Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಇಂದಿನಿಂದಲೇ ದ್ವಿತೀಯ ಪಿಯು ಮೌಲ್ಯಮಾಪನ ಆರಂಭ

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.4: ದ್ವಿತೀಯ ಪಿಯುಸಿ ಮೌಲ್ಯಮಾಪನ ಕಾರ್ಯ ಬುಧವಾರದಿಂದ ಆರಂಭಗೊಳ್ಳಲಿದ್ದು, ರಾಜ್ಯಾದ್ಯಂತ 65 ಕೇಂದ್ರಗಳಲ್ಲಿ 20 ದಿನಗಳ ಕಾಲ ಮೌಲ್ಯಮಾಪನ ಕಾರ್ಯ ನಡೆಯಲಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಾಹಿತಿ ಪ್ರಕಾರ ಮೇ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ. ರಾಜ್ಯಾದ್ಯಂತ ಮಾರ್ಚ್ 9 ರಿಂದ 29ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ನಾಳೆಯಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಆರಂಭಗೊಳ್ಳಲಿದೆ.

20 ದಿನಗಳ ಕಾಲ ನಡೆಯಲಿರುವ ಮೌಲ್ಯಮಾಪನ ಕಾರ್ಯಕ್ಕೆ 25 ಸಾವಿರ ಉಪನ್ಯಾಸಕರನ್ನು ನಿಯೋಜನೆ ಮಾಡಿದ್ದು, ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ನಡೆಸಲಿದ್ದಾರೆ. ಒಟ್ಟು ದ್ವಿತೀಯ ಪಿಯುಸಿಯಲ್ಲಿ 7.27 ಲಕ್ಷ ವಿದ್ಯಾರ್ಥಿಗಳು 37 ವಿಷಯಗಳಿಗೆ ಪರೀಕ್ಷೆ ಬರೆದಿದ್ದು, 45 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ.

ಆದರೆ, ಮೌಲ್ಯಮಾಪನಕ್ಕೆ ನಿಗದಿಯಾಗಿರುವ ಕೆಲವರನ್ನು ಚುನಾವಣಾ ಕರ್ತವ್ಯಕ್ಕೂ ಬಳಸಿಕೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಮೌಲ್ಯಮಾಪಕರ ಸಂಖ್ಯೆ ಕಡಿಮೆಯಾಗಬಹುದು ಎನ್ನಲಾಗಿದೆ. ಆದರೆ ಎಷ್ಟು ಸಿಬ್ಬಂದಿ ಕಡಿಮೆಯಾಗಲಿದ್ದಾರೆ ಎನ್ನುವ ಮಾಹಿತಿ ಇದುವರೆಗೂ ಲಭ್ಯವಿಲ್ಲ. ಒಂದು ವೇಳೆ ಶೇ.20ಕ್ಕೂ ಹೆಚ್ಚಿನ ಪ್ರಮಾಣದಲ್ಲಿ ಮೌಲ್ಯಮಾಪಕರ ಕೊರತೆ ಕಂಡುಬಂದಲ್ಲಿ 20 ದಿನದ ಬದಲಿಗೆ 1 ತಿಂಗಳ ಕಾಲ ಮೌಲ್ಯಮಾಪನ ಕಾರ್ಯ ನಡೆಯುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.ಈಗಾಗಲೇ ಮೌಲ್ಯಮಾಪನ ಕಾರ್ಯಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗಿದ್ದು, ನಾಳೆಯಿಂದ ಎಲ್ಲ 65 ಮೌಲ್ಯಮಾಪನ ಕೇಂದ್ರಗಳಲ್ಲಿಯೂ ಉತ್ತರ ಪತ್ರಿಕೆಗಳ ಮೌಲ್ಯಮಾಪಕ ಕಾರ್ಯ ಆರಂಭಗೊಳ್ಳಲಿದೆ.

ಮೇ ಮೊದಲ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸುವ ಉದ್ದೇಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಹೊಂದಿದ್ದು, ಮೇ ಮೊದಲ ವಾರದಲ್ಲೇ ಫಲಿತಾಂಶ ಪ್ರಕಟಿಸುವುದಾಗಿ ಶಿಕ್ಷಣ ಸಚಿವ ಬಿಸಿ ನಾಗೇಶ್ ಮಾಹಿತಿ ನೀಡಿದ್ದಾರೆ. ಹಾಗಾಗಿ ಬಹುತೇಕ ಮೇ ಮೊದಲ ವಾರದಲ್ಲಿ ಅಥವಾ ರಾಜ್ಯ ವಿಧಾನಸಭಾ ಚುನಾವಣೆಗೂ ಮೊದಲೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆ ಇದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ