Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಪ್ರವಾಸಿಗರಿಗೆ ಪ್ರಮುಖ ಆಕರ್ಷಣೆಯೇ ಸಿಂಹಾಸನ

ಸುದ್ದಿಮೂಲ ವಾರ್ತೆ

ಮೈಸೂರು, ಅ.9: ಇಲ್ಲಿನ ಐತಿಹಾಸಿಕ ಅರಮನೆಯ ಅಂಬಾವಿಲಾಸ್‌ ದರ್ಬಾರ್‌ ಹಾಲ್‌ನಲ್ಲಿ ರತ್ನಖಚಿತ ಸಿಂಹಾಸನ ಜೋಡಣೆ ಕಾರ್ಯ ರಾಜವಂಶಸ್ಥೆ ಪ್ರಮೋದದೇವಿ ಒಡೆಯರ್‌ ಅವರ ಸಮಕ್ಷಮದಲ್ಲಿ ಪೂರ್ಣವಾಗಿದೆ. ಈ ಮೂಲಕ ಮೈಸೂರು ಅರಮನೆಯಲ್ಲಿ ನವರಾತ್ರಿ ಸಿದ್ದತೆ ಚುರುಕುಗೊಂಡಿದೆ.

ಅ.15ರ ನವರಾತ್ರಿ ಮೊದಲ ದಿನ ಸಿಂಹಾಸನವೇರಿ ಯದುವೀರ ಕೃಷ್ಣದತ್ತ ಒಡೆಯರ್‌ ಅವರು ಖಾಸಗಿ ದರ್ಬಾರ್ ನಡೆಸಲಿದ್ದು, ರಾಜವಂಶಸ್ಥರ ಶರನ್ನವರಾತ್ರಿಯ ಪೂಜಾ ಕೈಂಕರ್ಯಕ್ಕೆ ಪೂರ್ವಭಾವಿಯಾಗಿ ಅರಮನೆಯ ಅಂಬಾವಿಲಾಸ ದರ್ಬಾರ್ ಹಾಲ್ ನಲ್ಲಿ ರತ್ನ ಖಚಿತ ಸಿಂಹಾಸನವನ್ನು ಬೆಳಗ್ಗೆ 10:05 ರಿಂದ 10:35ರ ಶುಭ ಲಗ್ನದಲ್ಲಿ ನುರಿತ ಅರಮನೆಯ ಕೆಲಸಗಾರರಿಂದ ಜೋಡಣೆ ಮಾಡಲಾಯಿತು.

ಅ.15 ರಿಂದ 24ರ ವರೆಗೆ ಅರಮನೆಯಲ್ಲಿ ರಾಜ ಪರಂಪರೆಯಂತೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಶರನ್ನವರಾತ್ರಿಯ ಪೂಜಾ ಕೈಂಕರ್ಯಗಳನ್ನು ರಾಜ ಪರಂಪರೆಯಂತೆ ನಡೆಸುವರು. ಸೋಮವಾರ ಬೆಳಗ್ಗೆ ಶುಭ ಲಗ್ನದಲ್ಲಿ ಸಿಂಹಾಸನವನ್ನು ಅರಮನೆಯ ಅಂಬಾ ವಿಲಾಸ ದರ್ಬಾರ್ ಹಾಲ್‌ನಲ್ಲಿ ಜೋಡಿಸಲಾಯಿತು.ಅದಕ್ಕೂ ಮುನ್ನ ಅರಮನೆಯ ಸ್ಟ್ರಾಂಗ್ ರೂಂನಲ್ಲಿ ಬಿಡಿಭಾಗಗಳಾಗಿ ಭದ್ರತಾ ಕೊಠಡಿಯಲ್ಲಿದ್ದ ಸಿಂಹಾಸನವನ್ನು ರಾಜಮಾತೆ ಪ್ರಮೋದಾ ದೇವಿ ಹಾಗೂ ಅರಮನೆಯ ಭದ್ರತಾ ಅಧಿಕಾರಿಗಳ ಸಮ್ಮುಖದಲ್ಲಿ ಸೀಲ್ ಮಾಡಿದ ಬಾಗಿಲನ್ನು ತೆರೆದು ಸಿಂಹಾಸನದ ಭಾಗಗಳನ್ನು ದರ್ಬಾರ್ ಹಾಲ್‌ಗೆ ತಂದರು.

ಅಲ್ಲಿ ಸಿಂಹಾಸನ ಜೋಡಣೆಯನ್ನು ಅರಮನೆಯ ಸಿಬ್ಬಂದಿ ಹಾಗೂ ಪುರಾತನ ಕಾಲದಿಂದ ಸಿಂಹಾಸನ ಜೋಡಣೆ ಕೆಲಸವನ್ನು ಮಾಡುತ್ತಿರುವ ಗೆಜ್ಜಗಳ್ಳಿಯ ನುರಿತ ಕೆಲಸಗಾರರು ಸೇರಿ ಸಿಂಹಾಸನ ಜೋಡಿಸಿದರು.

ಪೂಜಾ ಕೈಂಕರ್ಯಗಳು:

ಸಿಂಹಾಸನವನ್ನು ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್‌ನಲ್ಲಿ ಜೋಡಣೆಗೂ ಮುನ್ನ ಗಣಪತಿ ಹೋಮ, ನವಗ್ರಹ ಹೋಮ, ಚಾಮುಂಡಿ ಹೋಮ ಹಾಗೂ ಚಂಡಿಕಾ ಹೋಮವನ್ನು ನಡೆಸಿ ನಂತರ ಸಿಂಹಾಸನ ಜೋಡಣೆ ಮಾಡಲಾಯಿತು.

ಬಳಿಕ, ಜೋಡಣೆ ನಂತರ ಅರಮನೆಯ ಕನ್ನಡಿ ತೊಟ್ಟಿಗೆ ಆಗಮಿಸುವ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸುಗೆ ಪೂಜೆ ಸಲ್ಲಿಸಲಾಯಿತು. ಸಂಜೆ ಸಹ ಸಿಂಹಾಸನಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಜೊತೆಗೆ, ಪ್ರತಿನಿತ್ಯ ಬೆಳಗ್ಗೆ ಮತ್ತು ಸಂಜೆ ಪೂಜೆ ಸಲ್ಲಿಸಿ ಅಕ್ಟೋಬರ್ 15 ರಂದು ಭಾನುವಾರ ಬೆಳಗ್ಗೆ 6 ಗಂಟೆಯಿಂದ 6.25 ರ ಶುಭ ಮುಹೂರ್ತದಲ್ಲಿ ರತ್ನ ಖಚಿತ ಸಿಂಹಾಸನಕ್ಕೆ ಸಿಂಹ ಜೋಡಣೆ ಆಗುತ್ತದೆ. ಆನಂತರ ಅಂದು ಯಧುವೀರ್ ಹಾಗೂ ತ್ರಿಷಿಕಾ ಒಡೆಯರ್‌ಗೆ ಕಂಕಣ ಧಾರಣೆ ನಡೆಯುತ್ತದೆ.

ಬಳಿಕ ಶರನ್ನವರಾತ್ರಿಯ ಪೂಜೆಗಳು ಆರಂಭವಾಗಿ ಅರಮನೆಯ ಸವಾರಿ ತೊಟ್ಟಿಗೆ ಪಟ್ಟದ ಆನೆ, ಕುದುರೆ, ಹಸುಗಳು ಆಗಮಿಸುತ್ತವೆ. ಅಕ್ಟೋಬರ್ 15 ರ 10:15ಕ್ಕೆ ಸಿಂಹಾಸನ ಪೂಜೆ ನೆರವೇರಿಸಿ ಬಳಿಕ ರಾಜ ವಂಶಸ್ಥರ ರಾಜ ಪರಂಪರೆಯಂತೆ ಅಂದು ಖಾಸಗಿ ದರ್ಬಾರ್ ನಡೆಯಲಿದೆ. ಕೊನೆಗೆ, ಅಕ್ಟೋಬರ್ 24ರ ವರೆಗೆ ಪ್ರತಿನಿತ್ಯ ಖಾಸಗಿ ದರ್ಬಾರ್ ನಡೆಸುವ ರಾಜ ವಂಶಸ್ಥರಾದ ಯಧುವೀರ್, ವಿಜಯದಶಮಿ ದಿನ ಸಂಜೆ ಕೊನೆಯ ದಿನದ ಖಾಸಗಿ ದರ್ಬಾರ್ ನಡೆಸಿ, ಸಿಂಹಾಸನದಿಂದ ಸಿಂಹ ವಿಸರ್ಜನೆ ಮಾಡಿ, ಶರನ್ನವರಾತ್ರಿಯ ಪೂಜೆಗಳನ್ನು ಕೊನೆಗೊಳಿಸುತ್ತಾರೆ.

ನವರಾತ್ರಿ ಸಂದರ್ಭದಲ್ಲಿ ಮಾತ್ರ ಅಂಬಾವಿಲಾಸ ಅರಮನೆಯ ದರ್ಬಾರ್ ಹಾಲ್‌ನಲ್ಲಿ ಜೋಡಣೆಯಾಗುವ ಸಿಂಹಾಸನವನ್ನು ನೋಡಲು ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುವುದು ವಿಶೇಷವಾಗಿದೆ.

ಸಿಂಹಾಸನ ಜೋಡಣೆ ಹೇಗೆ ?

ರತ್ನ ಖಚಿತ ಸಿಂಹಾಸನವನ್ನು ಶರನ್ನವರಾತ್ರಿಯ ಪೂಜೆಯ ನಂತರ 13 ಭಾಗಗಳಾಗಿ ವಿಂಗಡಿಸಿ ಭದ್ರತಾ ಕೊಠಡಿಯಲ್ಲಿ ಇಟ್ಟಿರುತ್ತಾರೆ. ಸಿಂಹಾಸನದಲ್ಲಿ ಕುಳಿತು ಕೊಳ್ಳುವ ಭಾಗ, ಇನ್ನೊಂದು ಸಿಂಹಾಸನಕ್ಕೆ ಮೇಲೆ ಹತ್ತಲು ಮೆಟ್ಟಿಲುಗಳ ಭಾಗ, ಮತ್ತೆ ಸಿಂಹಾಸನದ ಮೇಲ್ಭಾಗಕ್ಕೆ ಸಿಂಗಾರಗೊಳಿಸುವ ಛತ್ರಿ ಹಾಗೂ ಛತ್ರಿಯ ಮೇಲೆ ನವಿಲಿನ ಆಕಾರದ ಭಾಗ ಇರುತ್ತವೆ. ಇವೆಲ್ಲವೂ 13 ಭಾಗಗಳಾಗಿ ಬೆರ್ಪಟ್ಟು ಇರುತ್ತದೆ. ಈ ಭಾಗಗಳನ್ನು ಅಂಬಾವಿಲಾಸ ದರ್ಬಾರ್ ಹಾಲ್‌ಗೆ ತಂದು ಜೋಡಣೆ ಮಾಡುವುದನ್ನು ಸ್ವರ್ಣಾಸನ ಜೋಡಣಾ ಕಾರ್ಯ ಎಂದು ಕರೆಯುತ್ತಾರೆ.

ಇದೇ ರತ್ನ ಖಚಿತ ಸಿಂಹಾಸನ ಜೋಡಣೆ ಆಗಿದ್ದು, ಇಂದು ಜೋಡಣೆಯಾದ ಸಿಂಹಾಸನಕ್ಕೆ ಅಕ್ಟೋಬರ್ 15 ರಂದು ಸಿಂಹ ಜೋಡಣೆ ಮಾಡಿ, ಪೂಜೆ ಸಲ್ಲಿಸುತ್ತಾರೆ. ಬಳಿಕ ಯದುವೀರ್ ಒಡೆಯರ್ 10 ದಿನಗಳ ಕಾಲ ಖಾಸಗಿ ದರ್ಬಾರ್ ನಡೆಸಿ, ವಿಜಯ ದಶಮಿಯ ದಿನ ಸಿಂಹಾಸನದಲ್ಲಿನ ಸಿಂಹ ವಿಸರ್ಜನೆ ಮಾಡಿ, ಕೊನೆಗೆ ನವಂಬರ್ 8 ರಂದು ರತ್ನ ಖಚಿತ ಸಿಂಹಾಸನಕ್ಕೆ ಪೂಜೆ ಸಲ್ಲಿಸಿ, ಸಿಂಹಾಸನವನ್ನು ಬಿಡಿಭಾಗಗಳಾಗಿ ವಿಂಗಡಿಸಿ, ಅರಮನೆಯಲ್ಲಿರುವ ಭದ್ರತಾ ಕೊಠಡಿಯಲ್ಲಿ ಇಡಲಾಗುತ್ತದೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ