Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕಾನೂನು ಅರಿವು ಮೂಡಿಸಲು ಅರೆಕಾಲಿಕ ಕಾನೂನು ಸ್ವಯಂ ಸೇವಕರು ನೆರವಾಗಬೇಕು : ಕೆ.ಜಿ. ಶಾಂತಿ

ಸುದ್ದಿಮೂಲ ವಾರ್ತೆ ಬಳ್ಳಾರಿ, ೆ.07:
ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸುವಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರು ನೆರವಾಗಬೇಕು ಎಂದು ಪ್ರಧಾನ ಜಿಲ್ಲಾಾ ಮತ್ತು ಸತ್ರ ನ್ಯಾಾಯಾಧೀಶರು ಹಾಗೂ ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರದ ಅಧ್ಯಕ್ಷರಾದ ಕೆ.ಜಿ. ಶಾಂತಿ ಅವರು ತಿಳಿಸಿದ್ದಾಾರೆ.
ಜಿಲ್ಲಾಾ ಕಾನೂನು ಸೇವೆಗಳ ಪ್ರಾಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆ, ಜಿಲ್ಲಾಾ ವಕೀಲರ ಸಂಘ ಮತ್ತು ಡೀಡ್‌ಸ್‌ ಸಂಸ್ಥೆೆ ಮಂಗಳೂರು ಇವರ ಜಂಟಿ ಆಶ್ರಯದಲ್ಲಿ ನಗರದ ಜಿಲ್ಲಾಾ ನ್ಯಾಾಯಾಲಯದಲ್ಲಿ ಶನಿವಾರ ನಡೆದ ಬಳ್ಳಾಾರಿ ಜಿಲ್ಲೆೆಯ ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಎರಡು ದಿನಗಳ ತರಬೇತಿ ಕಾರ್ಯಾಗಾರ ಉದ್ಘಾಾಟಿಸಿ ಅವರು ಮಾತನಾಡಿದರು.
ಸಮಾಜದ ಹಿತದೃಷ್ಟಿಿಯಿಂದ ಸಮಾಜ ಸೇವೆಯಲ್ಲಿ ಪಿಎಲ್‌ವಿಗಳ ಪಾತ್ರವೂ ಅವಶ್ಯವಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರು ಕಾನೂನು ಇಲಾಖೆಗೆ ಹಾಗೂ ಸಮಾಜಕ್ಕೆೆ ಕಾನೂನಿನ ಅರಿವು ಹಾಗೂ ಸಲಹೆಯನ್ನು ಕೊಡುವಲ್ಲಿ ನೆರವಾಗಬೇಕು. ಕಾನೂನು ಸ್ವಯಂ ಸೇವಕರು ಕಾನೂನಿನ ಬಗ್ಗೆೆ ತಿಳಿದು ಅರ್ಹ ವ್ಯಕ್ತಿಿಗಳಿಗೆ ಕಾನೂನಿನ ಸಲಹೆ ಕೊಡುವಲ್ಲಿ ಮುಖ್ಯ ಪಾತ್ರವಹಿಸಬೇಕು ಎಂದರು.
ಪ್ರತಿಯೊಬ್ಬರಿಗೂ ನ್ಯಾಾಯ ಸಿಗಬೇಕು ಎಂಬುದು ಕಾನೂನಿನ ಮೂಲ ಉದ್ದೇಶವಾಗಿದೆ. ಹಾಗಾಗಿ ಸ್ವಯಂ ಸೇವಕರು ಎರಡು ದಿನಗಳ ತರಬೇತಿಯ ಸದ್ಭಳಕೆ ಮಾಡಿಕೊಂಡು, ಅಸಹಾಯಕರಿಗೆ ಕಾನೂನು ಸೇವೆಗಳನ್ನು ತಲುಪಿಸುವಂತಹರಾಗಬೇಕು ಎಂದು ಹೇಳಿದರು.
ಜಿಲ್ಲಾಾ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಾಯಾಧೀಶ ರಾಜೇಶ್ ಎನ್. ಹೊಸಮನೆ ಅವರು ಅಧ್ಯಕ್ಷತೆ ವಹಿಸಿ, ಅರೆಕಾಲಿಕ ಕಾನೂನು ಸ್ವಯಂ ಸೇವಕರು ಕಾನೂನು ಸೇವಾ ಪ್ರಾಾಧಿಕಾರ ಮತ್ತು ಜನಸಾಮಾನ್ಯರ ನಡುವಿನ ಪ್ರಮುಖ ಕೊಂಡಿಯಾಗಿದ್ದಾಾರೆ. ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಕಾನೂನು ನೆರವು ಒದಗಿಸುವುದು, ಕಾನೂನು ಅರಿವು ಮೂಡಿಸುವುದು, ವಿವಾದಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸುವುದು ಮತ್ತು ಸರ್ಕಾರಿ ಸೌಲಭ್ಯಗಳನ್ನು ತಲುಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಾಾರೆ. ಹಾಗಾಗಿ ಗುಣಮಟ್ಟದ ತರಬೇತಿ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾಾ ವಕೀಲರ ಸಂಘದ ಅಧ್ಯಕ್ಷ ಪಿ.ರಾಮಬ್ರಹ್ಮಂ ಅವರು ಮುಖ್ಯ ಅತಿಥಿಗಳಾಗಿ, ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಕಾನೂನು ಅರಿವು ನೀಡಿದರೆ, ಅವರು ಸಾಮಾನ್ಯ ಜನರಿಗೆ ನೆರವು ನೀಡುತ್ತಾಾರೆ. ಹಾಗಾಗಿ ಕಾನೂನು ಸ್ವಯಂ-ಸೇವಕರು ಎರಡು ದಿನಗಳ ತರಬೇತಿ ಕಾರ್ಯಾಗಾರದಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಿ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯ್ಕ ಸೇರಿ ನ್ಯಾಾಯಾಧೀಶರು, ವಕೀಲರು, ಅರೆಕಾಲಿಕ ಸ್ವಯಂ ಸೇವಕರು, ನ್ಯಾಾಯಾಲಯದ ಅಧಿಕಾರಿ-ಸಿಬ್ಬಂದಿ, ಕಾನೂನು ಕಾಲೇಜಿನ ವಿದ್ಯಾಾರ್ಥಿಗಳು ಉಪಸ್ಥಿಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ