Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಂಗ್ರೆಸ್ ಸರಕಾರದಲ್ಲೂ ಕಾಸಿಗಾಗಿ ಪೋಸ್ಟಿಂಗ್!

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.28: ಕಾಂಗ್ರೆಸ್ ಸರಕಾರವು ಕಾಸಿಗಾಗಿ ಪೋಸ್ಟಿಂಗ್ ದಂಧೆಯಲ್ಲಿ ತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು ಪತ್ರಗಳನ್ನು ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿ ಸರಕಾರಕ್ಕೆ ಚಾಟಿ ಬೀಸಿದ್ದಾರೆ.

ಪಂಚಗ್ಯಾರಂಟಿಗಳ ರಾಜ್ಯ ಕಾಂಗ್ರೆಸ್ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದಿರುವ ಅವರು ಕಾಸಿಗಾಗಿ ಪೋಸ್ಟಿಂಗ್ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.

ಸ್ವತಃ ಮುಖ್ಯಮಂತ್ರಿ ಕಚೇರಿಯಲ್ಲೇ ವರ್ಗಾವರ್ಗಿ ದಂಧೆಗೆ ʼಹುಂಡಿʼ ಇದೆ ಎನ್ನುವುದು ಇಲ್ಲಿ ದಾಖಲೆ ಸಮೇತ ಬಟಾಬಯಲಾಗಿದೆ. ಒಂದೇ ಹುದ್ದೆಗೆ ಸ್ವತಃ ಮುಖ್ಯಮಂತ್ರಿ ಅವರೇ ನಾಲ್ವರಿಗೆ ಶಿಫಾರಸು ಪತ್ರ ಕೊಟ್ಟಿದ್ದಾರೆ. ಸಿಎಂ ಕಚೇರಿಯಲ್ಲಿ ಏನೇನು ನಡೆಯುತ್ತಿದೆ? CMO ಅಂದರೆ CM of Karnataka ವೋ ಅಥವಾ Corruption of Karnataka ವೋ?? ಎಂದು ಮಾಜಿ ಮುಖ್ಯಮಂತ್ರಿ ಅವರು ಪ್ರಶ್ನೆ ಮಾಡಿದ್ದಾರೆ.

ನಾಲ್ಕು ಶಿಫಾರಸುಗಳ ಹಿಂದಿರುವ ಆ ʼಅತೀಂದ್ರʼ ಶಕ್ತಿ ಯಾವುದು? ಮೂರೊಪ್ಪತ್ತೂ ಶಿಫಾರಸು ಪತ್ರಗಳನ್ನು ಟೈಪಿಸಿ, ಸಿಎಂ ಸಾಹೇಬರ ಸಹಿ ಮಾಡಿಸುವುದರಲ್ಲಿಯೇ ಅಧಿಕಾರಿಗಳು ತಲ್ಲೀನರಾಗಿದ್ದಾರೆನ್ನುವುದು ಖಾತ್ರಿ. ವರ್ಗಾವರ್ಗಿಯ ಪೇಮೆಂಟ್‌ ಕೋಟಾ ನಿಯಂತ್ರಣ ಮಾಡುತ್ತಿರುವ ಆ ʼರಿಮೋಟ್‌ ಕಂಟ್ರೋಲ್‌ʼ ಬಗ್ಗೆ ಜನಕ್ಕೆ ಅರ್ಥವಾಗುತ್ತಿದೆ ಎಂದಿರುವ ಅವರು ಮುಖ್ಯಮಂತ್ರಿ ಕಚೇರಿಯತ್ತ ಬೊಟ್ಟು ಮಾಡಿದ್ದಾರೆ.

ಈ ಕಾಂಗ್ರೆಸ್ ಸರಕಾರ ಬಂದ ಮೊದಲ ದಿನದಿಂದಲೇ ʼಕಾಸಿಗಾಗಿ ಪೋಸ್ಟಿಂಗ್‌ʼ ದಂಧೆ ಶುರುವಾಗಿದೆ. ʼಸರಕಾರದ ಕೆಲಸ ದೇವರ ಕೆಲಸʼ ಎನ್ನುವುದರ ಬದಲು ʼಬಂದಿದ್ದನ್ನು ಬಿಡದೇ ಬಾಚಿಕೋ..ʼ ಎಂಬುದು ಈ ಸರಕಾರದ ಧ್ಯೇಯನೀತಿ ಆಗಿದೆ. ಜನರ ಹಣೆಗೆ ಗ್ಯಾರಂಟಿ ತುಪ್ಪ ಸವರಿ, ಬಿಟ್ಟಿಭಾಗ್ಯದ ಬೆಲ್ಲದ ಆಮಿಷವೊಡ್ಡಿ ʼಲೂಟಿಪರ್ವʼಕ್ಕೆ ʼಹುಂಡಿʼ ಇಡಲಾಗಿದೆ ಎಂದು ಅವರು ದೂರಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ