Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಹಕಾರಿ ಬ್ಯಾಂಕ್‌ಗಳಲ್ಲಿ ಸರ್ಕಾರಿ ಹಣ ಠೇವಣಿ ಬಗ್ಗೆ ಪರಿಶೀಲನೆ

ಸುದ್ದಿಮೂಲ ವಾರ್ತೆ

ವಿಜಯಪುರ, ನ.20: ಸರ್ಕಾರ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇಡುವ ಠೇವಣಿ ಹಣವನ್ನು ಸಹಕಾರಿ ಬ್ಯಾಂಕುಗಳಲ್ಲಿಯೇ ತೊಡಗಿಸುವ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಅಖಿಲ ಭಾರತ ಸಹಕಾರಿ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ಸಹಕಾರಿ ಬ್ಯಾಂಕುಗಳು ಸುಸ್ಥಿರವಾಗಿರಬೇಕು. ಸುಸ್ಥಿರವಾಗಿದ್ದರೇ ಮಾತ್ರ ಅವು ರೈತರಿಗೆ ಸಾಲ ನೀಡಲು ಸಾಧ್ಯ. ರೈತರಿಗೆ ವ್ಯವಸಾಯ ಮಾಡಲು ಸಕಾಲದಲ್ಲಿ ಸಾಲ ಸಿಕ್ಕರೆ ವ್ಯವಸಾಯ ಮಾಡಲು ಅನುಕೂಲವಾಗಿ ಉತ್ಪಾದನೆಯೂ ಹೆಚ್ಚಾಗಲಿದೆ ಎಂದರು.

ಸರ್ಕಾರ ಒಂದು ವರ್ಷಕ್ಕೆ 1200 ಕೋಟಿ ರೂ.ಗಳನ್ನು ಹಾಲು ನೀಡು ಕ್ಷೀರ ಭಾಗ್ಯ ಕಾರ್ಯಕ್ರಮಕ್ಕೆ ಖರ್ಚು ಮಾಡುತ್ತಿದೆ. ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಸಹಕಾರ ಸಂಘಗಳಲ್ಲಿ ರೈತರು ಪಡೆದ ಸಾಲವನ್ನು ಮನ್ನಾ ಮಾಡಲು 50 ಸಾವಿರದವರಗೆ ಸಂಪೂರ್ಣ ಮನ್ನಾ ಮಾಡಲಾಯಿತು. ಹೀಗೆ ಮನ್ನಾ ಮಾಡದ್ದರಿಂದ ಸಹಕಾರಿ ಸಂಘಗಳು ಹಾಗೂ ಸಹಕಾರ ಬ್ಯಾಂಕುಗಳಿಗೆ ಶಕ್ತಿ ಬರಲು ಸಾಧ್ಯವಾಯಿತು ಎಂದರು.

ರೈತರಿಗೆ ಸಾಲ ನೀಡಲು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ನವರಿಗೆ ಕೂಡಲೇ ಪತ್ರ

ನಮ್ಮ ಸರ್ಕಾರ ಬಜೆಟ್ ಮಂಡಿಸಿದಾಗ ಶೂನ್ಯ ಬಡ್ಡಿದರ ಸಾಲವನ್ನು 3 ರಿಂದ 5 ಲಕ್ಷದವರೆಗೆ ಏರಿಸುವ ಕೆಲಸ ಮಾಡಿದ್ದೇವೆ. ರೈತರಿಗೆ ಸಾಲ ನೀಡಬೇಕೆಂದು ನಬಾರ್ಡ್ ಹಾಗೂ ಪ್ರಧಾನಮಂತ್ರಿಗಳಿಗೆ ನವರಿಗೆ ಕೂಡಲೇ ಪತ್ರ ಬರೆಯುವ ಕೆಲಸ ಮಾಡುವುದಾಗಿ ಭರವಸೆ ನೀಡಿದರು.

ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಬ್ಯಾಂಕುಗಳು ಲಾಭದಾಯಕವಾಗಿ ನಡೆಯುತ್ತವೆ

ಯಾವುದೇ ಬ್ಯಾಂಕಿನಲ್ಲಿ ಎಲ್ಲರೂ ನಿಸ್ವಾರ್ಥವಾಗಿ ಕೆಲಸ ಮಾಡಿದರೆ ಮಾತ್ರ ಅದು ಲಾಭದಾಯಕವಾಗಿ ನಡೆಯುತ್ತದೆ. ಸ್ವಾರ್ಥ ಬಿಟ್ಟು ಸೇವೆ ಮಾಡುವ ಕ್ಷೇತ್ರವಿದು ಎಂದರು. ಆ ಕ್ಷೇತ್ರದಲ್ಲಿ ಕೆಲಸ ಮಾಡುವವರಿಗೆ ಒಳ್ಳೆಯ ನಾಯಕತ್ವ ಬೆಳೆಸಿಕೊಳ್ಳುವ ಅವಕಾಶ ದೊರಯುತ್ತದೆ. ವಿಜಯಪುರ ಡಿಸಿಸಿ ಬ್ಯಾಂಕ್ ಪ್ರಾರಂಭವಾಗಿ 105 ವರ್ಷಗಳಾಗಿರುವ ಸ್ಮರಾಣಾರ್ಥ 15-16 ಕೋಟಿ ವೆಚ್ಚದಲ್ಲಿ ಹೊಸ ಕಟ್ಟಡ ಕಟ್ಟಿರುವುದರ ಅರ್ಥ ಬ್ಯಾಂಕು ಆರ್ಥಿಕವಾಗಿ ಸುಸ್ಥಿರವಾಗಿರುವುದರ ದ್ಯೋತಕ ಎಂದರು.

ಜಾತಿ ಧರ್ಮರಹಿತ ಕ್ಷೇತ್ರ:

ಸ್ವಾತಂತ್ರ್ಯಪೂರ್ವದಿಂದಲೂ ಸಹಕಾರಿ ಕ್ಷೇತ್ರ ಬೆಳೆಯುತ್ತಾ ಬಂದಿದೆ. ಸಿದ್ದನಗೌಡ ಸಣ್ಣರಾಮನಗೌಡ ಪಾಟೀಲರು ಸಹಕಾರ ಸಂಘ ಪ್ರಾರಂಭಿಸಿದರು, ಇಂದು ರಾಜ್ಯದಲ್ಲಿ 45600 ಸಹಕಾರ ಸಂಘಗಳಿದ್ದು, ಭಾರತದಲ್ಲಿ ಸುಮಾರು 8.50 ಲಕ್ಷ ಸಹಕಾರ ಸಂಘಗಳಿದ್ದು, 31 ಕೋಟಿ ಸದಸ್ಯರಿದ್ದಾರೆ. ಸಹಕಾರಿ ಕ್ಷೇತ್ರದ ದೇಶದಾದ್ಯಂತ ವ್ಯಾಪಕವಾಗಿ ಬೆಳೆದಿರುವುದಕ್ಕೆ ಇದೇ ಸಾಕ್ಷಿ. ಈ ಬೆಳವಣಿಗೆ ದೇಶದ ಆರ್ಥಿಕ ಹಾಗೂ ಸಾಮಾಜಿಕ ಬೆಳವಣಿಗೆಯನ್ನೂ ಬಿಂಬಿಸುತ್ತದೆ. ಸಹಕಾರಿ ರಂಗ ಒಂದು ಕ್ಷೇತ್ರಕ್ಕೆ ಸೀಮಿತವಾಗಿಲ್ಲ. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಬದುಕಿನ ಎಲ್ಲ ಕ್ಷೇತ್ರಗಳಲ್ಲಿ ಸಹಕಾರ ರಂಗ ವ್ಯಾಪಿಸಿಕೊಂಡಿದೆ. ಸಹಕಾರಿ ರಂಗದ ಅಭಿವೃದ್ಧಿ , ರಾಜ್ಯ ಮತ್ತು ದೇಶದ ಜಿಡಿಪಿಯ ಬೆಳವಣಿಗೆಯ ಮೇಲೂ ಪರಿಣಾಮವನ್ನು ಬೀರುತ್ತದೆ. ದೇಶದ ಆಂತರಿಕ ಕೊಡುಗೆಯ ಹೆಚ್ಚಳದಲ್ಲಿ ಸಹಕಾರಿ ಕ್ಷೇತ್ರದ ಕೊಡುಗೆ ಅಪಾರವಾಗಿದೆ. ದೇಶದಲ್ಲಿ ಅನೇಕ ಜಾತಿ ಧರ್ಮಗಳಿವೆ. ಆದರೆ ಸಹಕಾರಿ ರಂಗಕ್ಕೆ ಯಾವ ಜಾತಿ ಧರ್ಮಗಳ ಸೋಂಕು ಇಲ್ಲ. ಜಾತಿ ರಹಿತವಾದ ಧರ್ಮರಹಿತವಾದ ಕ್ಷೇತ್ರವೆಂದರೆ ಸಹಕಾರಿ ಕ್ಷೇತ್ರ ಎಂದರು.

ಸಹಕಾರ ಕ್ಷೇತ್ರಕ್ಕೆ ಶ್ರಮಿಸಿದ ಹಲವರನನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಸಚಿವರಾದ ಎಂ.ಬಿ. ಪಾಟೀಲ, ಕೆ.ಎನ್. ರಾಜಣ್ಣ, ಶಿವಾನಂದ ಪಾಟೀಲ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಜಿ.ಟಿ. ದೇವೇಗೌಡ ಮತ್ತಿತರರು ಇದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ