ಸುರೇಶ್ ಕುಮಾರ್‌ಗೆ ಕ್ಷೇತ್ರದ ಜನರು ಧಿಕ್ಕಾರ ಕೂಗಿದ ಪ್ರಸಂಗ ಸಹ ನಡೆಯಿತು.






Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ