Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ರಾಜ್ಯ ನಾಯಕರ ಬಗ್ಗೆ ನಿಷ್ಕಾಳಜಿ ಸಲ್ಲದು

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.10: ಪಕ್ಷ ಸಂಘಟನೆ ಸೇರಿದಂತೆ ರಾಜ್ಯ ಬಿಜೆಪಿ ಘಟಕದ ಬಗ್ಗೆ ಅತೀವ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ಬಿಜೆಪಿ ಹೈಕಮಾಂಡ್ ವಿರುದ್ಧ ಮತ್ತೊಮ್ಮೆ ತಮ್ಮ ಅಸಮಾಧಾನ ತೋಡಿಕೊಂಡಿರುವ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ಸೂಚ್ಯವಾಗಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಬಿಜೆಪಿ ನಾಯಕರ ಬಗ್ಗೆ ನಿಷ್ಕಾಳಜಿ ಸಲ್ಲದು. ಪಕ್ಷದ ಹಿತದೃಷ್ಟಿಯಿಂದ ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆ ಕೇಂದ್ರ ನಾಯಕರಿಗೆ ಮನವಿ ಮಾಡಿಕೊಳ್ಳುವುದಾಗಿ ಹೇಳಿದರು.

ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಸೋತಿರಬಹುದು, ಆದರೆ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಗತ್ಯವಿದೆ. ಹೀಗಾಗಿ ದಯವಿಟ್ಟು ರಾಜ್ಯ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ರಾಜ್ಯಕ್ಕೆ ಭೇಟಿ ನೀಡದಿರುವುದು ಮತ್ತು ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವ ನಿರ್ಧಾರ ಸರಿಯಲ್ಲ ಎಂದರು.

ಚುನಾವಣಾ ರಾಜಕೀಯದಿಂದ ನಿವೃತ್ತಿ ಕುರಿತು ಮಾತನಾಡಿದ ಗೌಡರು, ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವ ತಮ್ಮ ನಿರ್ಧಾರಕ್ಕೆ ಯಾರಿಂದಲೂ ಒತ್ತಡವಿಲ್ಲ. “ಹನುಮಂತನಂತೆ ನನ್ನ ಹೃದಯವನ್ನು ತೆರೆದು ತೋರಿಸಲು ಸಾಧ್ಯವಿಲ್ಲ. ನಾನು ಸತ್ಯವನ್ನೇ ಹೇಳಿದ್ದೇನೆ ಮತ್ತು ನಾನು ಯಾವುದೇ ನಾಯಕರೊಂದಿಗೆ ಈ ವಿಷಯವನ್ನು ಚರ್ಚಿಸಿಲ್ಲ ಎಂದು ಸ್ಪಷ್ಪಪಡಿಸಿದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸಬೇಕೆಂದು ಪಕ್ಷ ಮತ್ತು ಆರ್‌ಎಸ್‌ಎಸ್ ಬಯಸಿದೆ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ ಮತ್ತು ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಿಲ್ಲ. ನಾನು ಎಂದಿಗೂ ರಾಜಕೀಯದಲ್ಲಿ ದಡ್ಡನಲ್ಲ" ಎಂದರು.

ನಿವೃತ್ತಿಯಾಗುವಂತೆ ಪಕ್ಷದ ವರಿಷ್ಠರು ನೇರವಾಗಿಯೇ ಸೂಚಿಸಿದ್ದಾರೆ ಎಂಬ ಯಡಿಯೂರಪ್ಪ ಹೇಳಿಕೆ ಕುರಿತು ಪ್ರತಿಕ್ರಿಯೆ ನಿಡಿದ ಸದಾನಂದಗೌಡರು. ಯಡಿಯೂರಪ್ಪ ಅವರು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಸ್ಪಷ್ಟನೆ ನೀಡಿದ್ದು, ಚುನಾವಣೆಗೆ ಸ್ಪರ್ಧಿಸದಂತೆ ತಮ್ಮ ಮೇಲೆ ಯಾವುದೇ ಒತ್ತಡವಿಲ್ಲ ಎಂದು ತಿಳಿಸಿದರು.

ಸದಾನಂದ ಗೌಡರು ಯಾವುದೇ ನಾಯಕರ ಗುಲಾಮರಲ್ಲ. ಒತ್ತಡದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ಯಾವುದೇ ಆಮಿಷಕ್ಕೆ ಒಳಗಾಗುವುದಿಲ್ಲ ಮತ್ತು ನನ್ನ ಜವಾಬ್ದಾರಿಯನ್ನು ಅರಿತುಕೊಂಡಿದ್ದೇನೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 32 ಲಕ್ಷ ಮತದಾರರಿದ್ದಾರೆ. ಯಾವುದೇ ಮತದಾರ ನನ್ನದು ತಪ್ಪು ಎಂದು ಹೇಳಿದರೆ ಬೆಂಗಳೂರು ನಗರ ಬಿಟ್ಟು ಹೋಗುತ್ತೇನೆ ಎಂದು ಸವಾಲು ಹಾಕಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ