Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಪತ್ರಕರ್ತೆಯರಿಗೆ ಆದ್ಯತೆ ನೀಡುವಂತೆ ಸಿಎಂಗೆ ಮನವಿ 

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು 31 : ಪತ್ರಕರ್ತೆಯರ ವೃತ್ತಿಗೆ ಪೂರಕವಾದ ಬೆಳವಣಿಗೆಯಲ್ಲಿ ಅಭಿವೃದ್ಧಿ ಸಾಧಿಸಲು ಸರ್ಕಾರ ಪ್ರೋತ್ಸಾಹ ನೀಡಬೇಕೆಂದು ಕರ್ನಾಟಕ ಪತ್ರಕರ್ತೆಯರ ಸಂಘವು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.

ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಸಂಘದ ಪದಾಧಿಕಾರಿಗಳು, ರಾಜ್ಯದಾದ್ಯಂತ ಮುದ್ರಣ ಮತ್ತು ದೃಶ್ಯ ಮಾಧ್ಯಮದಲ್ಲಿ ನೂರಾರು ಮಹಿಳೆಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ ಮಹಿಳೆಯರ ಸಂಖ್ಯೆ ಹಿಂದಿಗಿಂತಲೂ ಹೆಚ್ಚಾಗಿದೆ. ಆದರೆ, ಪತ್ರಕರ್ತೆಯರಿಗೆ ಸಿಗಬೇಕಾದ ಸೂಕ್ತ ಸ್ಥಾನಮಾನ ದೊರೆತಿಲ್ಲ. ಕರ್ನಾಟಕ ಮಾಧ್ಯಮ ಆಕಾಡೆಮಿ ಸೇರಿದಂತೆ ವಿವಿಧ ಅಕಾಡೆಮಿಗಳಲ್ಲಿ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಿಸುವಾಗ ಮಹಿಳಾ ಪ್ರಾತಿನಿಧ್ಯಕ್ಕೆ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಿವಿಧ ಸಮಿತಿಗಳು ಹಾಗೂ ಮಾಧ್ಯಮಕ್ಕೆ ಸಂಬಂಧಿಸಿದ ಆಯ್ಕೆ ಸಮಿತಿಗಳಲ್ಲಿ ಕನಿಷ್ಠ ಇಬ್ಬರು ಪತ್ರಕರ್ತೆಯರನ್ನು ನೇಮಿಸಬೇಕು. ಸಂಘಕ್ಕೆ ಕಾರ್ಯಚಟುವಟಿಕೆಗಳಿಗೆ ಅಗತ್ಯ ಕಟ್ಟಡ ಅಥವಾ ನಿವೇಶನ ಒದಗಿಸುವುದು, ಪತ್ರಕರ್ತೆಯರಿಗೆ ಮಾಸಾಶನ ನೀಡುವಲ್ಲಿ ವಯಸ್ಸಿನ ಮಿತಿ ಕಡಿಮೆ ಮಾಡುವುದು, ಆರೋಗ್ಯ ವಿಮೆ ಸೇರಿದಂತೆ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮನವಿ ಪತ್ರವನ್ನು ಪರಿಶೀಲಿಸಿ, ಶೀಘ್ರ ಹಾಗೂ ಸೂಕ್ತ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಂಘದ ಅಧ್ಯಕ್ಷೆ ಪದ್ಮಾ ಶಿವಮೊಗ್ಗ, ಪ್ರಧಾನ ಕಾರ್ಯದರ್ಶಿ ಮಂಜುಶ್ರೀ ಕಡಕೋಳ, ಉಪಾಧ್ಯಕ್ಷೆ ವಾಣಿಶ್ರೀ, ಮಾಜಿ ಅಧ್ಯಕ್ಷೆ ಶಾಂತಲಾ ಧರ್ಮರಾಜ್, ಪದಾಧಿಕಾರಿಗಳಾದ ಚೇತನಾ ಬೆಳಗೆರೆ, ಶ್ರೀಜಾ ವಿ.ಎನ್., ಶಾಂತ ತಮ್ಮಯ್ಯ, ಶೀಲಾ ಸಿ. ಶೆಟ್ಟಿ, ಗೊರೂರು ಪಂಕಜ, ಹಲೀಮತ್ ಸಾದಿಯಾ ಹಾಗೂ ಮೇರಿ ಜೋಸೆಫ್ ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ