Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಹಿರಿಯ ನಾಗರಿಕ ಆರೋಗ್ಯ ನಿರ್ವಹಣೆ ತರಬೇತಿ ಆಯೋಜನೆ

ಸುದ್ದಿಮೂಲವಾರ್ತೆ

ಕೊಪ್ಪಳ,ಅ.01: ಹಿರಿಯ ನಾಗರಿಕರ ಜೀವನ ಸರಳ ಸುಂದರ ಮತ್ತು ಸಂತಸದಿಂದ ಕೂಡಿದ ಸಂತುಷ್ಟ ಜೀವನ ಆಗಬೇಕು ಇದಕ್ಕೆಅವರ ಆರೋಗ್ಯ ಕಾಳಜಿ ಬಹಳ ಮುಖ್ಯ . ಅದಕ್ಕೆ ಅವರಿಗಾಗಿ ಆರೋಗ್ಯ ನಿರ್ವಹಣೆ ತರಬೇತಿ ಕಾರ್ಯಕ್ರಮ ಸೋಮವಾರ ಏರ್ಪಡಿಸಲಾಗಿದೆ ಎಂದು ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಯೋಗಿನಿ ಅಕ್ಕ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಹಿರಿಯ ನಾಗರಿಕರ ದಿನಾಚರಣೆ ನಿಮಿತ್ಯ ಅಕ್ಟೋಬರ್ 2 ರಂದು ಆಯೋಜಿಸಿರುವ ಕಾರ್ಯಕ್ರಮ ಸಂಸದರಾದ ಸಂಗಣ್ಣ ಕರಡಿ ಉದ್ಘಾಟಿಸಲಿದ್ದಾರೆ. ಜಿಲ್ಲಾ ಆಯುಷ್ ಅಧಿಕಾರಿಗಳು, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿಗಳು, ವಾರ್ತಾ ಇಲಾಖೆ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. 'ವೃದ್ದಾಪ್ಯದಲ್ಲಿ ಆರೋಗ್ಯ ಮಹತ್ವ' ಬಗ್ಗೆ ಉಪನ್ಯಾಸ ನೀಡಲಿದ್ದಾರೆ ರಾಜಸ್ಥಾನ ಮೌಂಟ್ ನಲ್ಲಿ ತಜ್ಞ ವೈದ್ಯರಾಗಿರುವ ಕನ್ನಡಿಗ ಡಾ. ಬಿ.ಕೆ. ಮಹೇಶ ಹೇಮಾದ್ರಿಯವರು.

ಹಿರಿಯ ನಾಗರಿಕರಿಗೆ ಊಟದ ಮಹತ್ವ, ವ್ಯಾಯಾಮದ ಮಹತ್ವ , ಶರೀರದ ಆರೋಗ್ಯ , ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವ ಅತಿ ಅವಶ್ಯಕತೆ ಬಗ್ಗೆ ಉಪನ್ಯಾಸ ನೀಡುವ ಡಾ. ಹೇಮಾದ್ರಿಯವರು ವಿಶ್ವ ಆರೋಗ್ಯ ಸಂಸ್ಥೆ ಏರ್ಪಡಿಸಿರುವ ವೃದ್ದರ ಸಮಗ್ರ ಆರೈಕೆ ಬಗ್ಗೆ ದೇಶದ್ಯಾದಂತ ಉಪನ್ಯಾಸ ನೀಡುತ್ತ ಕೊಪ್ಪಳಕ್ಕೆ ಆಗಮಿಸುತ್ತಿದ್ದಾರೆ.

ಡಾ. ಹೇಮಾದ್ರಿಯವರು ವೃದ್ದರ ರೋಗ ಚಿಕಿತ್ಸಕರು ಹಾಗೂ ವೃದ್ದಾಪ್ಯ ಆರೋಗ್ಯದ ತಜ್ಞರು. ವೃದ್ದರ ಆರೋಗ್ಯದ ಬಗ್ಗೆ ಇವರು ವಿದೇಶದಲ್ಲಿ ವಿಷಯ ಮಂಡಿಸಿದ್ದಾರೆ. ಸಧ್ಯ ರಾಜಸ್ಥಾನದ ಮೌಂಟ್ ಅಬುನ 'ಶಿವಮಣಿ' ವೃದ್ದಾಶ್ರಮದಲ್ಲಿ ವೃದ್ದರೋಗ ಚಿಕಿತ್ಸಕರಾಗಿದ್ದಾರೆ.

ಈ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರನ್ನು ಸನ್ಮಾನಿಸಲಾಗುವುದು. ಹಿರಿಯ ನಾಗರಿಕರು ಕಾರ್ಯಕ್ರಮಕ್ಕೆ ಆಗಮಿಸಿ ಸದುಪಯೋಗ ಪಡೆಯುವಂತೆ ಬ್ರಹ್ಮಕುಮಾರಿ ಯೋಗಿನಿ ಅಕ್ಕ ಹಾಗೂ ಸ್ನೇಹ ಅಕ್ಕ ಕೋರಿದ್ದಾರೆ. ಮಾಹಿತಿಗಾಗಿ 9482610488, 8310575696 ಗೆ ಸಂಪರ್ಕಿಸಬಹುದು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ