Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೂರು ತಿಂಗಳಲ್ಲಿ 545 ಪಿಎಸ್‌ಐ ಹುದ್ದೆ ಭರ್ತಿ: ಪರಮೇಶ್ವರ್

ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.09:
ರಾಜ್ಯದಲ್ಲಿ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿ ಪ್ರಕ್ರಿಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿಿದ್ದು, ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ಪಿಎಸ್ಐ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ವಿಧಾನಸಭೆಗೆ ಮಂಗಳವಾರ ಹೇಳಿದರು.
ಪ್ರಶ್ನೋೋತ್ತರ ಕಲಾಪದಲ್ಲಿ, ಮೂಡಬಿದ್ರೆೆ ಶಾಸಕ ಉಮಾನಾಥ ಕೋಟ್ಯಾಾನ್ ಅವರ ಪ್ರಶ್ನೆೆಗೆ ಉತ್ತರಿಸಿದ ಸಚಿವರು, ಕಳೆದ ಐದು ವರ್ಷಗಳಿಂದಲೂ ಪಿಎಸ್ಐಗಳ ನೇಮಕಾತಿ ಆಗಿಲ್ಲ. ಈ ಹಿಂದೆ 545 ಪಿ.ಎಸ್.ಐ. ಹುದ್ದೆಗಳ ನೇಮಕಾತಿಗಾಗಿ ನಡೆದಂತಹ ಪ್ರಕರಣ ಬಗೆಹರಿಸಿ, ನೇಮಕಾತಿ ಮಾಡಿದ್ದು, ಆಯ್ಕೆೆಯಾದ ಅಭ್ಯರ್ಥಿಗಳನ್ನು ತರಬೇತಿಗಾಗಿ ನಿಯೋಜಿಸಲಾಗಿದೆ. ಮೂರು ತಿಂಗಳಲ್ಲಿ ತರಬೇತಿ ಪೂರ್ಣಗೊಳ್ಳಲಿದ್ದು, ಬಳಿಕ ಖಾಲಿ ಇರುವೆಡೆ, ಅಗತ್ಯ ಇರುವ ಕಡೆಗಳಲ್ಲಿ ಪಿಎಸ್ಐಗಳ ಹುದ್ದೆಯನ್ನು ಭರ್ತಿ ಮಾಡಲಾಗುವುದು. ಪೊಲೀಸ್ ಪೇದೆಗಳ ನೇಮಕಾತಿಗೂ ಹಣಕಾಸು ಇಲಾಖೆಗೆ ಪ್ರಸ್ತಾಾವನೆ ಸಲ್ಲಿಸಲಾಗಿದ್ದು, ಅನುಮೋದನೆಯಾಗಿ ಬಂದ ಬಳಿಕ ನೇಮಕಾತಿ ಪ್ರಕ್ರಿಿಯೆ ಪ್ರಾಾರಂಭಿಸಲಾಗುವುದು ಎಂದರು.
ಕರಾವಳಿ ಮುಂತಾದೆಡೆ ಅಪರಾಧಗಳ ಸಂಖ್ಯೆೆ ಹೆಚ್ಚಾಾಗುತ್ತಿಿದೆ ಎಂಬ ವರದಿ ಬಂದ ಹಿನ್ನೆೆಲೆಯಲ್ಲಿ ವಿಶೇಷ ಕಾರ್ಯ ಪಡೆ ನೇಮಿಸಿದ್ದೇವೆ. ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ನಮ್ಮ ರಾಜ್ಯದಲ್ಲಿ ಜಾರಿ ಮಾಡಿದ್ದು, 50 ಮನೆಗೆ ಒಂದು ಕ್ಲಸ್ಟರ್‌ನಂತೆ ಮಾಡಿ, ಪೊಲೀಸ್ ಪೇದಡ ಅವರು ಮನೆ ಮನೆಗೆ ಭೇಟಿ ನೀಡಿ, ಆಯಾ ಮನೆಗಳಲ್ಲಿನ ಕುಟುಂಬಗಳಿಂದ ಸಮಸ್ಯೆೆಗಳ ಬಗ್ಗೆೆ ನಿಗದಿತ ಪ್ರಶ್ನೆೆಗಳನ್ನು ಕೇಳಿ ವಿವರ ಪಡೆದು, ಕ್ರಮ ವಹಿಸಿದ್ದು, ಇದು ಜನರಿಂದಲೂ ಪ್ರಶಂಸೆಗೆ ಒಳಗಾಗಿದೆ.
ಇದರ ಜೊತೆಗೆ ಮಹಿಳೆಯರ ಸುರಕ್ಷತೆಗಾಗಿಯೇ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆಯ ಸಹಯೋಗದಲ್ಲಿ ಅಕ್ಕ-ಪಡೆ ರಚಿಸಲಾಗುತ್ತಿಿದ್ದು, ಇದೂ ಕೂಡ ಮೆಚ್ಚುಗೆ ಪಡೆದುಕೊಂಡಿದೆ. ರಾಜ್ಯದಲ್ಲಿ ಇದರಿಂದ ಅಪರಾಧಗಳ ಸಂಖ್ಯೆೆ ಇಳಿಮುಖವಾಗುತ್ತಿಿದೆ. ವಿಶೇಷವಾಗಿ ಕರಾವಳಿ ಪ್ರದೇಶವನ್ನು ಸುರಕ್ಷಿತ ಪ್ರದೇಶವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿಿನಲ್ಲಿ ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿಿದೆ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ