Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.8: ರಾಯಚೂರು ಜಿಲ್ಲೆಯ ಜೀವನಾಡಿ ಆಗಿರುವ ತುಂಗಭದ್ರಾ ಎಡದಂತೆ ಮತ್ತು ನಾರಾಯಣಪುರ ಬಲದಂಡೆ ಅಚ್ಚುಕಟ್ಟು ಪ್ರದೇಶದಲ್ಲಿನ ನೀರಾವರಿ ಸಮಸ್ಯೆ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುವಂತೆ ಜಿಲ್ಲೆಯ ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಮಾಡಿದ ಮನವಿಗೆ ಮುಖ್ಯಮಂತ್ರಿ ಸಮ್ಮತಿ ಸೂಚಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಜಿಲ್ಲೆಯ ಕಾಂಗ್ರೆಸ್ ಸಚಿವ ಶಾಸಕರ ಸಭೆಯಲ್ಲಿ ವಿಷಯ ಪ್ರಸ್ತಾಪವಾಗಿ ತುಂಗಭದ್ರಾ ಎಡದಂಡೆ ನಾಲೆಯ ಕೊನೆ ಭಾಗದ ರೈತರಿಗೆ ಸಮರ್ಪಕವಾಗಿ ನೀರು ತಲುಪಿಸುವ ಉದ್ದೇಶದಿಂದ ಮುಂಗಡಪತ್ರದಲ್ಲಿ ಘೋಷಿಸಿದ ನವಲಿ ಜಲಾಶಯ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಆಂಧ್ರ ಹಾಗೂ ತೆಲಂಗಾಣ ರಾಜ್ಯಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.

ಇದಲ್ಲದೆ, ನಾರಾಯಣಪುರ ಬದಲಂಡೆ ನಾಲೆಯ ಕೊನೆ ಭಾಗಕ್ಕೆ ನೀರು ತಲುಪದ ಕಾರಣ ಅಚ್ಚುಕಟ್ಟು ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ಹೀಗಾಗಿ ಕೃಷ್ಣಾ ನದಿಯಿಂದ ಗಣೇಕಲ್ ಜಲಾಶಯಕ್ಕೆ ನೀರು ಭರ್ತಿ ಮಾಡುವ ಕಾಮಗಾರಿ ತ್ವರಿತಗೊಳಿಸಿ ಆ ಮೂಲಕ ಸಮಸ್ಯೆಗೆ ಪರಿಹಾರ ಮಾಡಲು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಇದೇ ವೇಳೆ ನಾರಾಯಣಪುರ ಬಲದಂಡೆ ಕಾಮಗಾರಿಯ ಅಕ್ರಮದ ಬಗ್ಗೆ ಸಹ ವಿಷಯ ಪ್ರಸ್ತಾಪವಾಗಿ ಈ ಬಗ್ಗೆ ತನಿಖೆ ಮಾಡಿಸುವ ಕುರಿತಂತೆ ಸಹ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದು ಗೊತ್ತಾಗಿದೆ.

ರಾಯಚೂರು ವಿಶ್ವವಿದ್ಯಾಲಯಕ್ಕೆ ಬೇಡಿಕೆಯಂತೆ ಅನುದಾನ, ರಾಯಚೂರು ವಿಮಾನ ನಿಲ್ದಾಣ ಕಾಮಗಾರಿಗೆ ಶೀಘ್ರವೇ ಚಾಲನೆ ಕೊಡಿಸುವುದು ಮತ್ತು ಚುನಾವಣೆ ವೇಳೆ ನೀಡಿದ ಭರವಸೆಯಂತೆ 5ಎ ಕಾಲುವೆ ನಿರ್ಮಾಣಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಲು ಸಹ ಸಂಬಂಧಪಟ್ಟ ಸಚಿವರಿಗೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗೆ ಜಿಲ್ಲೆಯ ಸಚಿವ ಶಾಸಕರು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಎಡದಂಡೆ ನಾಲೆಯ ಇನ್ನಿತರ ಸಮಸ್ಯೆಗಳ ಕುರಿತಂತೆ ಚರ್ಚಿಸಲು ವಿಶೇಷ ಸಭೆಯೊಂದನ್ನು ಕರೆಯುವಂತೆ ಸಚಿವ ಎನ್.ಎಸ್. ಬೋಸರಾಜು ಮತ್ತು ಶಾಸಕ ಹಂಪನಗೌಡ ಬಾದರ್ಲಿ ಪ್ರಸ್ತಾಪಿಸಿದಾಗ ಈ ಕುರಿತು ಶೀಘ್ರವೇ ಸಭೆ ಕರೆಯಲು ಡಿಸಿಎಂ ಸಹಮತ ವ್ಯಕ್ತಪಡಿಸಿದ್ದಾರೆ.

ಈ ಎಲ್ಲದರ ಜೊತೆಗೆ ಪ್ರತಿ ತಿಂಗಳು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಶಾಸಕರೊಂದಿಗೆ ಸಭೆ ನಡೆಸಿ ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿ ವಿಷಯಗಳ ಕುರಿತು ಸಮಾಲೋಚನೆ ನಡೆಸಿ ತಮ್ಮ ಹಂತದಲ್ಲಿಯೇ ಬಗೆಹರಿಯುವ ಸಮಸ್ಯೆಗಳನ್ನು ಬಗೆಹರಿಸಲು ಸೂಕ್ತ ನಿರ್ದೇಶನ ನೀಡುವಂತೆ ಕೋರಿದಾಗ ಮುಖ್ಯಮಂತ್ರಿ ಅದಕ್ಕೆ ಸ್ಪಂದಿಸಿ ಇದೇ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ಪ್ರತಿ ತಿಂಗಳು ಸಭೆ ನಡೆಸಲು ಸೂಚಿಸಿದ್ದಾರೆ ಎನ್ನಲಾಗಿದೆ.

ಇದಲ್ಲದೆ, ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅಗತ್ಯ ಪ್ರಸ್ತಾವನೆ ಸಲ್ಲಿಸಿದಲ್ಲಿ ಡಿಸೆಂಬರ್‌ನಲ್ಲಿ ಅನುದಾನ ನೀಡುವ ಭರವಸೆ ನೀಡಿದ್ದಾರೆ ಎಂದು ಸಭೆಯಲ್ಲಿ ಭಾಗವಹಿಸಿದ ನಂತರ 'ಸುದ್ದಿಮೂಲ'ಕ್ಕೆ ತಿಳಿಸಿದ್ದಾರೆ.

ಈ ಎಲ್ಲಾ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಅಭಿವೃದ್ಧಿ ಮತ್ತು ಪಕ್ಷ ಸಂಘಟನೆ ಕುರಿತಂತೆ ನಡೆದ ಮೊದಲ ಸುತ್ತಿನ ಸಭೆ ಫಲಪ್ರದವಾದಂತೆ ಕಾಣುತ್ತಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ