Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬೆಳಗಾವಿ: ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಮಾತುಗಳು

ಬೆಳಗಾವಿ, ಮಾ. 20: ಕೆಲ ತಿಂಗಳ ಹಿಂದೆ ಕರ್ನಾಟಕದ ಮೂಲಕ ಭಾರತ ಜೋಡೋ ಯಾತ್ರೆ ಸಾಗಿತ್ತು. ಈ ಯಾತ್ರೆ ಸಂದರ್ಭದಲ್ಲಿ ಎಲ್ಲ ವರ್ಗದ ಜನ ಅಭೂತಪೂರ್ವ ಬೆಂಬಲ ನೀಡಿ ನಮಗೆ ಶಕ್ತಿ ತುಂಬಿದ್ದಿರಿ, ಯಾತ್ರೆ ಯಶಸ್ಸುಗೊಳಿಸಿದ್ದಿರ. ಅದಕ್ಕಾಗಿ ನಿಮಗೆ ಧನ್ಯವಾದಗಳು. ಇಡೀ ದೇಶಕ್ಕೆ ಈ ಯಾತ್ರೆ ಸಂದೇಶ ರವಾನಿಸಿತ್ತು. ಈ ದೇಶ ಎಲ್ಲರಿಗೂ ಸೇರಿದ್ದು, ಒಂದಿಬ್ಬರ ಸ್ವತ್ತ. ಅಧಾನಿ ಅವರ ಸ್ವತ್ತಲ್ಲ. ಈ ದೇಶ ರೈತರು, ಯುವಕರು, ಬಡವರಿಗೆ ಸೇರಿದ ದೇಶವಿದೆ.

ನಮ್ಮ ಯಾತ್ರೆಯಲ್ಲಿ ದೊಡ್ಡ ರಥ ಇರಲಿಲ್ಲ, ಎಲ್ಲರೂ ಸಮಾನರಾಗಿ ಹೆಜ್ಜೆ ಹಾಕುತ್ತಿದ್ದರು. ಈ ಯಾತ್ರೆ ಎಲ್ಲರಿಗೂ ಭಾತೃತ್ವ ಸಂದೇಶ ನೀಡಿತ್ತು. ರಾಜ್ಯದಲ್ಲಿ ಸಿಕ್ಕ ಬೆಂಬಲ ಎಲ್ಲೆಡೆ ಸಿಕ್ಕಿತ್ತು. ದ್ವೇಷದ ಮಾರುಕಟ್ಟೆಯಲ್ಲಿ ಲಕ್ಷಾಂತರ ಮಂದಿ ಪ್ರಿತಿಯ ಅಂಗಡಿ ತೆರೆದರು.

ಈ ಭಾಗದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ ಎಂದು ಯಾತ್ರೆ ಸಮಯದಲ್ಲಿ ಯುವಕರು ತಮ್ಮ ಸಮಸ್ಯೆ ಹೇಳಿಕೊಂಡಿದ್ದರು. ರಾಜ್ಯ ಸರ್ಕಾರ ಯುವಕರಿಗೆ ಉದ್ಯೋಗ ನೀಡಲು ವಿಫಲವಾಗಿದೆ ಎಂದರು. ಕೇವಲ ಯುವಕರು ಮಾತ್ರವಲ್ಲ ರಾಜ್ಯ ಸರ್ಕಾರ ದೇಶದ ಅತ್ಯಂತ ಭ್ರಷ್ಟ ಸರ್ಕಾರ 40% ಕಮಿಷನ್ ಸರ್ಕಾರ ಎಂದು ಎಲ್ಲ ವರ್ಗದವರು ಹೇಳಿದ್ದಾರೆ. ಗುತ್ತಿಗೆದಾರರ ಸಂಘ, ಶಾಲೆಗಳ ಸಂಸ್ಥೆ ಪ್ರಧಾನಿಗೆ ಪತ್ರ ಬರೆದು ಕರ್ನಾಟಕದಲ್ಲಿ 40 % ಕಮಿಷನ್ ಪಡೆಯಲಾಗುತ್ತಿದೆ ಎಂದು ದೂರು ನೀಡಿದ್ದರೂ ಪ್ರಧಾನಮಂತ್ರಿಗಳು ಇದಕ್ಕೆ ಉತ್ತರ ನೀಡಿಲ್ಲ.

ಮೈಸೂರು ಸ್ಯಾಂಡಲ್ ಸೋಪ್ ಕಾರ್ಪೊರೇಷನ್ ನಲ್ಲಿ ಹಗರಣ ನಡೆದು ಶಾಸಕನ ಪುತ್ರ ಸಿಕ್ಕಿಬಿದ್ದಾಗ 8 ಕೋಟಿ ಸಿಗುತ್ತದೆ. ಸರ್ಕಾರ ಅವರ ರಕ್ಷಣೆ ಮಾಡುತ್ತದೆ. ಪಿಎಸ್ಐ ನೇಮಕಾತಿ, ಸಹಾಯಕ ಪ್ರಾದ್ಯಾಪಕ, ಸಹಾಯಕ ಇಂಜಿನಿಯರ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ. ಈ ಎಲ್ಲ ಆರೋಪ ಲಕ್ಷಾಂತರ ಯುವಕರ ದೂರಾಗಿದೆ.

ದೆಹಲಿಯ ಸಂಸತ್ತಿನಲ್ಲಿ ನಾನು ಅದಾನಿ ಅವರ ಬಗ್ಗೆ ಮಾತನಾಡುತ್ತಾ ದೇಶದ ಎಲ್ಲ ವ್ಯಾಪಾರ ವ್ಯವಹಾರ ಅದಾನಿ ಅವರಿಗೆ ನೀಡಲಾಗುತ್ತಿದೆ. ಬಂದರು, ವಿಮಾನ ನಿಲ್ದಾಣ, ರಸ್ತೆ ಎಲ್ಲವೂ ಅವರಿಗೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕೂಡ ಭ್ರಷ್ಟಾಚಾರ ಮಾಡುತ್ತಿದೆ.

ಯುವಕರ ಸಂಕಷ್ಟಕ್ಕೆ ಸ್ಪಂದಿಸಲು ಕಾಂಗ್ರೆಸ್ ಪಕ್ಷ ಪ್ರತಿ ಪಧವಿಧರ ನಿರುದ್ಯೋಗಿ ಯುವಕರಿಗೆ ಮಾಸಿಕ 3 ಸಾವಿರ, ಡಿಪ್ಲಮೋ ಮಾಡಿರುವ ಯುವಕರಿಗೆ 1500 ರೂ.ಗಳನ್ನು 2 ವರ್ಷಗಳ ಕಾಲ ನೀಡಲಾಗುವುದು. 10 ಲಕ್ಷ ಯುವಕರಿಗೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉದ್ಯೋಗ ನೀಡಲಿದೆ. ಇನ್ನು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಖಾಲಿ ಇರುವ 2.50 ಲಕ್ಷ ಉದ್ಯೋಗವನ್ನು ಭರ್ತಿ ಮಾಡಲಾಗುವುದು.

ಯಾತ್ರೆ ಸಮಯದಲ್ಲಿ ಮಹಿಳೆಯರು ತಮ್ಮ ಕಷ್ಟ ಹೇಳಿಕೊಂಡಿದ್ದರು. ಅವರ ಕಷ್ಟಕ್ಕೆ ಪರಿಹಾರ ನೀಡಲು ಗೃಹಲಕ್ಷ್ಮಿ ಯೋಜನೆ ಮೂಲಕ ಮನೆಯೊಡತಿಗೆ 2 ಸಾವಿರ ಪ್ರೋತ್ಸಾಹ ಧನ, ಅನ್ನ ಭಾಗ್ಯ ಯೋಜನೆ ಮೂಲಕ ಬಡ ಕುಟುಂಬ ಸದಸ್ಯರಿಗೆ ತಲಾ 10 ಕೆ.ಜಿ ಅಕ್ಕಿ ಉಚಿತವಾಗಿ ನೀಡಲಾಗುವುದು. ಗೃಹಜ್ಯೋತಿ ಯೋಜನೆ ಮೂಲಕ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ.

ಇನ್ನು ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.3ರಿಂದ ಶೇ.7ಕ್ಕೆ ಏರಿಸುವ ವಿಚಾರವಾಗಿ ಸರ್ಕಾರ ಪೂರ್ಣಗೊಳಿಸಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣೆ ಎದುರಿಸಿ ಪ್ರಚಂಡ ಜಯಗಳಿಸಿ ಬಿಜೆಪಿ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವಂತೆ ಮಾಡಬೇಕು. ರಾಜ್ಯ ಚುನಾವಣೆ ಸಮಯದಲ್ಲಿ ನೀವು ಯಾವ ಜಿಲ್ಲೆಗೆ ಹೇಳುತ್ತೀರೋ ಅಲ್ಲಿಗೆ ನಾನು ಬರಲು ಸಿದ್ಧ. ನಾವೆಲ್ಲರೂ ಸೇರಿ ಬಿಜೆಪಿಯನ್ನು ಮಣಿಸೋಣ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ