Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಶರಣಪ್ಪ ಪರಸಗೋಂಡ ಅವಿರೋಧ ಆಯ್ಕೆ

ಶರಣಪ್ಪ ಪರಸಗೋಂಡ ಅವಿರೋಧ ಆಯ್ಕೆ



ಜೇವರ್ಗಿ 31 : ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ(ರಿ) ಜೇವರಗಿ ಘಟಕದಿಂದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾದ ಧನಸಿಂಗ್ ರಾಠೋಡ್ ಅವರು ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಕೋಶಾಧ್ಯಾಕ್ಷರಾಗಿ ಆಯ್ಕೆಯಾದ ಪ್ರಯುಕ್ತ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು. ತೆರವಾದ ಸ್ಥಾನಕ್ಕಾಗಿ ಸಂಘದಿoದ ಆಯ್ಕೆ ನಡೆದ ಚುನಾವಣೆಯಲ್ಲಿ ಶರಣಪ್ಪ ಪರಸಗೊಂಡ ಅವರು ನೂತನ ಕಾರ್ಯದರ್ಶಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

 

ಈ ಸಂದರ್ಭದಲ್ಲಿ ಚುನಾವಣೆ ವಿಕ್ಷಕರಾಗಿ ಜಿಲ್ಲಾ ಸಂಘದಿoದ ದೇವಿಂದ್ರಪ್ಪ ಬಿರಾದಾರ ಅವರು ಆಗಮಿಸಿ ನೇಮಕಾತಿ ಪ್ರಕ್ರಿಯೆಯನ್ನು ಸಹ ಶಿಕ್ಷಕರ ಸಂಘದ ಬೈಲಾದಂತೆ ಜೇವರಗಿ ತಾಲ್ಲೂಕಿನ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆ ಕರೆದು ಸಭೆಯಲ್ಲಿ ಅನೇಕ ವಿಷಯಗಳನ್ನು ಚರ್ಚಿಸಿ ಸಂಘದ ಕೋರ್ ಕಮಿಟಿಯಂತೆ ಶರಣಪ್ಪ ಪರಸಗೊಂಡ ಅವರು ನೂತನ ಕಾರ್ಯದರ್ಶಿ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಮಾಡಲಾಯಿತು.

 

ಈ ಸಂದರ್ಭದಲ್ಲಿ ಜೇವರ್ಗಿ ತಾಲ್ಲೂಕಿನ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಸೂರ್ಯಕಾಂತ ದ್ಯಾಮಗೊಂಡ, ಉಪಾಧ್ಯಕ್ಷರಾದ ಮಹಮದ್ ಅಲಿ, ರಾಜ್ಯ ಪರಿಷತ್ ಸದಸ್ಯರಾದ ಅಮೋಗಪ್ಪ ದೇವರಮನಿ, ಮಹಾಂತೇಶ ಸಜ್ಜನ್, ಅನುದಾನಿತ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಲ್ಲನಗೌಡ ಬಿರಾದಾರ, ಅನುದಾನಿತ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿಗಳಾದ ಜಗನ್ನಾಥ ಇಮ್ಮಣ್ಣಿ ಹಾಗೂ ಬಸವರಾಜ ಜನಗುಡಿ ಅವರು ಉಪಸ್ಥಿತಿ ಇದ್ದರು. ಈ ಸಂದರ್ಭದಲ್ಲಿ ಜಿಲ್ಲಾ ಸಂಘದ ಮತ್ತು ತಾಲ್ಲೂಕು ಸಂಘದ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಲಾಯಿತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ