Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಾಲೆಗಳಲ್ಲಿ ಕನಕದಾಸರ ಜಯಂತಿ ಕಡ್ಡಾಯ ಆಚರಣೆಗೆ ಸೂಚನೆ

ಸುದ್ದಿಮೂಲ ವಾರ್ತೆ

ತುಮಕೂರು, ನ.15 : ಸಂತ ಶ್ರೇಷ್ಠ ಕನಕದಾಸರ 536ನೇ ಜಯಂತಿಯನ್ನು ನ. 30ರಂದು ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ನ. 30ರಂದು ಶಾಲೆಗಳಲ್ಲಿ ಕನಕ ಜಯಂತಿಯನ್ನು ಏರ್ಪಡಿಸಿ ಕನಕದಾಸರ ಪರಿಚಯ, ಅವರ ತತ್ವ ಸಿದ್ಧಾಂತ, ಆದರ್ಶಗಳ ಬಗ್ಗೆ ಮಕ್ಕಳಿಗೆ ತಿಳಿಸಬೇಕು. ಜಯಂತಿ ಕಡ್ಡಾಯ ಆಚರಣೆ ಕುರಿತು ಎಲ್ಲಾ ಶಾಲೆಗಳಿಗೆ ಸುತ್ತೋಲೆ ಹೊರಡಿಸಬೇಕೆಂದು ತುಮಕೂರು ಹಾಗೂ ಮಧುಗಿರಿ ಡಿಡಿಪಿಐಗಳಿಗೆ ನಿರ್ದೇಶನ ನೀಡಿದರು.

ನಗರದ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾ ಮಟ್ಟದ ಕನಕದಾಸರ ಜಯಂತ್ಯುತ್ಸವ

ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಸೂಚನೆ ನೀಡಿದರು.

ಕನಕದಾಸರ ಜಯಂತ್ಯುತ್ಸವದ ಅಂಗವಾಗಿ 5 ಮಂದಿ ಸಾಧಕರನ್ನು ಸನ್ಮಾನಿಸಿ ಗೌರವಿಸಲು ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯಲ್ಲಿ ಅರ್ಹರನ್ನು ಗುರುತಿಸಿ ಜಿಲ್ಲಾಡಳಿತದ

ಗಮನಕ್ಕೆ ತರಬೇಕೆಂದು ಹಾಗೂ ಕನಕದಾಸರ ವಿಚಾರಧಾರೆಗಳ ಬಗ್ಗೆ ಉಪನ್ಯಾಸವನ್ನು ಏರ್ಪಡಿಸಬೇಕೆಂದು ಸಮಿತಿ ಸದಸ್ಯರಿಗೆ ತಿಳಿಸಿದರು.

ವೇದಿಕೆ ಕಾರ್ಯಕ್ರಮದ ಮುನ್ನ ನಗರದ ಶಿರಾ ಗೇಟ್ ಕನಕ ವೃತ್ತದ ಬಳಿಯಿಂದ ಪ್ರಮುಖ ರಸ್ತೆಗಳಲ್ಲಿ ಏರ್ಪಡಿಸಿರುವ ಕನಕದಾಸರ ಭಾವಚಿತ್ರ ಮೆರವಣಿಗೆಯಲ್ಲಿ ಸಾಂಸ್ಕೃತಿಕ ಕಲಾತಂಡಗಳು ಪಾಲ್ಗೊಳ್ಳುವ ವ್ಯವಸ್ಥೆ ಮಾಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್ ಅವರಿಗೆ ಸೂಚಿಸಿದರು.

ಸಭೆಯಲ್ಲಿ ಶ್ರೀ ಗುರುರೇವಣಸಿದ್ದೇಶ್ವರ ಮಠದ ಪೀಠಾಧಿಪತಿ ಬಿಂದುಶೇಖರ ಒಡೆಯರ್ ಮಹಾಸ್ವಾಮಿಗಳು, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ನಗರ ಡಿವೈಎಸ್‌ಪಿ ಕೆ.ಆರ್. ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ ಮತ್ತಿತರರು ಹಾಜರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ