Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶ್ರೀ ಶಿವರಾತ್ರಿ ರಾಜೇಂದ್ರ ಶ್ರೀಗಳು ತಪಸ್ಸಿನಂತೆ ಶಿಕ್ಷಣ ನೀಡಿದರು : ಸಿಎಂ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಮೈಸೂರು,ಆ.29 : ಶಿಕ್ಷಣದ ಮೂಲಕ ಮಕ್ಕಳನ್ನು ಉತ್ತಮ ಮನುಷ್ಯರನ್ನಾಗಿಸುವ ಮಹಾನ್ ಕಾರ್ಯವನ್ನು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ತಪಸ್ಸಿನಂತೆ ಮಾಡಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘಿಸಿದರು.

ಮಂಗಳವಾರ ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ ವತಿಯಿಂದ ಸುತ್ತೂರು ಮಠದಲ್ಲಿ ನಡೆದ ಜಗದ್ಗುರು ಡಾ ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರ 108 ನೇ ಜಯಂತಿ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ಕೂಡ ನೂರಕ್ಕೆ 78 ಮಂದಿಗೆ ಮಾತ್ರ ಅಕ್ಷರ ಕಲಿಕೆ ಸಾಧ್ಯವಾಗಿದೆ. ಉಳಿದವರಿಗೆ ಇನ್ನೂ ಸಿಕ್ಕಿಲ್ಲ. ವೈಜ್ಞಾನಿಕ-ವೈಚಾರಿಕ ಶಿಕ್ಷಣ ಸಿಗದೇ ಹೋದರೆ ಸಮಾಜಕ್ಕೆ ಜಡತ್ವ ಬಡಿಯುತ್ತದೆ. ಕುವೆಂಪು ಅವರ ಆಶಯದ ವಿಶ್ವ ಮಾನವ ಪ್ರಜ್ಞೆ ವಿಸ್ತರಿಸಿದಾಗ ಮಾತ್ರ ಸಮಾಜಕ್ಕೆ ಚಲನಶೀಲತೆ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳವರದ್ದು ಬಹಳ ದೊಡ್ಡ ಸಾರ್ಥಕ ಬದುಕು. ಅಧ್ಯಾತ್ಮಿಕವಾಗಿ, ಶೈಕ್ಷಣಿಕವಾಗಿ, ಆರೋಗ್ಯಕರವಾಗಿ ಸಮಾಜವನ್ನು ತಿದ್ದಿದ, ಮುನ್ನಡೆಸಿದ ಸಾರ್ಥಕ ಬದುಕು ಅವರದ್ದಾಗಿದೆ. 12 ನೇ ಶತಮಾನದಲ್ಲೇ ಬಸವಾದಿ ಶರಣರು "ಇವ ನಮ್ಮವ" ಎನ್ನುವ ಮಂತ್ರದ ಮೂಲಕ ಸಮಾಜದ ಅಸಮಾನತೆಗೆ ಮದ್ದು ಕೊಟ್ಟರು. ಸಂವಿಧಾನದ ಪ್ರಕಾರ ಸಹಿಷ್ಣತೆ, ಸಹಬಾಳ್ವೆ ಆಚರಣೆಗೆ ಬರಬೇಕಿದ್ದರೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ನೀಡುವ ಇಚ್ಚಾಶಕ್ತಿ ಬೇಕು ಎಂದು ಹೇಳಿದರು.

ಬಸವಣ್ಣ, ಅಂಬೇಡ್ಕರ್, ಗಾಂಧಿ ಅವರ ಸಾಮಾಜಿಕ ನ್ಯಾಯದ ಆಶಯಗಳು ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಕಾಯಕದಲ್ಲಿವೆ. ನಮ್ಮ ಸರ್ಕಾರ ಕೂಡ ಈ ಎಲ್ಲರ ಕಾಯಕ ಶ್ರೇಷ್ಠ ಪ್ರಜ್ಞೆಯಿಂದ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ ಎಂದರು.

ಸುತ್ತೂರು ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು ಮತ್ತು ಆದಿಚುಂಚನಗಿರಿ ಮಠದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಸಿದ್ಧಗಂಗಾ ಕ್ಷೇತ್ರದ ಶ್ರೀ ಸಿದ್ಧಗಂಗಾ ಮಹಾಸ್ವಾಮಿಗಳು, ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳು ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ವಹಿಸಿದ್ದರು.

ಸಂಸದ ಪ್ರತಾಪ್ ಸಿಂಹ, ಶಾಸಕರಾದ ತನ್ವೀರ್ ಸೇಠ್, ಕೆ. ಹರೀಶ್ ಗೌಡ, ರವಿವಿಶಂಕರ್, ಗಣೇಶ್ ಪ್ರಸಾದ್, ಶ್ರೀವತ್ಸ, ಅನಿಲ್ ಚಿಕ್ಕಮಾದು ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಎಂ.ಕೆ.ಸೋಮಶೇಖರ್, ವಿಧಾನ ಪರಿಷತ್ ಸದಸ್ಯರಾದ ಮರಿತೊಬ್ಬೇಗೌಡ, ಎಚ್.ವಿಶ್ವನಾಥ್ ಸೇರಿ ಹಲವರು ಇದ್ದರು.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ