Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಂಗಳೂರಿನ ಹಲವೆಡೆ ಸಂಭ್ರಮದಿಂದ ರಾಯರ ಆರಾಧನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.31: ಮಂತ್ರಾಲಯ ಶ್ರೀ ಗುರು ರಾಘವೇಂದ್ರರ 352ನೇ ಆರಾಧನೆಯನ್ನು ಬೆಂಗಳೂರಿನ ವಿವಿಧ ಭಾಗಗಳಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನಗಳಲ್ಲಿ ಆಚರಿಸಲಾಯಿತು.



ಬುಲ್‌ ಟೆಂಪಲ್ ರಸ್ತೆಯ ನವ ಮಂತ್ರಾಲಯ ಮಂದಿರ, ಮಲ್ಲೇಶ್ವರದ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನ, ಮಲ್ಲೇಶ್ವರ ಸ್ವಿಮ್ಮಿಂಗ್ ಪೂಲ್‌ನ ಶ್ರೀ ರಾಘವೇಂದ್ರ ಸೇವಾ ಸಮಿತಿ, ಶೇಷಾದ್ರಿಪುರಂನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ, ರಾಜಕುಮಾರ್ ರಸ್ತೆಯ ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನ ಸೇರಿದಂತೆ ನಗರದ ಹಲವೆಡೆ ಸಂಭ್ರಮದಿಂದ ರಾಯರ ಆರಾಧನೆ ಮಾಡಲಾಯಿತು.

ಮೂರು ದಿನಗಳ ಕಾಲ ಮತ್ತು ಕೆಲವು ದೇವಸ್ಥಾನಗಳಲ್ಲಿ ಐದು ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ರಾಯರ ಆರಾಧನೆ ನಿಮಿತ್ತ ದೇವಸ್ಥಾನಗಳಲ್ಲಿ ವಿಶೇಷ ಅಲಂಕಾರ, ಬೃಂದಾವನಕ್ಕೆ ವಿಶೇಷ ಪೂಜೆಗಳನ್ನು ಆಯೋಜಿಸಲಾಗಿತ್ತು. ವಿದ್ಯುತ್ ದೀಪಾಲಂಕಾರಗಳಿಂದ ದೇವಸ್ಥಾನಗಳು ಕಂಗೊಳಿಸುತ್ತಿವೆ. ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ದರ್ಶನ ಬಳಿಕ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ವಿವಿಧ ದೇವಸ್ಥಾನಗಳಲ್ಲಿ ಸುದ್ದಿಮೂಲ ವಿಶೇಷ ಪುರವಣಿ ಬಿಡುಗಡೆ

ಮಂತ್ರಾಲಯ ರಾಯರ ಆರಾಧನೆ ನಿಮಿತ್ತ ಸುದ್ದಿಮೂಲ ಪತ್ರಿಕೆ ಹೊರತಂದಿರುವ ವಿಶೇಷ ಪುರವಣಿಯನ್ನು ವಿವಿಧ ದೇವಾಲಯಗಳ ಮುಖ್ಯಸ್ಥರು ಬಿಡುಗಡೆ ಮಾಡಿ, ಪತ್ರಿಕೆಗೆ ಶುಭ ಹಾರೈಸಿದರು.

ಮಲ್ಲೇಶ್ವರದ ಶ್ರೀ ರಾಘವೇಂದ್ರ ಸ್ವಾಮಿಗಳ ದೇವಸ್ಥಾನದಲ್ಲಿ ದೇವಾಲಯದ ಮುಖ್ಯಸ್ಥ ಶ್ರೀಕಾಂತ್ ಆಚಾರ್ ವಿಶೇಷ ಪುರವಣಿ ಬಿಡುಗಡೆ ಮಾಡಿ ಹಾರೈಸಿದರು.

ಮಲ್ಲೇಶ್ವರ ಸ್ವಿಮ್ಮಿಂಗ್ ಪೂಲ್‌ನ ಶ್ರೀ ರಾಘವೇಂದ್ರ ಸೇವಾ ಸಮಿತಿಯ ಮುಖ್ಯಸ್ಥ ಎಚ್. ನರಹರಿರಾವ್, ಸುದ್ದಿಮೂಲ ಪತ್ರಿಗಳನ್ನು ಬಿಡುಗಡೆ ಮಾಡಿ ಸಮಿತಿ ಸದಸ್ಯರಿಗೆ ವಿತರಿಸಿದರು.

ಶೇಷಾದ್ರಿಪುರಂನ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದಲ್ಲಿ ವಿಚಾರಣಾಕರ್ತ ಸುಬ್ಬನರಸಿಂಹ (ಸುಬ್ಬಣ್ಣ) ವಿಶೇಷ ಪುರವಣಿ ಬಿಡುಗಡೆ ಮಾಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ