Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಿವಮೊಗ್ಗ ಗಲಾಟೆ- 60 ಜನರ ಬಂಧನ: ಮಧು ಬಂಗಾರಪ್ಪ

ಸುದ್ದಿಮೂಲ ವಾರ್ತೆ

ಶಿವಮೊಗ್ಗ, ಅ.3: ಶಿವಮೊಗ್ಗ ನಗರದ ಹೊರವಲಯ ರಾಗಿಗುಡ್ಡದಲ್ಲಿ ನಡೆದ ಅವರ ಘಟನೆಗೆ ಸಂಬಂಧಿಸಿದಂತೆ ಈವರೆಗೆ ಸುಮಾರು 60 ಜನರನ್ನು ಬಂಧಿಸಲಾಗಿದ್ದು, 24 ಜನರ ಮೇಲೆ ಎನ್.ಐ.ಆ‌ರ್. ದಾಖಲಿಸಲಾಗಿದೆ. ಸುರಕ್ಷತಾ ದೃಷ್ಠಿಯಿಂದ ಬಂಧಿತರನ್ನು ಚಿತ್ರದುರ್ಗ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಘಟನೆ ನಡೆದ ರಾಗಿಗುಡ್ಡ ಪ್ರದೇಶದ ಸಂತ್ರಸ್ತರ ಮನೆಗಳಿಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಈ ಘಟನೆಯಲ್ಲಿ ಬಾಧಿತರಾಗಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಯೊಬ್ಬರಿಗೆ ಮೆಗಾನ್ ಆಸ್ಪತ್ರೆಯಲ್ಲಿ ಸಾಂತ್ವನ ಹೇಳಿದ ನಂತರ ಮಾಧ್ಯಮದ ಪ್ರತಿನಿಧಿಗಳಿಗೆ ವಿವರ ನೀಡಿ ಮಾತನಾಡುತ್ತಿದ್ದರು.

ಜಿಲ್ಲೆಯಾದ್ಯಂತ ಗಣೇಶ ಚತುರ್ಥಿ ಹಾಗೂ ಈದ್‌ಮಿಲಾದ್‌ ಹಬ್ಬಗಳು ಸಂಭ್ರಮದಿಂದ ನಡೆದಿವೆ. ಆದಾಗ್ಯೂ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ, ಪ್ರಸ್ತುತ ಸಂದರ್ಭದಲ್ಲಿ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಸೆಕ್ಷನ್ ಅನ್ನು ಶೀಘ್ರದಲ್ಲಿ ತೆರವುಗೊಳಿಸಿ ಜನಜೀವನ ಸುಗಮವಾಗಿರುವಂತೆ ನೋಡಿಕೊಳ್ಳಲಾಗುವದು. ಶಿವಮೊಗ್ಗ ನಗರದ ಜನತೆ ಯಾವುದೇ ಆತಂಕಕ್ಕೆ ಒಳಗಾಗದಂತೆ ಸಚಿವ ಮಧು ಎಸ್.ಬಂಗಾರಪ್ಪ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಧರ್ಮ, ಪಕ್ಷ, ಉದ್ದೇಶಗಳನ್ನು ಬಿಟ್ಟು, ಈ ಸಂದರ್ಭದಲ್ಲಿ ಕಾನೂನಿನ ಪರವಾಗಿ, ಕಾರ್ಯನಿರ್ವಹಿಸಲು ರಕ್ಷಣಾಧಿಕಾರಿಗಳಿಗೆ ಸೂಚಿಸಲಾಗಿದೆ. ನಗರದ ಶಾಂತಿ-ಸುವ್ಯವಸ್ಥೆಗೆ ಭಂಗವನ್ನುಂಟು ಮಾಡುವ ಹಾಗೂ ಅಪರಾಧ ಕೃತ್ಯವೆಸಗುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ವಹಿಸುವಂತೆಯೂ ಸೂಚಿಸಿರುವುದಾಗಿ ತಿಳಿಸಿದ ಅವರು, ಈ ಸಂಬಂಧ ಕ್ಷಣಕ್ಷಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳಿಂದ ಪಡೆದುಕೊಳ್ಳಲಾಗುತ್ತಿದೆ ಅಲ್ಲದೆ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಈಗಾಗಲೇ ಸಮಾಲೋಚನೆ ನಡೆಸಲಾಗಿದೆ ಎಂದರು.

ಶ್ರಮಿಕ ವರ್ಗದ ಜನರೇ ಹೆಚ್ಚಾಗಿರುವ ರಾಗಿಗುಡ್ಡ ಪ್ರದೇಶದಲ್ಲಿ ಶಾಂತಿ ನೆಲೆಸಬೇಕು. ಈ ಘಟನೆ ಮರುಕಳಿಸದಂತೆ ನೋಡಿಕೊಳ್ಳಲಾಗುವುದಲ್ಲದೆ ಅವಕಾಶವಿದ್ದಲ್ಲಿ ಸಂತ್ರಸ್ತರಿಗೆ ಪರಿಹಾರ ಕೊಡಿಸಲು ಯತ್ನಿಸಲಾಗುವುದು ಎಂದು ಹೇಳಿದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ