Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಶಾಂತಿ ಹೋರಾಟದ ಜೊತೆ ಸಂಘರ್ಷದ ಫಲವೇ ಹೋರಾಟ : ಶಾಸಕ ಶರತ್ ಬಚ್ಚೇಗೌಡ

ಸುದ್ದಿಮೂಲ ವಾರ್ತೆ

ಹೊಸಕೋಟೆ ಆ. 16 : ಗಾಂಧೀಜಿ ಅವರ ಅಹಿಂಸಾತ್ಮಕ ಹೋರಾಟ ಸೇರಿದಂತೆ ಹಲವು ನಾಯಕರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ಹೊಸಕೋಟೆ ನಗರದಲ್ಲಿ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ವಿಜೃಂಬಣೆಯಿಂದ ಆಚರಿಸಲಾಯಿತು. ಬಳಿಕ ಮಾತನಾಡಿದ ಅವರು, ತ್ಯಾಗ ಬಲಿದಾನದಿಂದ 200 ವರ್ಷಗಳ ಬ್ರಿಟೀಷ್ ಆಡಳಿತದಿಂದ ಮುಕ್ತಿ ದೊರೆಯುವಂತಾಗಿದೆ. ಇದರಿಂದಲೇ ಇಂದು ದೇಶದಲ್ಲಿ ವಿದ್ಯಾಭ್ಯಾಸ, ಉದ್ಯೋಗಕ್ಕೆ ಮುಕ್ತ ಅವಕಾಶ ದೊರೆತಿದೆ. ಎಲ್ಲರಿಗೂ ಸಮಾನತೆ ಜೊತೆಗೆ ಬಡತನ ನಿರ್ಮೂಲನೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಸಹ ಪಂಚ ಯೋಜನೆಗಳನ್ನೂ ಜಾರಿಮಾಡಿದೆ ಎಂದರು.

ತಹಸೀಲ್ದಾರ್ ವಿಜಯ್‌ಕುಮಾರ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಪುರುಷರು, ಮಹಿಳೆಯರು ಭಾಗಿಯಾಗಿ ಹೋರಾಟ ಮತ್ತು ತ್ಯಾಗ ಬಲಿದಾನಗಳನ್ನು ನೆನೆಯಬೇಕು ಎಂದರು.

ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಮಾದರಿ ಕೃಷಿಕರಿಗೆ, ಹೈನೋದ್ಯಮದಲ್ಲಿ ತೊಡಗಿಸಿಕೊಂಡವರಿಗೆ ಹಾಗೂ ಶಿಕ್ಷಣದಲ್ಲಿ ಹೆಚ್ಚು ಅಂಕ ಪಡೆದ ವಿಧ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತಿ ಇಒ ಚಂದ್ರಶೇಖರ್, ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಬ್, ಡಿವೈಎಸ್‌ಪಿ ಪಾಟೀಲ್, ನಗರಸಭೆ ಆಯುಕ್ತ ಪ್ರಸಾದ್, ಟಿಎಪಿಸಿಎಂಎಸ್ ಅಧ್ಯಕ್ಷ ಬಾಬು ರೆಡ್ಡಿ, ಕಸಾಪ

ತಾಲೂಕು ಅಧ್ಯಕ್ಷ ಎಚ್ ಎಂ ಮುನಿರಾಜ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ವೆಂಕಟರಮಣಪ್ಪ, ನಗರಸಭೆ ಸದಸ್ಯರಾದ ಗೌತಮ್, ರೂಪಾ, ಕೇಶವ್, ಜಮುನಾ, ಮುಖಂಡರುಗಳಾದ ಬಿವಿ ಬೈರೇಗೌಡ, ಡಾ. ಎಚ್‌.ಎಂ ಮುನಿರಾಜ್, ವಿಜಯ್ ಕುಮಾರ್, ರಾಖೇಶ್, ಆರ್‌ಟಿಸಿ ಗೋವಿಂದ್ ರಾಜ್ ಮೊದಲಾದವರು ಹಾಜರಿದ್ದರು.

ನಗರದ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳ ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಾಮೂಹಿಕ ಕವಾಯತು ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ