Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಜನಪರ ಯೋಜನೆಗಳಿಗೆ ಗಾಂಧೀಜಿ ಚಿಂತನೆಗಳೇ ಪ್ರೇರಣೆ: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.2: ಮಹಾತ್ಮ ಗಾಂಧೀಜಿಯವರ ವಿಚಾರಧಾರೆ ಎಲ್ಲ ಕಾಲಕ್ಕೂ ಪ್ರಸ್ತುತ. ಸರ್ಕಾರದ ಜನಪರ ಯೋಜನೆಗಳಿಗೆ ಮಹಾತ್ಮಾ ಗಾಂಧೀಜಿವರ ಚಿಂತನೆಗಳೇ ಪ್ರೇರಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮ ದಿನಾಚರಣೆಯ ಅಂಗವಾಗಿ ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ 2023ರ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ನಮ್ಮ ಸರ್ಕಾರದ ಜನಪರ ಕಾರ್ಯಕ್ರಮಗಳಿಗೆ ಗಾಂಧೀಜಿವರ ಚಿಂತನೆಗಳೇ ಪ್ರೇರಣೆ. ಮಹಿಳಾ ಸ್ವಾತಂತ್ರ್ಯ ಹಾಗೂ ಸಬಲೀಕರಣದ ಬಗ್ಗೆ ಅಪಾರವಾದ ಬದ್ಧತೆ ಹೊಂದಿದ್ದರು. ಮಹಿಳೆಯವರ ಅಭಿವೃದ್ಧಿಯಿಂದ ನಾಡು, ದೇಶದ ಅಭಿವೃದ್ಧಿ ಸಾಧ್ಯ. ಸರ್ಕಾರ ಮಹಿಳಾ ಸಬಲೀಕರಣಕ್ಕೆ ಆದ್ಯತೆ ನೀಡಿದೆ. ಶಕ್ತಿ ಯೋಜನೆ ಹಾಗೂ ಗೃಹಲಕ್ಷ್ಮಿ ಯೋಜನೆಗಳ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ಅನ್ನಭಾಗ್ಯ ಯೋಜನೆಗೆ ಗಾಂಧಿ ತತ್ವಗಳನ್ನು ಅವಲಂಬಿಸಿವೆ ಎಂದರು.

2014ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ, ಮಹಾತ್ಮಾ ಗಾಂಧೀಜಿಯವರ ಜಯಂತಿಯಂದು ಗಾಂಧಿ ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಿ, ಗಾಂಧಿ ಜೀಯವರ ತತ್ವಾದರ್ಶಗಳ ಹಾದಿಯಲ್ಲಿ ನಡೆಯುವ ವ್ಯಕ್ತಿ ಅಥವಾ ಸಂಘಸಂಸ್ಥೆಗಳಿಗೆ ಗಾಂಧಿ ಪ್ರಶಸ್ತಿಯನ್ನು ನೀಡಬೇಕೆಂದು ಆದೇಶ ಹೊರಡಿಸಲಾಯಿತು. ಪ್ರಶಸ್ತಿಗೆ ಆರ್ಹರಾಗುವವರು ಗಾಂಧಿಜೀಯವರ ತತ್ವಗಳಲ್ಲಿ ನಂಬಿಕೆಯಿಟ್ಟುವವರಾಗಿರಬೇಕು. ಧಾರವಾಡದ ಗರಗ ಕ್ಷೇತ್ರಿಯ ಸೇವಾ ಸಂಘ ಖಾದಿ ಉತ್ಪನ್ನ ಮತ್ತು ಮಾರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಭಾರತದ ರಾಷ್ಟ್ರಧ್ವಜ ತಯಾರಾಗಿದ್ದಾರೆ. ಇಲ್ಲಿ ತಯಾರಾಗುವ ರಾಷ್ಟ್ರಧ್ವಜವನ್ನು ಇಡೀ ದೇಶಕ್ಕೆ ಸರಬರಾಜು ಮಾಡಲಾಗುತ್ತದೆ. ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿಗೆ ಭಾಜನರಾದ ಈ ಸಂಸ್ಥೆಯ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು ಹಾಗೂ ಪ್ರಶಸ್ತಿಯ ಆಯ್ಕೆ ಸಮಿತಿಗೆ ಧನ್ಯವಾದಗಳನ್ನರ್ಪಿಸಿದರು.

ಗಾಂಧೀಜಿಯವರ ಮಾತು ಹಾಗೂ ಕೃತಿಯಲ್ಲಿ ವ್ಯತ್ಯಾಸವಿರಲಿಲ್ಲ. ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿ, ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸಿದರು. ಅಹಿಂಸಾ ಹಾದಿಯಲ್ಲಿ ನಡೆದು ಸ್ವಾತಂತ್ರ್ಯ ಪಡೆಯಲು ಹೊರಟ ದೇಶವೆಂದರೆ ಭಾರತ. ಗಾಂಧಿಜೀಯವರು ದೊಡ್ಡ ಮಾನವತಾವಾದಿ. ಮನುಷ್ಯ ಮನುಷ್ಯನನ್ನು ಪ್ರೀತಿಸುವ ಸ್ವಾಭಾವವನ್ನು ಬೆಳೆಸಿಕೊಳ್ಳುವ ಮೂಲಕ ಗಾಂಧೀಜಿಯವರಿಗೆ ನಿಜವಾದ ಗೌರವ ಅರ್ಪಿಸಿದಂತಾಗುತ್ತದೆ. ಅವರು ನಡೆದ ದಾರಿಯಲ್ಲಿ ನಡೆಯುವ ಪ್ರಮಾಣಿಕ ಪ್ರಯತ್ನದಿಂದ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದರು.

ಮಹಾತ್ಮಾ ಎಂದು ಬಿರುದು ನೀಡಿದವರು ರವೀಂದ್ರನಾಥ ಟ್ಯಾಗೋರ್. ಸುಭಾಷ್ ಚಂದ್ರ ಬೋಸ್ ಅವರು ರಾಷ್ಟ್ರಪಿತ ಎಂದು ಕರೆದರು. ದೇಶದಲ್ಲಿ ಶಾಂತಿ, ಸೌಹಾರ್ದತೆಯನ್ನು ಕಾಪಾಡಲು ಕೊನೆಯವರೆಗೂ ಶ್ರಮಿಸಿದ್ದರು. ಆದರೆ ನಾಥೂರಾಂ ಗೋಡ್ಸೆಯವರ ಮತಾಂಧತೆಯಿಂದ ಅವರು ಅಸುನೀಗಿದರು. ನಾಥೂರಾಂ ಅವರನ್ನು ಪೂಜಿಸುವವರು ಈ ದೇಶದಲ್ಲಿರುವುದು ವಿಷಾದನೀಯ. ಇಂತಹವರ ಬಗ್ಗೆ ನಾವು ಜಾಗೃತರಾಗಿರಬೇಕು ಎಂದರು.

ಭಾರತ ಹಳ್ಳಿಗಳ ದೇಶ. ಹಳ್ಳಿಗಳ ಸ್ವಾವಂಬನೆಯಿಂದ ಮಾತ್ರ ದೇಶ ಅಭಿವೃದ್ಧಿಯಾಗಲು ಸಾಧ್ಯ. ನಮ್ಮ ದೇಶಕ್ಕೆ ದೊಡ್ಡ ಕೈಗಾರಿಕೆಗಳ ಬದಲು ಗುಡಿ ಕೈಗಾರಿಕೆಗಳು ಬರಬೇಕು. ಅವರು ಹೇಳಿದ ಪಂಚಾಯತ್ ರಾಜ್ ವ್ಯವಸ್ಥೆಯಂತೆ ಅಧಿಕಾರ ಹಳ್ಳಿಯಿಂದ ದಿಲ್ಲಿಗೆ ಹೋಗಬೇಕೆ ಹೊರತು, ದಿಲ್ಲಿಯಿಂದ ಹಳ್ಳಿಗೆ ಬರಬಾರದು ಎಂದಿದ್ದರು. ಅಧಿಕಾರ ವಿಕೇಂದ್ರೀಕರಣ, ದೇಶ, ರಾಜ್ಯ, ಜಿಲ್ಲೆ, ಹಳ್ಳಿ ನಾಲ್ಕು ಹಂತದಲ್ಲಿ ಅಧಿಕಾರದ ವಿಕೇಂದ್ರೀಕರಣದಿಂದ . ಜನರ ಪಾಲ್ಗೊಳ್ಳುವಿಕೆಯಿದ ಜನತಂತ್ರದ ವಿಕೇಂದ್ರೀಕರಣ ಸಾಧ್ಯ ಎಂದರು.

ಭಾರತ ಕಂಡ ಪ್ರಾಮಾಣಿಕ ರಾಜಕಾರಣಿ :

ಇಂದು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯಾಗಿದ್ದು, ಇಡೀ ದೇಶದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಭಾರತ ಕಂಡ ಪ್ರಾಮಾಣಿಕ ರಾಜಕಾರಣಿ ಲಾಲ್ ಬಹದ್ದೂರ್ ಶಾಸ್ತ್ರಿ. ಸ್ವಾತಂತ್ರ್ಯ ಹೋರಾಟಗಾರರಾಗಿ, ಗಾಂಧಿವಾದಿಯಾಗಿ ಬದುಕಿದವರು ಎಂದರು.

ಕಾರ್ಯಕ್ರಮದಲ್ಲಿ ಧಾರವಾಡದ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 'ಮಹಾತ್ಮಾ ಗಾಂಧಿ ಸೇವಾ ಪ್ರಶಸ್ತಿ ಕರ್ನಾಟಕ 2023 ಪ್ರದಾನ' ಮಾಡಿದರು. ಕರ್ನಾಟಕ ಹೈಕೋರ್ಟ್‌ ವಿಶ್ರಾಂತ ನ್ಯಾಯಮೂರ್ತಿ ಬಿ. ವೀರಪ್ಪ, ಮುಖ್ಯಮಂತ್ರಿಗಳ ಮಾಧ್ಯಮ ‌ಸಲಹೆಗಾರರಾದ ಕೆ.ವಿ. ಪ್ರಭಾಕರ್, ವಾರ್ತಾ ಮತ್ತು‌ ಸಾರ್ವಜನಿಕ ಸಂಪರ್ಕ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಜಯರಾಮ್ ಹಾಗೂ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ಉಪಸ್ಥಿತಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ