Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ದಸರಾ ಪ್ರಯುಕ್ತ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ರೈಲು

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.13 : ದಸರಾ ಹಬ್ಬದ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ರೈಲುಗಳ ಸಂಚಾರ ಇರಲಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆ ಮಾಡುವ ಸಲುವಾಗಿ ಮೈಸೂರು - ಬೆಂಗಳೂರು ಮತ್ತು ಮೈಸೂರು - ಚಾಮರಾಜನಗರ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ವಲಯವು ನಿರ್ಧರಿಸಿದೆ. ಅ. 20 ರಿಂದ 24ರವರೆಗೆ ಹೆಚ್ಚುವರಿ ರೈಲುಗಳ ಸಂಚಾರ ಇರಲಿದೆ.

ರೈಲು ಸಂಖ್ಯೆ 06279/06280 ಮೈಸೂರು-ಕೆ.ಎಸ್.ಆರ್ ಬೆಂಗಳೂರು-ಮೈಸೂರು ಕಾಯ್ದಿರಿಸದ ವಿಶೇಷ ಇರಲಿದೆ. ಈ ವಿಶೇಷ ರೈಲು ಅ. 20 ರಿಂದ 24 ರವರೆಗೆ ಇರಲಿದೆ. ರಾತ್ರಿ 11:15 ಗಂಟೆಗೆ ಮೈಸೂರು ನಿಲ್ದಾಣದಿಂದ 2:30 ಗಂಟೆಗೆ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ. ಪುನಃ ಕೆ.ಎಸ್.ಆರ್ ಬೆಂಗಳೂರು-ಮೈಸೂರು ವಿಶೇಷ ರೈಲು ಮುಂಜಾನೆ 3 ಗಂಟೆಗೆ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣದಿಂದ ಹೊರಟು ಅದೇ ದಿನ ಬೆಳಗ್ಗೆ 6:15 ಗಂಟೆಗೆ ಮೈಸೂರು ತಲುಪಲಿದೆ.

ಈ ರೈಲುಗಳು ಎರಡೂ ದಿಕ್ಕುಗಳಲ್ಲಿ ನಾಗನಹಳ್ಳಿ, ಶ್ರೀರಂಗಪಟ್ಟಣ, ಪಾಂಡವಪುರ, ಚಂದ್ರಗಿರಿ, ಬ್ಯಾಡ್ರಹಳ್ಳಿ, ಯಲಿಯೂರು, ಮಂಡ್ಯ, ಹನಕೆರೆ, ಮದ್ದೂರು, ಶೆಟ್ಟಿಹಳ್ಳಿ, ಚನ್ನಪಟ್ಟಣ, ರಾಮನಗರ, ಬಿಡದಿ, ಹೆಜ್ಜಾಲ, ಕೆಂಗೇರಿ ಮತ್ತು ನಾಯಂಡಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ. ಈ ವಿಶೇಷ ರೈಲುಗಳಲ್ಲಿ ಎಸಿ ಚೇರ್ ಕಾರ್ (1), ನಾನ್ ಎಸಿ ಚೇರ್ ಕಾರ್ (18) ಮತ್ತು 2ನೇ ದರ್ಜೆ ಲಗೇಜ್ ಕಮ್ ಬ್ರೇಕ್ ವ್ಯಾನ್, ಅಂಗವಿಕಲ ಸ್ನೇಹಿ ಕಂಪಾರ್ಟ್ಮೆಂಟ್ (2) ಸೇರಿದಂತೆ ಒಟ್ಟು 21 ಬೋಗಿಗಳು ಹೊಂದಿರುತ್ತವೆ.

ರೈಲು ಸಂಖ್ಯೆ 06597/06598 ಮೈಸೂರು-ಕೆ.ಎಸ್.ಆರ್ ಬೆಂಗಳೂರು-ಮೈಸೂರು ಕಾಯ್ದಿರಿಸದ ವಿಶೇಷ ರೈಲು ಸಂಖ್ಯೆ 06597 ಮೈಸೂರು-ಕೆ.ಎಸ್.ಆರ್ ಬೆಂಗಳೂರು ವಿಶೇಷ ರೈಲು ಮಧ್ಯಾಹ್ನ 12:15 ಗಂಟೆಗೆ ಮೈಸೂರು ನಿಲ್ದಾಣದಿಂದ ಹೊರಟು ಅದೇ ದಿನ ಮಧ್ಯಾಹ್ನ 03:30 ಗಂಟೆಗೆ ಕೆ.ಎಸ್.ಆರ್ ಬೆಂಗಳೂರು ನಿಲ್ದಾಣವನ್ನು ತಲುಪಲಿದೆ. ಪುನಃ ಬೆಂಗಳೂರಿನಿಂದ ಮಧ್ಯಾಹ್ನ 03:45 ಗಂಟೆಗೆ ಹೊರಟು ಅದೇ ದಿನ ಸಂಜೆ 07:20 ಗಂಟೆಗೆ ಮೈಸೂರು ನಿಲ್ದಾಣವನ್ನು ತಲುಪಲಿದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ