Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಬಿಬಿಎಂಪಿ ವಾರ್‌ರೂಮ್‌ಗೆ ಬಂದು ದೂರು ಸ್ವೀಕರಿಸಿದ ಡಿಸಿಎಂ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.7: ರಾಜಧಾನಿ ಬೆಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯ ವಾರ್ ರೂಮ್‌ಗೆ ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ತಡರಾತ್ರಿ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸೋಮವಾರ ಮಧ್ಯರಾತ್ರಿ ಮಳೆ ಸುರಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಬರುವ ದೂರುಗಳು ಹಾಗೂ ವಾರ್ ರೂಮ್ ಸಿಬ್ಬಂದಿ ಕಾರ್ಯವೈಖರಿಯನ್ನು ಶಿವಕುಮಾರ್ ಅವರು ಖುದ್ದು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಪಾಲಿಕೆ ಅಧಿಕಾರಿಗಳಿಗೆ ಕೆಲವು ಮಾರ್ಗದರ್ಶನ ನೀಡಿದರು.

ಬಳಿಕ ಮಾತನಾಡಿದ ಅವರು, 'ಬೆಂಗಳೂರಿನ ವಿವಿಧ ಭಾಗಗಳಲ್ಲಿ ನಿರಂತರವಾಗಿ ಮಳೆ ಬಂದಿದೆ. ಕೆಲವೆಡೆ ಸಂಚಾರ ಸಮಸ್ಯೆ ಎದುರಾಗಿದೆ. ಉಳಿದಂತೆ ಸಾರ್ವಜನಿಕರಿಗೆ ತೊಂದರೆ ಆಗದಂತೆ ಅವರ ದೂರು ಸ್ವೀಕಾರ ಹಾಗೂ ಅವುಗಳಿಗೆ ನಮ್ಮ ಅಧಿಕಾರಿಗಳು ಹೇಗೆ ಸ್ಪಂದಿಸುತ್ತಿದ್ದಾರೆ ಎಂದು ಪರಿಶೀಲನೆ ಮಾಡಲು ವಾರ್ ರೂಮ್‌ಗೆ ಭೇಟಿ ನೀಡಿದ್ದೇನೆ. ಪಾಲಿಕೆ ವಲಯ ಆಯುಕ್ತರು, ಜಂಟಿ ಆಯುಕ್ತರು ಮೇಲೆ ಬೀಳುತ್ತಿರುವ ಸ್ಥಳಗಳಿಗೆ ಭೇಟಿ ನೀಡಲು ಸೂಚನೆ ನೀಡಿದ್ದೇವೆ. ಅವರು ಹೆಚ್ಚು ಮಳೆ ಸುರಿದ ಪ್ರದೇಶಗಳಲ್ಲಿ ಪರಿಶೀಲನೆ ಮಾಡಿದ್ದಾರೆ' ಎಂದರು.

ಯಾವ ಕಾಲುವೆಗಳಲ್ಲಿ ಎಷ್ಟು ಪ್ರಮಾಣದ ನೀರು ಹರಿದು ಹೋಗುತ್ತಿದೆ ಎಂಬ ಮಾಹಿತಿ ಇಲ್ಲಿ ದಾಖಲಾಗುತ್ತಿವೆ. ನೂರಾರು ದೂರುಗಳು ಬರುತ್ತಿದ್ದು, ಇಲ್ಲಿನ ಸಿಬ್ಬಂದಿ ಅವುಗಳಿಗೆ ಸ್ಪಂದಿಸುತ್ತಿದ್ದಾರೆ. ನಾನು ಕೂಡ ಮೂರ್ನಾಲ್ಕು ದೂರುಗಳನ್ನು ಸ್ವೀಕರಿಸಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ನಮ್ಮ ಅಧಿಕಾರಿಗಳು ಜಾಗರೂಕರಾಗಿ ಕೆಲಸ ಮಾಡುತ್ತಿದ್ದಾರೆ.

ಏರ್‌ಪೋರ್ಟ್‌ ಬಳಿ ಸಂಚಾರಿ ಸಮಸ್ಯೆ ಎದುರಾಗಿದೆ. ಅಲ್ಲಿಗೆ ಪಾಲಿಕೆ ಆಯುಕ್ತರು ಹೋಗಿದ್ದಾರೆ. ರಾಜರಾಜೇಶ್ವರಿ ನಗರದ ಕಡೆ ಹೆಚ್ಚಿನ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಉಳಿದಂತೆ ಎಲ್ಲೂ ಯಾವುದೇ ತೊಂದರೆ ಆಗಿಲ್ಲ. ಮಳೆ ಬರುತ್ತಿರುವುದು ಸಂತೋಷದ ವಿಚಾರ. ಮಳೆ ಬರಲಿ. ನಾವು ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಕೆಲಸ ಮಾಡಲಿದ್ದಾರೆ. ಕೆ.ಆರ್ ವೃತ್ತ ಸೇರಿದಂತೆ ಇತರೆ ಕಡೆಗಳಲ್ಲಿ ನಾನು ಒಂದು ರೌಂಡ್ ಹಾಕಿಕೊಂಡು ಬಂದಿದ್ದೇನೆ. ಕೆ.ಆರ್ ವೃತ್ತದ ಬಳಿ ಕಳೆದ ಬಾರಿಯ ಅನಾಹುತ ಆಗಬಾರದು ಎಂದು ಅಂಡರ್ ಪಾಸ್ ಮುಚ್ಚಲಾಗಿದೆ ಎಂದು ವಿವರಿಸಿದರು.

ಪಾಲಿಕೆ ಅಧಿಕಾರಿಗಳಿಗೆ ಡಿಸಿಎಂ ಸೂಚನೆಗಳು:

* ಸಂಭವನೀಯ ಅನಾಹುತಗಳನ್ನು ತಪ್ಪಿಸಲು ಅಧಿಕಾರಿಗಳು/ ಇಂಜಿನಿಯರ್ ಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು.

* ರಾಜಧಾನಿ ಬೆಂಗಳೂರಿನ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಎಚ್ಚರಿಕೆ ವಹಿಸಬೇಕು. ಅವರ ಸುರಕ್ಷತೆ ಬಗ್ಗೆ ಸಿಬ್ಬಂದಿ ಗಮನ ಹರಿಸಬೇಕು.

*ಸಹಾಯವಾಣಿ ಕೇಂದ್ರದಲ್ಲಿ (Helpline Centre) ಸಂಬಂಧಪಟ್ಟ ಅಧಿಕಾರಿಗಳು ಸದಾ ಜಾಗರೂಕರಾಗಿ ಇರಬೇಕು.

* ಸಾರ್ವಜನಿಕರಿಂದ ಬಂದ ದೂರುಗಳಿಗೆ ತಕ್ಷಣ ಸ್ಪಂದಿಸಬೇಕು.

* ರಸ್ತೆ ಸಂಚಾರಕ್ಕೆ ಅಡ್ಡಿಯಾಗದಂತೆ ಎಚ್ಚರಿಕೆ ವಹಿಸಬೇಕು.

*ಪದೇ ಪದೇ ಅನಾಹುತ ಸಂಭವಿಸುವ ಕಡೆ ಹೆಚ್ಚು ಗಮನ ಕೊಡಬೇಕು.

* ಯಾವುದೇ ಪ್ರಾಣಾಪಾಯಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕ್ಷಿಪ್ರ ನೆರವು ಒದಗಿಸಬೇಕು.

* ಕಾಲುವೆಗಳಲ್ಲಿ, ಸರಾಗವಾಗಿ ನೀರು ಹರಿದು ಹೋಗಬೇಕು. ಇದಕ್ಕೆ ಇರುವ ಅಡಚಣೆಗಳನ್ನು ತೆರವುಗೊಳಿಸಬೇಕು.

* ಅಧಿಕಾರಿಗಳು ತಮ್ಮ ತಮ್ಮ ವ್ಯಾಪ್ತಿಯಲ್ಲಿ ರೌಂಡ್ಸ್ ಮಾಡಿ, ರಸ್ತೆ ಮತ್ತು ಅಂಡರ್ ಪಾಸ್ ಗಳಲ್ಲಿ ನಿಂತಿರುವ ನೀರನ್ನು ತೆರವುಗೊಳ್ಳಬೇಕು.

* ಪರಿಹಾರ ಕಾರ್ಯಗಳಿಗೆ ಯಾವುದೇ ಹಣಕಾಸಿನ ತೊಂರೆ ಇರುವುದಿಲ್ಲ.

* ನಾನು ಮತ್ತೆ ಯಾವುದೇ ಸಂದರ್ಭದಲ್ಲಿ ಬೇಕಾದರೂ ದಿಢೀರ್ ಭೇಟಿ ನೀಡಿ ಪರಿಶೀಲನೆ ಮಾಡುತ್ತೇನೆ.

* ಅಸಡ್ಡೆ, ಬೇಜವಾಬ್ದಾರಿ ತೋರಿದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಲಾಗುವುದು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ