Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಡಿ. 30 ರೊಳಗೆ ಅಂತಿಮ ಪಟ್ಟಿ ಪ್ರಕಟ

ಸುದ್ದಿಮೂಲ ವಾರ್ತೆ

ತುಮಕೂರು,ನ.23 : ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನ್ವಯ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ-2023ರ ಕರಡು ಮತದಾರರ ಪಟ್ಟಿಯನ್ನು ಸಾರ್ವಜನಿಕರ ಮಾಹಿತಿಗಾಗಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣಾ ಕರಡು ಮತದಾರರ ಪಟ್ಟಿ ಪ್ರಚುರಪಡಿಸುವಿಕೆ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ, ತುಮಕೂರು ಮಹಾನಗರಪಾಲಿಕೆ, ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳ ಕಚೇರಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಕಚೇರಿ, ತಿಪಟೂರು, ಶಿರಾ ನಗರಸಭೆ, ಎಲ್ಲಾ ಪುರಸಭೆ, ಪಟ್ಟಣ ಪಂಚಾಯತಿ, ಶಿಕ್ಷಣ ಸಂಸ್ಥೆಗಳ ಸೂಚನಾ ಫಲಕದಲ್ಲಿ ಕರಡು ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ ಎಂದು ತಿಳಿಸಿದರು.

ಕರ್ನಾಟಕ ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಅವರ ಪದಾವಧಿಯು 2024ರ ಜೂ.21 ರಂದು ಕೊನೆಗೊಳ್ಳಲಿದ್ದು, ಭಾರತ ಚುನಾವಣಾ ಆಯೋಗದ ಅರ್ಹತಾ ದಿನಾಂಕಕ್ಕೆ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ತಿಳಿಸಿದರು.

ಒಟ್ಟು 3287 ಪುರುಷ, 2234 ಮಹಿಳಾ ಸೇರಿದಂತೆ ಒಟ್ಟು 6061 ಸೇರ್ಪಡೆಗೊಂಡ ಅರ್ಹ ಮತದಾರರಿದ್ದು, ಪ್ರಕಟಿಸಲಾಗಿರುವ ಕರಡು ಮತದಾರರ ಪಟ್ಟಿಗೆ ಯಾವುದೇ ಹಕ್ಕು ಮತ್ತು ಆಕ್ಷೇಪಣೆಗಳಿದ್ದಲ್ಲಿ ಡಿ. 9 ರೊಳಗೆ ಮತದಾರರ ನೋಂದಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು, ಬೆಂಗಳೂರು ವಿಭಾಗ, ಬೆಂಗಳೂರು, ಸಹಾಯಕ ಮತದಾರರ ನೋಂದಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ, ತುಮಕೂರು ಜಿಲ್ಲೆ, ತುಮಕೂರು ಆಯುಕ್ತರು, ತುಮಕೂರು ಮಹಾನಗರಪಾಲಿಕೆ ಆಕ್ಷೇಪಣೆ ಸಲ್ಲಿಸಬಹುದು.

ರಾಜ್ಯದೊಳಗಿನ ಯಾವುದೇ ಶೈಕ್ಷಣಿಕ ಸಂಸ್ಥೆಗಳಲ್ಲಿ ಭೋಧನಾ ವೃತ್ತಿಯಲ್ಲಿ ನಿರತರಾಗಿರುವ ಪ್ರತಿಯೊಬ್ಬ ವ್ಯಕ್ತಿಯೂ ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಸೇರಿಸಲು ಅರ್ಹನಾಗಿರುತ್ತಾನೆ.

ಸ್ವೀಕೃತವಾಗುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿ.25 ರೊಳಗಾಗಿ ಪರಿಶೀಲಿಸಲಾಗುವುದು.

ನಂತರ ಡಿ. 30ರೊಳಗೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಮತದಾರರ ಪಟ್ಟಿಯಲ್ಲಿ ತಮ್ಮ ಕುಟುಂಬದ ಸದಸ್ಯರು ಮರಣ ಹೊಂದಿದ್ದಲ್ಲಿ ತಮ್ಮ ವ್ಯಾಪ್ತಿಯ ಬಿಎಲ್‌ಓಗಳಿಗೆ ನಮೂನೆ 7ರಲ್ಲಿ ಅರ್ಜಿ ಸಲ್ಲಿಸಿ ಮೃತಪಟ್ಟವರ ಹೆಸರನ್ನು ಸ್ವಯಂ ಪ್ರೇರಿತರಾಗಿ ಮತದಾರರ ಪಟ್ಟಿಯಿಂದ ತೆಗೆಸಬೇಕೆಂದು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ