Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಕಮಿಷನ್ ಆಸೆಗಾಗಿ ವಿದ್ಯುತ್ ಖರೀದಿಸುತ್ತಿಲ್ಲ- ಸಂಗಣ್ಣ

ಸುದ್ದಿಮೂಲವಾರ್ತೆ

ಕೊಪ್ಪಳ ಅ 17:ಸ್ಲಗ್: ಬಿಜೆಪಿ ಪ್ರತಿಭಟನೆ ರಾಜ್ಯದ ಕೂಡ್ಗಿ ವಿದ್ಯುತ್ ಸ್ಥಾವರದಿಂದ ವಿದ್ಯುತ್ ಖರೀದಿಸಲು ರಾಜ್ಯ ಸರಕಾರ ಸಿದ್ದವಿಲ್ಲ. ಯಾಕಂದರೆ ಇಲ್ಲಿ ವಿದ್ಯುತ್ ಖರೀದಿಸಿದರೆ ಕಮಿಷನ್ ಸಿಗುವುದಿಲ್ಲ ಎಂಬ ಕಾರಣಕ್ಕೆ ರೈತರನ್ನು ಕೊಲೆ ಮಾಡುತ್ತಿದ್ದಾರೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.

ಅವರು ಇಂದು ಕೊಪ್ಪಳದಲ್ಲಿ ಕಾಂಗ್ರೆಸ್ ಸರಕಾರದ ವಿರುದ್ದ ಹೋರಾಟ ಸಂದರ್ಭದಲ್ಲಿ ಭಾಷಣ ಮಾಡಿದರು.ಯಡಿಯೂರಪ್ಪ ಸರಕಾರದಲ್ಲಿಕ ಕೂಡ್ಗಿ ವಿದ್ಯುತ್ ಸ್ಥಾವರ ಸ್ಥಾಪನೆಯಾಗಿದೆ.ಇಲ್ಲಿ 1065 ಮೇಗಾ ವ್ಯಾಟ ವಿದ್ಯುತ್ ಸರಬರಾಜಿಗೆ ಅವಕಾಶವಿದೆ. ಪ್ರತಿ ಯೂನಿಟ್ 5.10 ರೂಪಾಯಿ ಕೊಟ್ಟು ಖರೀದಿಸಬೇಕು ಎಂದರು.

ರಾಜ್ಯ ಸರಕಾರ ಕೇವಲ ಗ್ಯಾರಂಟಿ ಯೋಜನೆ ಜಾರಿಗೆ ಒತ್ತು ನೀಡಿದೆ.ಆಹಾರ ಉತ್ಪಾದಿಸುವ ರೈತರನ್ನು ಕಡೆಗಣಿಸಿದೆ.ಈ ಹಿಂದೆ 7 ತಾಸು ನೀಡುತ್ತಿದ್ದ ವಿದ್ಯುತ್ ಈಗ 5 ತಾಸಿಗೆ ಇಳಿಸಿದೆ ಇದು ರೈತರಿಗೆ ಅನ್ಯಾಯ ಮಾಡಿದೆ ಎಂದು ಆರೋಪಿಸಿದರು.

ಕಿಸಾನ ಸಮ್ಮಾನ ಯೋಜನೆಯಲ್ಲಿ ರಾಜ್ಯ ಸರಕಾರ ನೀಡುತ್ತಿದ್ದ 4000 ಸ್ಥಗಿತಗೊಳಿಸಿದ್ದಾರೆ. ಈ ಹಿಂದೆ ಕೇಂದ್ರ ಸರಕಾರದಿಂದ 6000 ಹಾಗು ರಾಜ್ಯ ಸರಕಾರದಿಂದ 4000 ರೂಪಾಯಿ ನೀಡಲಾಗುತ್ತಿತ್ತು. ಈ ಕೇಂದ್ರ ಸರಕಾರದ ಹಣ ಮಾತ್ರ ಬರುತ್ತಿದೆ ಎಂದರು.

ಬಿಲ್ಡರ್ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿದೆ.ಈ ಹಣದ ಮೂಲದ ಬಗ್ಗೆ ಸಿಬಿಐ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಕೊಪ್ಪಳ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ಮಾಡಿದರು.

ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಸಿಎಂ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.ಗುತ್ತಿಗೆದಾರರು,ಬಿಲ್ಡರ್ ಮನೆಗಳಲ್ಲಿ ಕೋಟಿ,ಕೋಟಿ ಹಣ ಪ್ರಕರಣದಲ್ಲಿ ಕಾಂಗ್ರೆಸ್ ಕೈವಾಡವಿದೆ ಎಂದು ಆರೋಪಿಸಿದರು.ಪಂಚರಾಜ್ಯ ಚುನಾವಣೆಗೆ ರಾಜ್ಯ ಕಾಂಗ್ರೆಸ್ ನಿಂದ ಫಂಡಿಂಗ್ ಮಾಡುತ್ತಿದ್ದಾರೆ. ಇದೇ ವೇಳೆ 9...9...9...9 ತೋಳ ಬಿತ್ತು ಹಳ್ಳಕ್ಕೆ. ತೋಳ ಅಂದರೆ ಯಾರು,

ಸಿಎಂ,ಡಿಸಿಎಂ ಎಂದು ಸಂಸದರ ವ್ಯಂಗ್ಯ ವಾಡಿದರು.

ಪ್ರತಿಭಟನೆಯಲ್ಲಿ ,ಕುಷ್ಟಗಿ ಶಾಸಕ ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯೆ ಹೇಮಾವತಿ ನಾಯಕ. ಸುನೀಲ ಹೆಸರೂರು. ಚಂದ್ರಶೇಖರ ಹಲಗೇರಿ, ಮಹಾಲಕ್ಷ್ಮಿ ಕಂದಾರಿ, ಗೀತಾ ಪಾಟೀಲ. ಅಶೋಕ ಬಳೂಟಗಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ