Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತುಮಕೂರಿನಲ್ಲಿ 626 ಕೆರೆಗಳ ಪುನಶ್ಚೇತನ

ಸುದ್ದಿಮೂಲ ವಾರ್ತೆ

ತುಮಕೂರು,ಅ.4: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಟ್ರಸ್ಟ್ ಮೂಲಕ ರಾಜ್ಯದಲ್ಲಿ ಈಗಾಗಲೇ ಸುಮಾರು 626 ಕೆರೆಗಳನ್ನು ಪುನಶ್ಚೇತನ ಮಾಡುವುದರ ಜೊತೆಗೆ ಜನಸಮುದಾಯವನ್ನು ಒಗ್ಗೂಡಿಸಿ ಕೆರೆಗಳ ಅಭಿವೃದ್ದಿ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದರು.

ನಗರದ ಉಪ್ಪಾರಹಳ್ಳಿ ಕೆರೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಹಾಗೂ ಉಪ್ಪಾರಹಳ್ಳಿ ಕೆರೆ ಅಭಿವೃದ್ದಿ ಸಮಿತಿಯ ಸಹಭಾಗಿತ್ವದಲ್ಲಿ ‘ನಮ್ಮೂರ ನಮ್ಮ ಕೆರೆ’ ಕಾರ್ಯಕ್ರಮದಡಿ ಪುನಶ್ಚೇತನಗೊಳಿಸಲಾದ 427ನೇ ಕೆರೆಯ ನಾಮಫಲಕ ಅನಾವರಣ ಹಾಗೂ ಕೆರೆ ಹಸ್ತಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಪೂರ್ವಜರು ನೀರನ್ನು ತಡೆದು ಸಂರಕ್ಷಣೆ ಮಾಡುವುದಕ್ಕಾಗಿ ಹಲವಾರು ಕೆರೆಗಳನ್ನು ನಿರ್ಮಿಸಿದ್ದರು.

ಆದ್ದರಿಂದ ಅಂರ್ತಜಲ ಮಟ್ಟ ಹೆಚ್ಚುತ್ತಿದ್ದರಿಂದ 20 ಅಡಿ ಆಳಕ್ಕೆ ಕೊರೆದಲ್ಲಿ ನೀರು ಸಿಗುತಿತ್ತು, ಆದರೆ ಇಂದು ನಗರಗಳು ಆಧುನೀಕರಣಕ್ಕೊಳಗಾಗಿ ಕೆರೆಗಳನ್ನು ಮುಚ್ಚಿ ಲೇಔಟ್‌ಗಳನ್ನು ಮಾಡುತ್ತಿರುವ ಪರಿಣಾಮ ಒಂದು ಸಾವಿರ ಆಳ ಬೋರ್‌ವೆಲ್ ಕೊರೆದರು ಕೂಡಾ ನೀರು ಸಿಗುತ್ತಿಲ್ಲ ಎಂದು ಹೇಳಿದರು.

ಕೆರೆಗಳ ಜಾಗವನ್ನು ಯಾರಾದರೂ ಒತ್ತುವರಿ ಮಾಡಿಕೊಂಡಿದ್ದರೆ ಅದನ್ನು ತೆರವುಗೊಳಿಸಿ ರಕ್ಷಣೆ ಮಾಡುವುದಕ್ಕೆ ಸೂಕ್ತ ಕ್ರಮ ವಹಿಸಬೇಕೆಂದು ಪಾಲಿಕೆ ಆಯುಕ್ತರಿಗೆ ಹಾಗೂ ಮೇಯರ್ ಅವರಿಗೆ ಸೂಚನೆ ನೀಡಿದರು.

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆಡಳಿತ ಅವಧಿಯಲ್ಲಿ ರಾಜ್ಯದಲ್ಲಿರುವ ಕೆರೆಗಳಲ್ಲಿ ಹೂಳೆತ್ತಿ ಸಂರಕ್ಷಣೆ ಮಾಡುವ ಉದ್ದೇಶದಿಂದ ವಿಶ್ವಸಂಸ್ಥೆಯಿಂದ ಅನುದಾನವನ್ನು ಪಡೆದು, ಹೂಳೆತ್ತುವ ಯೋಜನೆಯನ್ನು ಪ್ರಾರಂಭಿಸಲಾಯಿತು ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಿದರು.

ಜಿಲ್ಲೆಯಲ್ಲಿ ಈಗಾಗಲೇ ಜೆಜೆಎಂ ಯೋಜನೆಯ ಕಾಮಗಾರಿಗಳು ನಡೆಯುತ್ತಿವೆ. ಈ ಯೋಜನೆಯ ಮೂಲಕ ಮನೆ ಮನೆಗಳಿಗೆ ನಳ ಸಂಪರ್ಕವನ್ನು ಕಲ್ಪಿಸುವುದರೊಂದಿಗೆ ಶುದ್ದ ಕುಡಿಯುವ ನೀರನ್ನು ಕೊಡುವುದು ಸರ್ಕಾರದ ಆದ್ಯತೆಯಾಗಿದೆ ಎಂದು ತಿಳಿಸಿದರು.

ತುಮಕೂರು ನಗರಕ್ಕೆ ಬರುವ ಜನರಿಗೆ ಆಕರ್ಷಣಿಯವಾಗಿ ಕಾಣುವ ರೀತಿಯಲ್ಲಿ ನಗರವನ್ನು ಸ್ವಚ್ಚವಾಗಿಡುವುದಕ್ಕೆ ಪಾಲಿಕೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಬಿ. ಜ್ಯೋತಿಗಣೇಶ್ಅವರು ಮಾತನಾಡಿ, ಶುದ್ದ ಗಂಗಾ ಹೆಸರಿನಲ್ಲಿ ಕುಡಿಯುವ ನೀರಿನ ಪ್ಲಾಂಟ್‌ಗಳನ್ನು ಉತ್ತಮವಾಗಿ ನಿರ್ವಹಣಾ ಮಾಡುತ್ತಿದ್ದಾರೆ.

ಆದ್ದರಿಂದ ಇನ್ನೂ ಹೆಚ್ಚಾಗಿ ಶುದ್ದ ನೀರಿನ ಘಟಕಗಳನ್ನು ಸ್ಥಾಪಿಸಲು ಶಾಸಕರ ಅನುದಾನ ಕೊಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಾಲಿಕೆ ಮೇಯರ್ ಪ್ರಭಾವತಿ, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್‌ಕೆ.ವಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀನಾಭಿವೃದ್ದಿ ಯೋಜನೆಯ ಪ್ರಾದೇಶಿಕ ನಿರ್ದೇಶಕಶೀನಪ್ಪ, ಜಿಲ್ಲಾ ನಿರ್ದೇಶಕಿ ದಯಾಶೀಲಾ, ಯೋಜನಾಧಿಕಾರಿಗಳಾದ  ಸುನೀತಾಪ್ರಭು, ಅರುಣ್‌ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

 

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ