Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೈಸೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳಲ್ಲಿ ಮಳೆ ಅವಾಂತರ : ಜನಜೀವನ ಅಸ್ತವ್ಯಸ್ತ ಮನೆ ಕುಸಿತ, ಶಾಲೆಗಳಿಗೆ ರಜೆ ಘೋಷಣೆ, ಹೆದ್ದಾರಿಗಳು ಬಂದ್‌, ಜಮೀನು ಜಲಾವೃತ

ಸುದ್ದಿಮೂಲ ವಾರ್ತೆ

ಮೈಸೂರು, ಜು.25 : ಮೈಸೂರು ಭಾಗದಲ್ಲಿ ಮಳೆ ಅರ್ಭಟ ಮಂಗಳವಾರವೂ ಮುಂದುವರಿದಿದ್ದು, ಮಳೆ ಅವಾಂತರದಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಲ್ಲಲ್ಲಿ ಭೂಸಿತ ಉಂಟಾಗಿದೆ. ಮನೆಗಳು ಕುಸಿದಿವೆ. ಹೆದ್ದಾರಿಗಳಲ್ಲಿ ಮರಗಳು ಉರುಳಿದ್ದರಿಂದ ಸಂಚಾರಕ್ಕೆ ಅಲ್ಲಲ್ಲಿ ಅಡಚಣೆಯಾಗಿದೆ. ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಅವಾಂತರ ನಿರಂತರವಾಗಿ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿಪಾಸ್ತಿ ನಷ್ಟವಾಗಿದೆ. ಮೈಸೂರು, ಹಾಸನ, ಹಾಸನ ಜಿಲ್ಲೆಗಳಲ್ಲಿ ಮಳೆಪೀಡಿತ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಅಷ್ಟೇನು ಹಾನಿ ಆಗಿಲ್ಲ.



ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಗುಳಗಳಲೆ ಗ್ರಾಮ ಸೇರಿದಂತೆ ಆನೇಕ ಕಡೆ ಮನೆಗಳು ಕುಸಿದಿದ್ದರೆ, ರಾಷ್ಟ್ರೀಯ ಹೆದ್ದಾರೆ ತಡೆಗೋಡೆ ಕುಸಿತದಿಂಮ ರಸ್ತೆ ಸಂಚಾರ ಬಂದ್‌ ಆಗಿದೆ. ಕೆಲವು ಕಡೆ ಜಮೀನುಗಳು ಜಲಾವೃತಗೊಂಡಿವೆ. ಈ ಜಿಲ್ಲೆಯ ಆಲೂರು, ಸಕಲೇಶಪುರ, ಬೇಲೂರು ತಾಲೂಕುಗಳ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆ ಭಾಗಮಂಡಲ ಬಹುತೇಕ ನೀರಿನಲ್ಲಿ ಮುಳುಗಿದ್ದರೆ, ಈ ಜಿಲ್ಲೆಯ ಹಲವೆಡೆ ಮಣೆಗಳಿಗೆ ನೀರು ನುಗ್ಗಿದೆ. ಈ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ನೀಡಲಾಗಿದೆ.

ಮೈಸೂರು ಜಿಲ್ಲೆ ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಕೆಲ ಪ್ರದೇಶಗಳ; ತಗ್ಗಿನ ಪ್ರದೇಶಗಳಿಗೆ ನೀರು ನುಗ್ಗಿದೆ. ಇದನ್ನು ಬಿಟ್ಟರೆ ಇನ್ನಾವ ಬಗೆಯ ಅನಾಹುತಗಳು ಸಂಭವಿಸಿಲ್ಲ. ಇಲ್ಲೂ ಪಿರಿಯಾಪಟ್ಟಣ, ಸರಗೂರು ಮತ್ತು ಎಚ್‌.ಡಿ. ಕೋಟೆ ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ತಗ್ಗು ಪ್ರದೇಶದ ಜನರಿಗೆಎಚ್ಚರಿಕೆ

ಮಂಗಳವಾರವೂ ಜಲಾಶಯಗಳಿಗೆ ಹೆಚ್ಚು ನೀರು ಬರುತ್ತಿದ್ದು, ಕಬಿನಿ ಜಲಾಶಯದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದ್ದು, ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ತಗ್ಗು ಪ್ರದೇಶದ ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಸಮುದ್ರ ಮಟ್ಟದಿಂದ 2284 ಅಡಿ ಗರಿಷ್ಠ ಸಾಮರ್ಥ್ಯವಿರುವ ಕಬಿನಿ ಜಲಾಶಯದ ಇಂದಿನ ನೀರಿನ ಮಟ್ಟ 2281.04 ಅಡಿಗಳಿಗೆ ಏರಿಕೆಯಾಗಿದೆ. ಇಂದಿನ ಒಳಹರಿವು 25896 ಕ್ಯೂಸೆಕ್ ಗೆ ಹೆಚ್ಚಳವಾಗಿದ್ದು, ಜಲಾಶಯದಿಂದ 15000 ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. ಜಲಾಶಯ ಒಟ್ಟು 19.52 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವನ್ನ ಹೊಂದಿದ್ದು ಪ್ರಸ್ತುತ 17.34 ಟಿಎಂಸಿ ನೀರು ಸಂಗ್ರಹವಾಗಿದೆ.

ಕಬಿನಿ ಜಲಾಶಯದ ಹೊರಹರಿವು ಯಾವುದೇ ಕ್ಷಣದಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಕಪಿಲಾ ನದಿ ಪಾತ್ರದ ಇಕ್ಕೆಲಗಳಲ್ಲಿ ವಾಸಿಸುತ್ತಿರುವ ತಗ್ಗು ಪ್ರದೇಶದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳುವಂತೆ ಸೂಚನೆ ನೀಡಲಾಗಿದೆ.

ಕೆಆರ್‌ಎಸ್‌

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂಗೆ ಹೆಚ್ಚಿನ ಪ್ರಮಾಣದ ನೀರು ಹರಿದುಬರುತ್ತಿದೆ. ಇದರಿಂದ ಕಳೆದ 48 ಗಂಟೆಯಲ್ಲಿ 5 ಟಿಎಂಸಿಯಷ್ಟು ನೀರು ಹರಿದುಬಂದಿದ್ದು, 124.80 ಅಡಿ ಗರಿಷ್ಠ ಮಟ್ಟ ಹೊಂದಿರುವ ಕೆಆರ್‌ಎಸ್ ಜಲಾಶಯ 10 ಅಡಿ ನೀರು ತುಂಬಿದ್ದು, ಡ್ಯಾಂ ಭರ್ತಿಯತ್ತ ಸಾಗಿದೆ.ಸದ್ಯ ಡ್ಯಾಂಗೆ 48,025 ಕ್ಯೂಸೆಕ್ ಒಳ ಹರಿವಿದೆ. ಇಂದು ಇನ್ನಷ್ಟು ನೀರಿನ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. 49.452 ಟಿಎಂಸಿ ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್‌ಎಸ್ ಕಳೆದ 48 ಗಂಟೆಗಳಲ್ಲಿ 5 ಟಿಎಂಸಿ ನೀರು ಹರಿದುಬಂದಿದ್ದು, ಒಟ್ಟು 22.809 ಟಿಎಂಸಿ ನೀರು ಡ್ಯಾಂನಲ್ಲಿ ಶೇಖರಣೆಯಾಗಿದೆ.

ಹಾರಂಗಿ

ಈ ಜಲಾಶಯದ ಗರಿಷ್ಠ ಮಟ್ಟ 2859 ಅಡಿಗಳು. ಇಂದಿನ ಮಟ್ಟ 2853.05 ಅಡಿಗಳು. ಕಳೆದ ವರ್ಷ ಇದೇ ದಿನ 2856.38 ಅಡಿಗಳಿಗಿತ್ತು. ಹಾರಂಗಿ ಜಲಾನಯನ ಪ್ರದೇಶದಲ್ಲಿ 43,60 ಮಿ.ಮೀ ಮಳೆ ಆಗಿದೆ. ಒಳ ಹರಿವು 21.205 ಕ್ಯುಸೆಕ್‌ ಇದ್ದು, ಹೊರಹರಿವು 22 ಸಾವಿರ ಕ್ಯುಸೆಕ್‌ ಇದೆ. ಜಲಾಶಯದ ತಗ್ಗು ಪ್ರದೇಶದಲ್ಲಿ ಇರುವ ಜನರಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ.

ಹೇಮಾವತಿ

ಸಕಲೇಶಪುರ, ಮೂಡಿಗೆರೆ ಪ್ರದೇಶದಲ್ಲಿ ಮಳೆ ಅಬ್ಬರಿಸುತ್ತಿರುವುದರಿಂದ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದೆ. ಇಂದು 26,058 ಕ್ಯುಸೆಕ್‌ ನೀರು ಬರುತ್ತಿದ್ದು, 200 ಕ್ಯುಸೆಕ್‌ ಹೊರಬಿಡಲಾಗುತ್ತಿದೆ. ಇಂದಿನ ಮಟ್ಟ 2906.25 ಅಡಿಗಳಿದ್ದು, ಜಲಾಶಯದ ಗರಿಷ್ಠ ಮಟ್ಟ 2922 ಅಡಿಗಳು. ಈಗ 23.945 ಟಿಎಂಸಿನೀರು ಸಂಗ್ರಹವಾಗಿದೆ. ಜಲಾಶಯದ ಸಂಗ್ರಹ ಸಾಮರ್ಥ್ಯ 37.107 ಟಿಎಂಸಿ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ