Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಕಾಂಗ್ರೆಸ್ ಸೇರಿದ ಆರ್. ಅಶೋಕ್ ಆಪ್ತರು

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.15: ಬಿಬಿಎಂಪಿ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಆಪರೇಷನ್ ಹಸ್ತ ಪಾಲಿಕೆ ವ್ಯಾಪ್ತಿಯಲ್ಲಿಯೂ ಸದ್ದು ಮಾಡಿದೆ. ಬಿಜೆಪಿಯ ಬೆಂಗಳೂರು ಪ್ರಭಾವಿ ಮುಖಂಡ ಆರ್. ಅಶೋಕ್ ಅವರ ಆಪ್ತರಿಗೆ ಮತ್ತು ಜೆಡಿಎಸ್‌ನ ಹಳೆಯ ನಾಯಕರನ್ನು ಸೆಳೆಯಲು ಕಾಂಗ್ರೆಸ್ ಯಶಸ್ವಿಯಾಗಿದೆ.

ಮಹತ್ವದ ಬೆಳವಣಿಗೆಯಲ್ಲಿ ಬೆಂಗಳೂರಿನ ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ 15 ಕ್ಕೂ ಹೆಚ್ಚು ನಾಯಕರುಗಳು ಹಾಗೂ ಮಾಜಿ ಕಾರ್ಪೋರೇಟರ್ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದರು.

ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಉಪ ಮೇಯರ್ ಎಲ್ ಶ್ರೀನಿವಾಸ್, ಪ್ರಸಾದ್ ಬಾಬು, ಮಾಜಿ ತಾಲೂಕು ಪಂಚಾಯ್ತಿ ಸದಸ್ಯರಾದ ಆಂಜಿನಪ್ಪ, ಮಾಜಿ ಕಾರ್ಪೊರೇಟರ್ ಗಳಾದ ಶೋಭಾ ಆಂಜಿನಪ್ಪ, ಹೆಚ್. ನಾರಾಯಣ್, ಹೆಚ್. ಸುರೇಶ್, ವೆಂಕಟಸ್ವಾಮಿ ನಾಯ್ಡು, ಎಲ್.ಗೋವಿಂದ ರಾಜು, ಸುಪ್ರಿಯ ಶೇಖರ್, ಬಾಲಕೃಷ್ಣ, ಸುಗುಣ ಬಾಲಕೃಷ್ಣ, ಯು.ಕೃಷ್ಣಮೂರ್ತಿ, ನರಸಿಂಹ ನಾಯಕ್, ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಲಕ್ಷ್ಮಿ ಸುರೇಶ್, ಪವನ್, ರಂಗರಾಮೇಗೌಡ್ರು ಕಾಂಗ್ರೆಸ್ ಪಕ್ಷ ಸೇರಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಚಿವ ರಾಮಲಿಂಗಾರೆಡ್ಡಿ, ಮಾಜಿ ಶಾಸಕ ಸೌಮ್ಯ ರಾಮಲಿಂಗಾರೆಡ್ಡಿ ಅವರು ಶುಕ್ರವಾರ ಪಕ್ಷದ ಭಾವುಟ ನೀಡಿ ಈ ನಾಯಕರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಲ್ ಶ್ರೀನಿವಾಸ್ ಅವರು, “ನಾನು ಕಳೆದ 33 ವರ್ಷಗಳಿಂದ ಬಿಜೆಪಿಯಲ್ಲಿ ಸೇವೆ ಮಾಡಿದ್ದೇನೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಇಂದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇವೆ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ದೊಡ್ಡ ಶಕ್ತಿಯಾಗಿ ಕೆಲಸ ಮಾಡುತ್ತಿದ್ದವರು ಇಂದು ಕಾಂಗ್ರೆಸ್ ಪಕ್ಷ ಸೇರಿದ್ದೇವೆ. ನಾವು ಕಾಂಗ್ರೆಸ್ ಪಕ್ಷ ಸೇರುವ ಸುದ್ದಿ ಬರುತ್ತಿದ್ದಂತೆ ಕ್ಷೇತ್ರದ ನಾಯಕರು ನಮ್ಮೆಲ್ಲರ ಮನೆ ಬಾಗಿಲು ತಟ್ಟಿದ್ದಾರೆ. ಇಷ್ಟು ವರ್ಷಗಳ ಕಾಲ ನಾವು ಸೇವೆ ಮಾಡಿದ್ದು, ಅವರು ನಮ್ಮನ್ನು ಸರಿಯಾದ ರೀತಿ ನಡೆಸಿಕೊಂಡಿಲ್ಲ. ಮಾಜಿ ಪಾಲಿಕೆ ಸದಸ್ಯರಿಗೆ ಶಾಸಕರ ಕಚೇರಿಯಲ್ಲಿ ಕನಿಷ್ಠ ಗೌರವವನ್ನೂ ನೀಡುತ್ತಿರಲಿಲ್ಲ. ನಮ್ಮನ್ನು ಬಹಳ ಕೆಟ್ಟದಾಗಿ, ಹೀನಾ ಯಾವಾಗಿ ನಡೆಸಿಕೊಂಡರು. ನಮ್ಮನ್ನು ಬಳಸಿಕೊಂಡು ಬೆಳೆದವರು ನಮ್ಮನ್ನು ಕಾಲಕಾಸಕ್ಕಿಂತ ಕಡೆಯಾಗಿ ಕಂಡರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷದಿಂದ ಕಾಂಗ್ರೆಸ್ ಸೇರ್ಪಡೆಯಾದ ಪ್ರಸಾದ್ ಬಾಬು (ಕಬಡ್ಡಿ ಬಾಬು) ಮಾತನಾಡಿ, 'ಡಿ.ಕೆ. ಶಿವಕುಮಾರ್ ಅವರು 2003ರಲ್ಲೇ ನನಗೆ ಕಾಂಗ್ರೆಸ್ ಪಕ್ಷ ಸೇರುವಂತೆ ಆಹ್ವಾನ ನೀಡಿದ್ದರು. ಈಗ ನಾವೇ ಪಕ್ಷ ಸೇರುತ್ತಿದ್ದೇವೆ. ನನ್ನ ಮಗ ಪವನ್, ರವಿಕಿರಣ್, ಅಕ್ಬರ್ ಅಲಿ ಕೂಡ ಇಂದು ನಮ್ಮ ಜೊತೆ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಈ ಪಕ್ಷ ಸೇರ್ಪಡೆ ಇನ್ನು ಆರಂಭ. ಮುಂದೆ ಇನ್ನು ದೊಡ್ಡ ಸಂಖ್ಯೆಯಲ್ಲಿ ಪಕ್ಷ ಸೇರ್ಪಡೆ ಆಗಲಿದೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಾನು ಪಕ್ಷವನ್ನು ಬಲಪಡಿಸಲು ಶ್ರಮಿಸುತ್ತೇನೆ. ನನ್ನ ಜೀವನದಲ್ಲಿ ರಾಜಕೀಯದ ಕೊನೆ ದಿನಗಳನ್ನು ಶಿವಕುಮಾರ್ ಅವರ ಜತೆ ಕಳೆಯಲು ಬಯಸಿ ಪಕ್ಷ ಸೇರುತ್ತಿದ್ದೇನೆ. ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ಗ್ಯಾರಂಟಿ ಯೋಜನೆ ಜಾರಿ ಮಾಡುತ್ತಿದ್ದಾರೆ. ಆಮೂಲಕ ದೇಶದಲ್ಲಿ ಕಾಂಗ್ರೆಸ್ ಚಿತ್ರಣ ಬದಲಿಸುತ್ತಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಸುರೇಶ್ ಅವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸಲು ಶ್ರಮಿಸುತ್ತೇವೆ' ಎಂದು ತಿಳಿಸಿದರು.

ನಂತರ ಆಂಜನಪ್ಪ ಅವರು ಮಾತನಾಡಿ, ನಾವು 30 ವರ್ಷಗಳಿಂದ ಬಿಜೆಪಿಯಲ್ಲಿ ಸಕ್ರಿಯವಾಗಿ ಕೆಲಸ ಮಾಡಿಕೊಂಡು ಪದ್ಮನಾಭನಗರ ಕ್ಷೇತ್ರದಲ್ಲಿ ಎಲ್ಲಾ ಪಾಲಿಕೆ ಸದಸ್ಯರು ಅಶೋಕ್ ಅವರನ್ನು ಗೆಲ್ಲಿಸಿದ್ದೆವು. ಆದರೆ ಅವರು ನಮ್ಮನ್ನು ಕೀಳಾಗಿ ನಡೆಸಿಕೊಂಡರು. ಮುಂದಿನ ದಿನಗಳಲ್ಲಿ ಶಿವಕುಮಾರ್ ಅವರು ನಮಗೆ ಯಾವುದೇ ಕಾರ್ಯಕ್ರಮ ಅಥವಾ ಕೆಸ ಕೊಟ್ಟರೂ ಅವುಗಳನ್ನು ಪ್ರಾಮಾಣಿಕವಾಗಿ ಶ್ರಮಿಸಿ ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತೇವೆ ಎಂದು ತಿಳಿಸಿದರು.

ಬಾಲಕೃಷ್ಣ ಮಾತನಾಡಿ, ನಾನು ಹಾಗೂ ಇಲ್ಲಿರುವ ಕಾರ್ಯಕರ್ತರು ಬಹಳ ನೊಂದು ಈ ತೀರ್ಮಾನಕ್ಕೆ ಬಂದಿದ್ದೇವೆ. ನಾವು ಬೇರೆ ಪಕ್ಷದಲ್ಲಿ ಇದ್ದರೂ ಅವರು ನಮ್ಮನ್ನು ಬಹಳ ಗೌರವಪೂರ್ವಕವಾಗಿ, ಆತ್ಮೀಯವಾಗಿ ನಡೆಸಿಕೊಂಡಿದ್ದಾರೆ. ಅವರ ಪ್ರೀತಿ ವಿಶ್ವಾಸಕ್ಕೆ ನಾವು ಶರಣಾಗಿದ್ದೇವೆ. ಆದರೆ ಬಿಜೆಪಿಯಲ್ಲಿ ಒಬ್ಬರ ಬಗ್ಗೆ ಇನ್ನೊಬ್ಬರನ್ನು ಎತ್ತಿಕಟ್ಟುತ್ತಿದ್ದರು. ನಮಗೆ ಬೆನ್ನಿಗೆ ಚೂರಿ ಹಾಕಿತ್ತಿದ್ದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನಾನು ಹೇಗೆ ಬಿಜೆಪಿ ಪಕ್ಷವನ್ನು ಕಟ್ಟಿದೆನೋ ಅದೇ ರೀತಿ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟುತ್ತೇನೆ ಎಂದು ಇಂದು ವಾಗ್ದಾನ ನೀಡುತ್ತೇನೆ ಎಂದು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ