Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದೇವೇಗೌಡರಿಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪ್ರದಾನ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.6: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಬಹುಮುಖ್ಯ ದತ್ತಿ ಪ್ರಶಸ್ತಿಯಾದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ ಪ್ರಶಸ್ತಿಯನ್ನು ಇಂದಿಲ್ಲಿ ಪ್ರದಾನ ಮಾಡಲಾಯಿತು.

ಮಾಜಿ ಪ್ರಧಾನಿಗಳ ನಿವಾಸದಲ್ಲಿ ನಡೆದ ಸರಳ ಸುಂದರ ಸಮಾರಂಭದಲ್ಲಿ ಸುಪ್ರೀಂ ಕೋರ್ಟ್‌ ವಿಶ್ರಾಂತ ಮುಖ್ಯ ನ್ಯಾಯಮೂರ್ತಿಗಳಾದ ಎಂ.ಎನ್. ವೆಂಕಟಾಚಲಯ್ಯ ಅವರು ಹಾಗೂ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಮಹೇಶ್ ಜೋಶಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಪ್ರದಾನ ಮಾಡಿ ಮಾಜಿ ಪ್ರಧಾನಿಗಳಿಗೆ ಶುಭ ಕೋರಿದ ಎಂ.ಎನ್.ವೆಂಕಟಾಚಲಯ್ಯ ಅವರು, ನಾಡಿನ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿದ ಮೈಸೂರು ಸಂಸ್ಥಾನದ ಅರಸರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿನ ಪ್ರಶಸ್ತಿ ದೇಶದ ಮೊದಲ ಕನ್ನಡಿಗ ಪ್ರಧಾನಮಂತ್ರಿ, ರಾಜಕೀಯ ಮುತ್ಸದ್ಧಿ ಮತ್ತು ದೂರದೃಷ್ಟಿಯ ಆಡಳಿತಗಾರ ದೇವೇಗೌಡರಿಗೆ ಸಂದಿರುವುದು ನನಗೆ ಬಹಳ ಸಂತಸ ಉಂಟು ಮಾಡಿದೆ. ಅತ್ಯುನ್ನತ ಸಾಧಕರಿಗೆ ಪ್ರಶಸ್ತಿ ಸಂದಿದೆ ಎಂದು ನುಡಿದರು.

ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಅವರು ಮಾತನಾಡಿ, ನಾಡಿಗೆ, ದೇಶಕ್ಕೆ ಮಹಾನ್ ಕೊಡುಗೆ ನೀಡಿದ ದೇವೇಗೌಡರಿಗೆ ನಾಲ್ವಡಿ ಪ್ರಶಸ್ತಿ ನೀಡುತ್ತಿರುವುದು ಆ ಪ್ರಶಸ್ತಿಯ ಗೌರವವನ್ನು ಮತ್ತಷ್ಟು ಹೆಚ್ಚಿಸಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಅಭಿವೃದ್ಧಿಯ ಹರಿಕಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅಜರಾಮರರಾದರೆ, ದೇವೇಗೌಡರು ಸ್ವಾತಂತ್ರೋತ್ತರ ಭಾರತದಲ್ಲಿ ಆರು ದಶಕಗಳ ತಮ್ಮ ಸುದೀರ್ಘ ರಾಜಕೀಯ ಬದುಕಿನಲ್ಲಿ ನಾಡು, ದೇಶದ ಅಭಿವೃದ್ಧಿಗೆ ಆವಿಸ್ಮರಣೀಯ ಕೊಡುಗೆ ನೀಡಿದ್ದಾರೆ ಎಂದರು.

ಮಾಜಿ ಪ್ರಧಾನಿಗಳ ಸಂತಸ:

ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಯನ್ನು ಸಂತೋಷದಿಂದ ಸ್ವೀಕಾರ ಮಾಡಿದ್ದೇನೆ. ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಈ ಕಾರ್ಯಕ್ರಮ ನಡೆಯಬೇಕಿತ್ತು. ಅನಾರೋಗ್ಯದ ಕಾರಣಕ್ಕೆ ವೈದ್ಯರ ಸಲಹೆಯ ಮೇರೆಗೆ ನಾನು ಆ ಕಾರ್ಯಕ್ರಮಕ್ಕೆ ಹಾಜರಾಗುವುದು ಕಷ್ಟ ಸಾಧ್ಯವಿತ್ತು. ಹೀಗಾಗಿ ನ್ಯಾ. ಎಂ.ಎನ್. ವೆಂಕಟಾಚಲಯ್ಯ ಅವರು, ನಾಡೋಜ ಮಹೇಶ್ ಜೋಶಿ ಅವರು ನನ್ನ ಮನೆಗೇ ಬಂದು ಪ್ರಶಸ್ತಿ ನೀಡಿದ್ದಾರೆ. ಇವರಿಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವಿವಿಧ ಪದಾಧಿಕಾರಿಗಳು, ಕನ್ನಡದ ಕಟ್ಟಾಳುಗಳು ಹಾಜರಿದ್ದು, ಮಾಜಿ ಪ್ರಧಾನಿಗಳಿಗೆ ಶುಭ ಕೋರಿದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ