Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಬರಪೀಡಿತ ತಾಲ್ಲೂಕುಗಳ ಘೋಷಣೆ ಬಗ್ಗೆ ತೀರ್ಮಾನ :ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಮೈಸೂರು,ಸೆ.11 :62 ತಾಲ್ಲೂಕುಗಳು ಮಾರ್ಗ ಸೂಚಿಯೊಳಗೆ ಗುರುತಿಸಲಾಗಿದೆ. 136 ತಾಲ್ಲೂಕು ಬರಪೀಡಿತ ಪರಿಸ್ಥಿತಿಯ ವರದಿ ಪಡೆಯಲಾಗುತ್ತಿದೆ. ಈ ವರದಿ ಬಂದ ನಂತರ ಮುಂದಿನ ಸಚಿವಸಂಪುಟ ಸಭೆಯಲ್ಲಿ ಈ ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದರು.

ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ :

ಸರ್ವಪಕ್ಷ ಸಭೆಯಲ್ಲಿ ಕಾವೇರಿವಿವಾದದ ಕುರಿತು ಬೆಂಬಲಿಸುವುದಾಗಿ ತಿಳಿಸಿದ ಬಿಜೆಪಿ ಈಗ ಕೆಆರ್ ಎಸ್ ನಲ್ಲಿ ಬಂದು ರೈತರ ಅಹವಾಲುಗಳನ್ನು ಸರ್ಕಾರ ಕಡೆಗಣಿಸುತ್ತಿದೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೇಕೆದಾಟು ಯೋಜನೆಗೆ ಅನುಮತಿ ನೀಡದಿರುವುದು ಕೇಂದ್ರ ಬಿಜೆಪಿ ಸರ್ಕಾರ, ಈ ಯೋಜನೆಗೆ ತಕರಾರು ಮಾಡಲು ತಮಿಳುನಾಡಿಗೆ ಯಾವುದೇ ವಿಚಾರವಿಲ್ಲ. ರಾಜ್ಯಕ್ಕೆ ನಿಗದಿಪಡಿಸಿರುವ 177.25 ಟಿಎಂಸಿ ಸಾಮಾನ್ಯ ವರ್ಷಗಳಲ್ಲಿ ನೀರು ಬಿಡಬೇಕು. ಸಂಕಷ್ಟದ ಸಮಯದಲ್ಲಿ ಸಂಕಷ್ಟದ ಸೂತ್ರ ಅನುಸರಿಸಬೇಕು ಎಂದಿದೆ. ಆದರೆ ತಮಿಳುನಾಡಿನವರು ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿದ್ದಾರೆ. ಈ ಯೋಜನೆಗೆ ಸಂಬಂಧಿಸಿದ ಡಿಪಿಆರ್ ನೀಡಲಾಗಿದೆ ಎಂದರು.

ಕೇಂದ್ರ ಸರ್ಕಾರದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಬಿಜೆಪಿಯವರು ಯೋಜನೆ ಅನುಮತಿ ದೊರಕಿಸಿಸಿಕೊಡಲು ಮನವಿ ಮಾಡಿಕೊಳ್ಳಬೇಕು. ಆದರೆ ರಾಜ್ಯ ಬಿಜೆಪಿಯವರು ಸರ್ವಪಕ್ಷ ಸಭೆಯಲ್ಲಿ ಕಾವೇರಿ ವಿಷಯದಲ್ಲಿ ರಾಜ್ಯಸರ್ಕಾರಕ್ಕೆ ಸಹಕರಿಸುವುದಾಗಿ ತಿಳಿಸಿ, ಇಲ್ಲಿ ಇದೇ ವಿಷಯದ ಬಗ್ಗೆ ರಾಜಕೀಯ ಮಾಡುತ್ತಿದ್ದಾರೆ. ಮೈಸೂರು, ಬೆಂಗಳೂರು ಜಿಲ್ಲೆಗಳ ಜನರಿಗೆ ಕುಡಿಯುವ ನೀರು ಒದಗಿಸುವುದು ನೀರು ನೀತಿಯಂತೆ ಮೊದಲ ಆದ್ಯತೆಯಾಗಿದೆ. ಈ ಮಧ್ಯೆ ರೈತರ ಹಿತ ಕಾಪಾಡಬೇಕು. ಸರ್ವೋಚ್ಛ ನ್ಯಾಯಾಲಯದಲ್ಲಿ ತಮಿಳುನಾಡು ಕೇಸು ದಾಖಲಿಸಿದ್ದು, ರಾಜ್ಯದ ನಿಲುವನ್ನು ಸರ್ಕಾರ ಸ್ಪಷ್ಟವಾಗಿ ತಿಳಿಸಲಿದೆ. ಯಾವುದೇ ಕಾರಣಕ್ಕೆ ರಾಜ್ಯದ ರೈತರ ಹಿತರಕ್ಷಣೆಯ ವಿಷಯದಲ್ಲಿ ರಾಜಕಾರಣ ಬೇಡ. ಈ ವಿಚಾರವಾಗಿ ಸರ್ವಪಕ್ಷ ನಿಯೋಗದ ಭೇಟಿಗೆ ಪ್ರಧಾನಮಂತ್ರಿಗಳ ಸಮಯ ಕೋರಿದ್ದು, ಯಾವುದೇ ಉತ್ತರ ಬಂದಿಲ್ಲವಾದ್ದರಿಂದ, ರಾಜ್ಯ ಬಿಜೆಪಿ ಸಂಸದರು , ಭೇಟಿಗೆ ಸಮಯ ನಿಗದಿಪಡಿಸಲಿ ಎಂದು ತಿಳಿಸಿದರು.

ಒಂದು ರಾಷ್ಟ್ರ ,ಒಂದು ಚುನಾವಣೆ ಕಾರ್ಯತ: ಅಸಾಧ್ಯ :

ದೇಶದಲ್ಲಿ ಒಂದು ರಾಷ್ಟ್ರ ,ಒಂದು ಚುನಾವಣೆ ಯ ಅಗತ್ಯವಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಒಂದು ರಾಷ್ಟ್ರ , ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ. ಕೆಲವು ರಾಜ್ಯಗಳಲ್ಲಿ ಇತ್ತೀಚೆಗಷ್ಟೇ ಚುನಾವನೆ ನಡೆದಿದೆ, ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಎಲ್ಲ ರಾಜ್ಯ ವಿಧಾನಸಭೆಗಳನ್ನು ವಿಸರ್ಜಿಸಲು ಸಾಧ್ಯವಿದೆಯೇ , ಅಥವಾ ಚುನಾವಣೆ ನಡೆಯುವವರೆಗೂ ರಾಷ್ಟ್ರಪತಿ ಅಧಿಕಾರ ಹೇರಲು ಸಾಧ್ಯವಿದೆಯೇ , ಇಂತಹ ಸಂದರ್ಭಗಳು ಉದ್ಭವಿಸುವ ಸಾಧ್ಯತೆಯಿಂದಾಗಿ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೊಳಿಸುವುದು ಕಾರ್ಯತ: ಸಾಧ್ಯವಿಲ್ಲ. ಕರ್ನಾಟಕದ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವಿನಿಂದಾಗಿ ಪ್ರಧಾನಿಗಳು ಹತಾಶರಾಗಿದ್ದು, ನಾಲ್ಕೈದು ತಿಂಗಳು ಕಳೆದರೂ ವಿರೋಧಪಕ್ಷದ ನಾಯಕರನ್ನು ಆಯ್ಕೆ ಮಾಡಿರುವುದಿಲ್ಲ ಎಂದರು.

ಕೋಮುವಾದಿಗಳ ಜೊತೆ ರಾಜಿ ಇಲ್ಲ :

ಸಿದ್ದರಾಮಯ್ಯನವರು ಹಿಂದೆ ಬಿಜೆಪಿ ಪಕ್ಷಕ್ಕೆ ಹೋಗಲು ಪ್ರಯತ್ನಿಸಿದ್ದರು ಎಂಬ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ನನ್ನ ರಾಜಕೀಯ ಜೀವನದಲ್ಲಿ ಕೋಮುವಾದಿ ಪಕ್ಷಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಅವರು ಕುಟುಂಬ ರಾಜಕಾರಣಕ್ಕಾಗಿ ಬಿಜೆಪಿಯವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ. ಯಾವುದೇ ಕಾರಣಕ್ಕೂ ಕೋಮುವಾದಿಗಳ ಜೊತೆ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.

ಬೆಂಗಳೂರಿನ ಖಾಸಗಿ ಸಾರಿಗೆಯವರು ನಡೆಸುತ್ತಿರುವ ಮುಷ್ಕರದ ಬಗ್ಗೆ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮುಷ್ಕರ ಮಾಡುವವರಿಗೆ ಕಡಿವಾಣ ಹಾಕಲು ಸಾಧ್ಯವಿಲ್ಲ. ಖಾಸಗಿ ಸಾರಿಗೆಯವರ ಅಹವಾಲುಗಳನ್ನು ಸರ್ಕಾರ ಆಲಿಸಿದೆ. ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಯವರಿಗೆ ನಷ್ಟವುಂಟಾಗುತ್ತಿದ್ದು, ಆ ನಷ್ಟವನ್ನು ಭರಿಸಿಕೊಡಬೇಕು ಎಂಬಂತಹ ಅಸಾಧ್ಯ ಬೇಡಿಕೆಗಳನ್ನು ಈಡೇರಿಸಲು ಸಾಧ್ಯವಿಲ್ಲ. ಹೆಣ್ಣುಮಕ್ಕಳಿಗೆ ಅನುಕೂಲ ಕಲ್ಪಿಸಲು ಶಕ್ತಿ ಯೋಜನೆ ಜಾರಿಗೊಳಿಸಲಾಗಿದೆ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ