Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ತಮಿಳುನಾಡಿಗೆ ನೀರು: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಸುದ್ದಿಮೂಲ ವಾರ್ತೆ

ಮೈಸೂರು, ಆ.17: ಕಾವೇರಿ ನೀರನ್ನು ಕೆಆರ್‌ಎಸ್‌ ಮತ್ತು ಕಬಿನಿ ಜಲಾಶಯಗಳಿಂದ ತಮಿಳುನಾಡಿಗೆ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಹಳೇ ಮೈಸೂರು ಭಾಗದ ರೈತರ ಆಕ್ರೋಶ ಭುಗಿಲೆದ್ದಿದೆ. ಅದರಲ್ಲೂ ಮಂಡ್ಯ ಜಿಲ್ಲೆಯಲ್ಲಿ ಅನ್ನದಾತರ ಆಕ್ರೋಶ ಮುಗಿಲು ಮುಟ್ಟಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಜಿಲ್ಲೆಯಲ್ಲಿ ರೈತರ ಆಕ್ರೋಶ ಭುಗಿಲೆದ್ದಿದ್ದು, ಗುರುವಾರ ಶ್ರೀರಂಗಪಟ್ಟಣ, ಕೆ.ಆರ್.ಎಸ್ ನಲ್ಲಿ ರೈತರು ಪ್ರತಿಭಟನೆ ನಡೆಸಿದರು. ಕೆ.ಆರ್.ಎಸ್ ನಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇತೃತ್ವದಲ್ಲಿ ಧರಣಿ ನಡೆಸಿದ್ದು, ಮಂಡ್ಯದಲ್ಲಿ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತ ಶ್ರೀರಂಗಪಟ್ಟಣದಲ್ಲಿ ರೈತ ಹೋರಾಟಗಾರ ನಂಜುಂಡೇಗೌಡ ನೇತೃತ್ವದಲ್ಲಿ ತಾಲೂಕು ಕಚೇರಿ ಮುಂದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದ ಡಿಸಿ ಕಚೇರಿ ಬಳಿ ಕರ್ನಾಟಕ ರಾಜ್ಯ ರೈತ ಸಂಘ ಮೂಲ ಸಂಘಟನೆಯಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ-ರಾಜ್ಯ ಸರ್ಕಾರ ಹಾಗೂ ಕಾವೇರಿ ನೀರಾವರಿ ನಿಗಮದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ರೈತ ಸಂಘ ಮೂಲ ಸಂಘಟನೆಯ ಜಿಲ್ಲಾಧ್ಯಕ್ಷ ಇಂಡವಾಳು ಚಂದ್ರಶೇಖರ್, ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ. ನಮ್ಮದು ನಮ್ಮದು ಕಾವೇರಿ ನಮ್ಮದು ಎಂದು ಘೋಷಣೆ ಕೂಗುವ ಮೂಲಕ ಖಂಡಿಸಿದರು.

ಕೆ.ಆರ್.ಎಸ್ ಜಲಾಶಯದಿಂದ ಕೇಂದ್ರ-ರಾಜ್ಯಸರ್ಕಾರ ಸೇರಿ ತಮಿಳುನಾಡಿಗೆ ನೀರು ಹರಿಸಿದ್ದಾರೆ. 15 ಸಾವಿರ ಕ್ಯೂಸೆಕ್ ನೀರನ್ನು ಬಿಟ್ಟು ರಾಜ್ಯದ ರೈತರನ್ನ ಕಡೆಗಣಿಸಿದ್ದಾರೆ.

ಬರಿ 2 ಸಾವಿರ ಕ್ಯೂಸೆಕ್ ನೀರನ್ನು ನಾಲೆ ಬಿಟ್ಟು ರೈತರಿಗೆ ಅನ್ಯಾಯ ಮಾಡಲಾಗುತ್ತಿದ್ದು, ಕೆಎರ್‌ಎಸ್‌ ಡ್ಯಾಂ ಅನ್ನು ತಿಂಗಳಿಗೆ 3 ಕೋಟಿ ವೆಚ್ಚದಲ್ಲಿ ನಿರ್ವಹಣೆ ಮಾಡಲಾಗುತ್ತದೆ. ತಮಿಳುನಾಡಿನವರು ಒಂದು ಪೈಸೆ ಕೊಟ್ಟಿಲ್ಲ. ಕೋರ್ಟ್‌ನಲ್ಲಿ ಯಾವ ರೀತಿ ವಾದ ಮಾಡಿದ್ದಾರೆ ಎಂದು ಕಿಡಿಕಾರಿದರು.

ನಾಲೆಗಳಿಗೆ 2 ಸಾವಿರ ಕ್ಯೂಸೆಕ್ ನೀರು ಬಿಡದೆ ತಮಿಳುನಾಡಿಗೆ ಬಿಟ್ಟಿದ್ದಾರೆ. ರಾಜ್ಯ ಸರ್ಕಾರ ದೊಂಬರಾಟ ಆಡುತ್ತಾ ನಿಂತಿದ್ದಾರೆ. ರಾಜ್ಯದ ಉಪಮುಖ್ಯಮಂತ್ರಿ ರೈತರನ್ನು ಕೋರ್ಟ್ ಗೆ ಹೋಗಿ ಅಂತಾರೆ. ರೈತರು ಕೋರ್ಟ್ ಗೆ ಹೋಗುವುದಕ್ಕೆ ಆಗುತ್ತಾ? ಇವರು ಯಾಕೆ ಇರೋದು ಎಂದು ಪ್ರಶ್ನಿಸಿದರು.

ಉಪಮುಖ್ಯಮಂತ್ರಿ ಒಬ್ಬ ಕಳ್ಳ. ಅವರು ಮಾಡಬೇಕಾದ ಕೆಲಸ. ಉಸ್ತುವಾರಿ ಸಚಿವ ಬೆಳೆ ಹಾಕಬೇಡಿ ಅಂತಾರೆ ಸಾಲವನ್ನು ಇವರ ಅಪ್ಪ ಕಟ್ಟುತ್ತಾರಾ? ನೀರು ಕೊಡದಿದ್ದರೆ ಸಾಲ ಮನ್ನ ಮಾಡಿ ಎಂದು ಹರಿಹಾಯ್ದರು.

ಮುಂದಿನ ದಿನಗಳಲ್ಲಿ ಹೆದ್ದಾರಿ ತಡೆದು ಹೋರಾಟ ಮಾಡ್ತೇವೆ. ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವುದನ್ನ ನಿಲ್ಲಿಸಿ. ಕಾವೇರಿ ಅಚ್ಚುಕಟ್ಟು ಪ್ರದೇಶದ ನಾಲೆಗೆ ನೀರು ಬಿಡಿ. ಜಿಲ್ಲೆಯ ಜನಪ್ರತಿನಿಧಿಗಳು ಎಚ್ಚೆತ್ತು ತಮಿಳುನಾಡಿಗೆ ನೀರು ಹೋಗುವುದನ್ನ ತಡೆಯಿರಿ ಇಲ್ಲ ನಿಮ್ಮ ವಿರುದ್ಧವೂ ಹೋರಾಟ ಮಾಡುತ್ತೇವೆ ಎಂದು ಡಿಸಿಎಂ, ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹಾಗೂ ಜನ ಪ್ರತಿನಿಧಿಗಳಿಗೆ ಇಂಡವಾಳು ಚಂದ್ರಶೇಖರ್ ಎಚ್ಚರಿಕೆ ನೀಡಿದರು.

ಪುನರ್ ಪರಿಶೀಲಿಸಿಲು ಮನವಿ: ಡಿ.ಕೆ. ಶಿವಕುಮಾರ್

ಈ ವರ್ಷ ಮಳೆ ಕಡಿಮೆಯಾಗಿದೆ. ಪ್ರತಿದಿನ 10 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿದ ಆದೇಶದ ಮೇರೆಗೆ ಸ್ವಲ್ಪ ನೀರುಬಿಟ್ಟಿದ್ದೇವೆ. ಆದರೆ, ಇದರಿಂದ ತಮಿಳುನಾಡನ್ನು ಸಮಾಧಾನ ಮಾಡಲು ಸಾಧ್ಯವಾಗಿಲ್ಲ. ಆದರೆ, ನಮ್ಮಲ್ಲಿ ಮಳೆ ಕೊರತೆ ಇರುವುದರಿಂದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಪ್ರಾಧಿಕಾರಕ್ಕೆ ಮನವಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೃಷಿಗಿಂತ ಕುಡಿಯುವ ನೀರಿಗೆ ಬಹಳ ತೊಂದರೆಯಾಗುತ್ತದೆ. ಒಂದು ಬಾರಿ ಜಲಾಶಯದಿಂದ ನೀರು ಬಿಟ್ಟರೆ ಅದು ತಮಿಳುನಾಡು ತಲುಪಲು ನಾಲ್ಕೈದು ದಿನ ಬೇಕಾಗುತ್ತದೆ. ಈ ಮಧ್ಯೆ ಸಾಕಷ್ಟು ನೀರು ಬಳಕೆಯಾಗುತ್ತದೆ. ಹೀಗಾಗಿ ಈ ವಿಚಾರದಲ್ಲಿ ಪುನರ್ ಪರಿಶೀಲನೆಯ ಅಗತ್ಯವಿದೆ ಎಂದು ಅವರು ಗುರುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಸರ್ವ ಪಕ್ಷದ ಸಭೆ ಕರೆಯುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಲಹೆ ನೀಡಿರುವುದರಲ್ಲಿ ತಪ್ಪಿಲ್ಲ. ನಾವೂ ಅದನ್ನು ಯೋಚಿಸಿದ್ದೇವೆ. ಶೀಘ್ರದಲ್ಲಿಯೇ ಸರ್ವಪಕ್ಷ ಸಭೆ ಕರೆಯುವ ಸಂಬಂಧ ಚರ್ಚಿಸಲಾಗುವುದು. ಹಿಂದಿನ ಎಲ್ಲಾ ಸರ್ಕಾರಗಳೂ ನೀರು ಬಿಟ್ಟಿವೆ. ಇದರಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ