Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕನಕದಾಸ ಜಯಂತಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ : ರವಿಕುಮಾರ್

ಸುದ್ದಿಮೂಲ ವಾರ್ತೆ

ದೇವನಹಳ್ಳಿ,ನ.23: ಇದೇ ತಿಂಗಳು 30 ರಂದು ನಡೆಯಲ್ಲಿರುವ ದಾಸಶ್ರೇಷ್ಠ ಭಕ್ತ ಕನಕದಾಸರ ಜಯಂತೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನ ಕುರುಬ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಎಂದು ದೇವನಹಳ್ಳಿ ತಾಲೂಕು ಕುರುಬ ಸಂಘದ ಅಧ್ಯಕ್ಷ ರವಿಕುಮಾರ್ ತಿಳಿಸಿದ್ದಾರೆ.

ಪಟ್ಟಣದ ಮರಳುಬಾಗಿಲಿನಲ್ಲಿರುವ ಕನಕ ಭವನದಲ್ಲಿ ಕನಕದಾಸರ ಜಯಂತಿ ಆಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ಕೊರೋನದಿಂದಾಗಿ ಜಯಂತಿಯನ್ನು ಸರಳವಾಗಿ ಆಚರಿಸಿದ್ದೇವೆ. ಈ ಬಾರಿ ಸಮುದಾಯದವರ ಎಲ್ಲರ ಸಹಕಾರದಿಂದ ವಿಜೃಂಭಣೆಯಿಂದ ಆಚರಿಸೋಣ. ಪ್ರತಿ ಹೋಬಳಿಯ ಸಮುದಾಯದ ಮನೆಗಳಿಗೆ ಕರಪತ್ರಗಳನ್ನು ನೀಡಿ ಎಲ್ಲರೂ ಕಡ್ಡಾಯವಾಗಿ ಕಾರ್ಯಕ್ರಮವಕ್ಕೆ ಭಾಗವಹಿಸುವಂತೆ ಆಯಾ ಹೋಬಳಿ ಮುಖಂಡರು ಜವಾಬ್ದಾರಿ ತೆಗೆದುಕೊಳ್ಳಬೇಕು. ಹೆಚ್ಚಿನ ಜನರನ್ನು ಕರೆತರಬೇಕು ಎಂದರು.

ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ರಮೇಶ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವು ಸಹ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾಂರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳು ನ.27ರ ಒಳಗೆ ಅರ್ಜಿಗಳನ್ನು ಸಂಘದ ಕಚೇರಿಗೆ ಸಲ್ಲಿಸುವಂತೆ ತಿಳಿಸಿದ್ದಾರೆ. ನ.30 ರಂದು ಪಟ್ಟಣದ ಬೈಪಾಸ್‌ರಸ್ತೆಯಲ್ಲಿರುವ ಕನಕದಾಸರ ವೃತ್ತದಿಂದ ಪಟ್ಟಣದ ರಾಜಬೀದಿಗಳಲ್ಲಿ ಹೂವಿನ ಪಲ್ಲಕ್ಕಿಯಲ್ಲಿ ಕನಕ ದಾಸರ ಮೆರವಣಿಗೆ ಜಾನಪದ ನೃತ್ಯ ಮತ್ತು ವಾದ್ಯ ಹಾಗೂ ಕಲಾತಂಡಗಳೊಂದಿಗೆ ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

ಪುರಸಭೆ ಸದಸ್ಯ ಗುಟ್ಟಳ್ಳಿ ರವಿ ಮಾತನಾಡಿ ಪ್ರತಿ ಪಂಚಾಯತಿಯಿಂದ ಪಲ್ಲಕ್ಕಿ ವ್ಯವಸ್ಥೆ ಮಾಡುವಂತೆ ಈಗಾಗಲೇ ಆ ಭಾಗದ ಮುಖಂಡರಿಗೆ ಸೂಚಿಸಲಾಗಿದೆ. ಪ್ರತಿ ಗ್ರಾಮಗಳಿಂದ ನಮ್ಮ ಕುಲಬಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಂಘಟಿತರಾಗಬೇಕು ಪ್ರತಿಯೊಬ್ಬರಲ್ಲೂ ಸಮುದಾಯದ ಬಗ್ಗೆ ಗೌರವವಿರಬೇಕು, ಎಲ್ಲರೂ ಜವಬ್ದಾರಿಯುತವಾಗಿ ಅವರವರ ಕೆಲಸ ನಿರ್ವಹಿಸಿದರೆ ಕಾರ್ಯಕ್ರಮ ಯಶಸ್ವಿಯಾಗಲಿದೆ ಎಂದರು.

ಇದೆ ವೇಳೆ ದೇವನಹಳ್ಳಿ ತಾಲೂಕು ಕುರುಬ ಸಂಘದ ಖಜಾಂಚಿ ವೇಣುಗೋಪಾಲ್, ಜಾಲಿಗೆ ಗ್ರಾಪಂ ಸದಸ್ಯ ಬೆಟ್ಟೇನಹಳ್ಳಿ ಮಹೇಶ್, ಕೃಷ್ಣಮೂರ್ತಿ, ಮಹಿಳಾ ಘಟಕದ ಅಧ್ಯಕ್ಷೆ ಶಶಿಕಲಾ, ಜಿಲ್ಲಾ ಸಂಘದ ನಿರ್ದೇಶಕಿ ಮಂಜುಳಾ, ಯುವ ಘಟಕದ ಅಧ್ಯಕ್ಷ ಹರೀಶ್, ಪುರಸಭೆ ಸದಸ್ಯ ರವಿಕುಮಾರ್, ಭಾಗ್ಯರಮೇಶ್, ಮಾದವಿ ಕಾಂತರಾಜು, ಮುನಿರಾಜು (ಬರ್ಮ) ಯುವಕರ ಸಂಘ, ಮಹಿಳಾ ಸಂಘದ ಪದಾಧಿಕಾರಿಗಳು ಸಮುದಾಯದ ಮುಖಂಡರು ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ