Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಗಮನ ಸೆಳೆದ ರಾಧೆ - ಕೃಷ್ಣ ವೇಷಭೂಷಣ ಸ್ಪರ್ಧೆ  

ಸುದ್ದಿಮೂಲ ವಾರ್ತೆ

ದೇವನಹಳ್ಳಿ, ಸೆ. 10 : ಮಕ್ಕಳ ಮನೋವಿಕಾಸಕ್ಕೆ ಹಾಗೂ ನಮ್ಮ ಪರಂಪರೆ ಮುಂದುವರೆಸುವ ನಿಟ್ಟಿನಲ್ಲಿ ಮಕ್ಕಳಿಗೆ ವೇಷ ಭೂಷಣ ಸ್ಪರ್ಧೆ ಆಯೋಜಿಸಲಾಗಿತ್ತು.

ಚೌಡೇಶ್ವರ ದೇವಾಲಯ ಅಭಿವೃದ್ಧಿ ಸಮಿತಿ ಸದಸ್ಯ ಪಿ.ಗಂಗಾಧರಪ್ಪ ಮಾತನಾಡಿ,

ಕೃಷ್ಣಜನ್ಮಾಷ್ಠಮಿ ಅಂಗವಾಗಿ ಚೌಡೇಶ್ವರಿ ದೇವಾಲಯದ ವತಿಯಿಂದ ಹಮ್ಮಿಕೊಂಡಿದ್ದ ವೇಷಭೂಷಣ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, ದೇವಾಲಯದಲ್ಲಿ 10 ವರ್ಷಗಳಿಂದ ವೇಷಭೂಷಣ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತದೆ. ಈ ವರ್ಷವು ಸಹ 65ಕ್ಕೂ ಹೆಚ್ಚು ಮಕ್ಕಳು ವಿವಿಧ ವೇಷಭೂಷಣಗಳನ್ನು ತೊಟ್ಟು ಬಂದಿದ್ದಾರೆ. ಭಾಗವಹಿಸಿದ ಎಲ್ಲಾ ಮಕ್ಕಳಿಗೂ ಸಮಾಧಾನಕರ ಬಹುಮಾನ ನೀಡಲಾಗಿದೆ ಎಂದರು.

ದೇವಾಲಯದಲ್ಲಿ ಪ್ರತಿ ವರ್ಷ ಶ್ರಾವಣ ಶನಿವಾರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಿಕೊಂಡು ಬಂದಿದ್ದು, ಭಕ್ತರು ಪೂಜ ಕೈಂಕರ್ಯಗಳನ್ನು ಭಾಗವಹಿಸುತ್ತಿದ್ದಾರೆ. ಇತಿಹಾಸ ಮತ್ತು ಪುರಾಣ ಕಥೆಗಳ ಪಾತ್ರಗಳನ್ನು ವೇಷ ಭೂಷಣ ಧರಿಸುವ ಮೂಲಕ ಪರಿಚಯಿಸಲು, ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರಗೆಡವಲು ವೇದಿಕೆ ಕಲ್ಪಿಸಿಕೊಟ್ಟಿರುವುದು ಉತ್ತಮ ಬೆಳವಣಿಗೆ. ಶಿಕ್ಷಣದ ಜತೆಗೆ ನಮ್ಮ ನಾಡಿನ ಪರಂಪರೆ, ವೈಚಾರಿಕ ಜ್ಞಾನದ ಅಗತ್ಯವಿದೆ. ಪ್ರತಿಯೊಂದು ಮಗುವಿ ನಲ್ಲಿಯೂ ಒಂದಲ್ಲ ಒಂದು ಪ್ರತಿಭೆ ಇರುತ್ತದೆ. ಅದನ್ನು ಹೊರ ಹಾಕಲು ಅವರಿಗೆ ಶಿಕ್ಷಕರು ಮತ್ತು ಪೋಷಕರ ಸಹಕಾರ ಮುಖ್ಯ. ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ಮೊದಲು ಪ್ರೇರಣೆ ನೀಡಬೇಕು ನಂತರ ಪ್ರತಿಭೆ ಹೊರಹೊಮ್ಮ್ಮಲಿದೆ ಎಂದರು.

ಕಾರ್ಯಕ್ರಮದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಸಿ.ಜಗನ್ನಾಥ್, ಸದಸ್ಯ ಗೋಪಿ, ಮುನಿಕೃಷ್ಣ, ಉಪಾಧ್ಯಕ್ಷೆ ಗೀತಾ ಶ್ರೀಧರ್ ಮೂರ್ತಿ, ಎಸ್.ಆರ್ ಮುನಿರಾಜು, ದೇವಾಲಯ ಅಭಿವೃದ್ಧಿ ಸಮಿತಿ ಸದಸ್ಯರಾದ ಜಯರಾಂ, ಶ್ರೀರಾಮಯ್ಯ ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ