Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಅತಿಥಿ ಉಪನ್ಯಾಕರಿಗೂ ಮೀಸಲಾತಿ ನೀಡಬೇಕು

 

ಸುದ್ದಿಮೂಲವಾರ್ತೆ

ಕೊಪ್ಪಳ,ಸೆ.01:ರಾಜ್ಯದಲ್ಲಿ ಸರಕಾರಿ ಪದವಿ ಕಾಲೇಜಿನಲ್ಲಿ ಕಾಯಂ ಉಪನ್ಯಾಸಕರಿಗಿಂತ ಅಧಿಕವಾಗಿ ಅತಿಥಿ ಉಪನ್ಯಾಸಕರ ಕೆಲಸ ಮಾಡುತ್ತಿದ್ದಾರೆ. ಈಗ ರಾಜ್ಯವ್ಯಾಪಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆದರೆ ಇದರಲ್ಲಿ ತೀರಾ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂವಿದಾನದಲ್ಲಿ ನೀಡಿರುವ 371 ಜೆ ಅನ್ವಯ ಮೀಸಲಾತಿ ನೀಡಿಲ್ಲ. ರಾಜ್ಯ ವ್ಯಾಪಿ ನೇಮಕಾತಿಯಲ್ಲಿ ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಭಾಗದ ಹೊರಗಿನವರು ಸಹ ಬಂದು ಕೆಲಸ ಮಾಡುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗುತ್ತದೆ. ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಈ ಭಾಗದವರಿಗೆ ಮೀಸಲಾತಿ ನೀಡಬೇಕೆಂದು ಇಲ್ಲಿ ಪದವಿಧರರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿರುವ ಸರಕಾರಿ ಪದವಿ ಕಾಲೇಜುಗಳಲ್ಲಿ ಆರು ಸಾವಿರ ಕಾಯಂ ಉಪನ್ಯಾಸಕರಿದ್ದರೆ. 12 ಸಾವಿರಕ್ಕಿಂತ ಅಧಿಕ ಜನರು ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ.

2021 ರಲ್ಲಿ ಅತಿಥಿ ಉಪನ್ಯಾಸಕರು ವೇತನ ಹೆಚ್ಚಳ ಹಾಗು ಕಾಯಂಯಾತಿಗಾಗಿ ಪ್ರತಿಭಟನೆ ನಡೆಸಿತು, ಈ ಸಂದರ್ಭದಲ್ಲಿ ಅಂದಿನ ಸರಕಾರವು ಅತಿಥಿ ಉಪನ್ಯಾಸಕರಿಗೆ ಪ್ರತಿ ತಿಂಗಳಿಗೆ 32 ಸಾವಿರ ರೂಪಾಯಿಯವರೆಗೂ ಗೌರವ ಧನ ನೀಡಬೇಕು. ಅವರು ವಾರದಲ್ಲಿ 15 ತಾಸು ಕೆಲಸ ಮಾಡಬೇಕು ಎಂಬ ನಿಯಮ ಮಾಡಿತ್ತು.

ಇದೇ ವೇಳೆ ಅತಿಥಿ ಉಪನ್ಯಾಸಕರನ್ನು ಪ್ರತಿ ವರ್ಷ ರಾಜ್ಯ ವ್ಯಾಪಿ ಅವರ ಅರ್ಹತೆ. ಮೆರಿಟ್ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಈ ಮಧ್ಯೆ ಈ ವರ್ಷ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಆ 25 ರಂದು ಅಧಿಸೂಚನೆ ಹೊರಡಿಸಿದೆ. ಸೆಪ್ಟಂಬರ್ 2 ರೊಳಗಾಗಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕು. ಈ ಅರ್ಜಿಗಳನ್ನು ಪರಿಶೀಲಿಸಿ ಸೆಪ್ಟಂಬರ್ 16 ರೊಳಗಾಗಿ ನೇಮಕಾತಿ ಪೂರ್ಣಗೊಳಿಸಲು ಅಧಿಸೂಚನೆ ಹೊರಡಿಸಿದೆ.

ಈ ನೇಮಕಾತಿಯ ಅಧಿಸೂಚನೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದವರಿಗೆ ಪ್ರತ್ಯೇಕ ಮೀಸಲಾತಿ ನೀಡಿಲ್ಲ. 2013 ರಲ್ಲಿ ಸಂವಿಧಾನವೇ ಈ ಭಾಗಕ್ಕೆ ವಿಶೇಷ ಸ್ಥಾನಮಾನವಾಗಿರುವ 371 ಜೆ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ತೀರಾ ಹಿಂದುಳಿದಿರವ ಈ ಪ್ರದೇಶದ ನೇಮಕಾತಿ. ಶೈಕ್ಷಣಿಕವಾಗಿ ಶೇ 80 ರಷ್ಟು ಮೀಸಲಾತಿ ನೀಡಲು ಸೂಚಿಸಿದೆ. ಆದರೆ ಈಗ ಹೊರಡಿಸಿರುವ ಅಧಿಸೂಚನೆಯಲ್ಲಿ ಈ ಭಾಗದವರಿಗೆ ಮೀಸಲಾತಿ ನೀಡಿಲ್ಲ ಸರಕಾರ ಈ ಭಾಗದವರಿಗೆ ಮೀಸಲಾತಿ ನೀಡಬೇಕೆಂದು ಅತಿಥಿ ಉಪನ್ಯಾಸಕರಾಗುವವರು ಆಗ್ರಹಿಸುತ್ತಿದ್ದಾರೆ.
ಕಳೆದ ವರ್ಷ ಕೊಪ್ಪಳ ಜಿಲ್ಲೆಯಲ್ಲಿ 365 ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದರು ಅದರಲ್ಲಿ ಶೇ 65 ಜನರು ಈ ಭಾಗದವರು ಅಲ್ಲದವರು ಕೆಲಸ ಮಾಡುತ್ತಿದ್ದರು. ಉಡುಪಿ, ಶಿವಮೊಗ್ಗ, ಗದಗ. ಧಾರವಾಡದಿಂದ ಬಂದು ಇಲ್ಲಿ ಕೆಲಸ ಮಾಡುತ್ತಿದ್ದರು. ಈಗಲೂ ಸಹ ನೇಮಕಾತಿಯಲ್ಲಿ ಮತ್ತೆ ಈ ಭಾಗದ ಅಲ್ಲದವರು ನೇಮಕವಾಗುವ ಸಾಧ್ಯತೆ ಇದೆ.
ಶೈಕ್ಷಣಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದವರು ರಾಜ್ಯದ ಇತರರೊಂದಿಗೆ ಸ್ಪರ್ಧೆ ಮಾಡುವುದು ಕಷ್ಟವಾಗುತ್ತಿದೆ. ಅದೇ ಕಾರಣಕ್ಕೆ ನಮಗೆ ಪ್ರತ್ಯೇಕ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ