Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ತಿಪಟೂರಿನಲ್ಲಿ ಶಿಕ್ಷಕರ ದಿನಾಚರಣೆ


ಸುದ್ದಿಮೂಲ ವಾರ್ತೆ





ತಿಪಟೂರು,ಸೆ.5: ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರವರ 136ನೇ ಜನ್ಮ ಜಯಂತಿ ಮತ್ತು ಶಿಕ್ಷಕರ ದಿನಾಚರಣೆಯನ್ನು ತಿಪಟೂರಿನಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು

ನಗರದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ನೂರಾರು ಮಕ್ಕಳು ಕುಂಭ ಮೇಳದ ಮುಖಾಂತರ ಶಾಸಕರ ಅಧ್ಯಕ್ಷತೆಯಲ್ಲಿ ಒಕ್ಕಲಿಗರ ಸಮುದಾಯ ಭವನ ವರೆಗೂ ಜಾಥಾ ನಡೆಸಿ ಒಕ್ಕಲಿಗರ ಸಮುದಾಯ ಭವನದಲ್ಲಿ ಶಿಕ್ಷಕರ ದಿನಾಚರಣೆ ಆಚರಿಸಿದರು

ಶಾಸಕ ಷಡಕ್ಷರಿ ಮಾತನಾಡಿ, ಸಮಾಜ ಬದಲಾವಣೆಯಾಗಲು  ಉತ್ತಮ ಮಾರ್ಗದರ್ಶಕರಾಗಲು ಶಿಕ್ಷಕರ ಪಾತ್ರ ಬಹುಮುಖ್ಯ ವಾಗಿದೆ. ಶಿಕ್ಷಕ ವೃತ್ತಿ  ದೇವರು ಕೊಟ್ಟ ವರ.  ಚಿಕ್ಕ ವಯಸ್ಸಿನಿಂದ ಅವನು ಬೆಳೆದು ದೊಡ್ಡ ಅಧಿಕಾರಿಯಾಗಲಿ, ಸಮಾಜ ಸುಧಾರಕನಾಗಲಿ, ರಾಜಕೀಯ ವ್ಯಕ್ತಿಯಾಗಲಿ ಏನೇ ಯಾವುದೇ ರೀತಿ ಸ್ಥಾನಮಾನ ಮತ್ತು ಅವರ ಏಳಿಗೆ ಮಾಡುವಲ್ಲಿ ಶಿಕ್ಷಕನ ಪಾತ್ರ ಅತಿ ಮುಖ್ಯವಾಗಿದೆ. ಶಿಕ್ಷಕರ ದಿನಾಚರಣೆಯಂದು ಶಿಕ್ಷಕರು ಅತಿ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು

ಚಟ್ನಳ್ಳಿ ಮಹೇಶ್ ಮಾತನಾಡಿ, ಶಿಕ್ಷಕರು ಹುಟ್ಟಿದ್ದಾಗಿನಿಂದ ಸಾಯುವವರೆಗೂ ಉತ್ತಮ ಸೇವೆ ಸಲ್ಲಿಸಿ ನಮ್ಮ ಮಾಷ್ಟ್ರು ನಮ್ಮ ಮಾಷ್ಟ್ರು ಎಂದು ಅಡ್ಡ ಹೆಸರು ಗಳಿಸಿಕೊಂಡು ಉತ್ತಮ ಸಾಧನೆ ಮಾಡುವಲ್ಲಿ ಶಿಕ್ಷಕರು ಪ್ರಮುಖ ಪಾತ್ರ ವಹಿಸಿರುತ್ತಾರೆ ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ತಾಲೂಕು ಅಧ್ಯಕ್ಷ ಆದಿತ್ಯ ಜಯಣ್ಣ, ಬಿ ಇ ಓ ಚಂದ್ರಶೇಖರ್‌, ಪ್ರಾಂಶುಪಾಲ ಶಿವಕುಮಾರ್,  ಕೌನ್ಸಿಲರ್ ಯೋಗೇಶ್, ಕೆಎಂಎಫ್ ನಿರ್ದೇಶಕ ಪ್ರಕಾಶ್ ಕ್ಷೇತ್ರ ಸಮನ್ವಯ ಅಧಿಕಾರಿ ಗಂಗಾಧರ್ ಜಯರಾಮ್ ದಕ್ಷಿಣ ಮೂರ್ತಿ ಅನೇಕ ಶಿಕ್ಷಕರು ಮತ್ತು ಶಿಕ್ಷಕಿಯರು ಹಾಜರಿದ್ದರು





Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ