Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ವಿದ್ಯಾರ್ಥಿ ನಿಲಯಕ್ಕೆ ತುಳಸಿ ಮದ್ದಿನೇನಿ ಭೇಟಿ

ತುಮಕೂರು, ಅ. 3 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದ ನಗರದ ಅಂತರಸನಹಳ್ಳಿಯಲ್ಲಿರುವ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾರ್ಥಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಭೇಟಿ ನೀಡಿ ಪರಿಶೀಲಿಸಿದರು.

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ನಂತರ ಮಾತನಾಡಿದ ಅವರು, ನಿಲಯವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಎಲೆಕ್ಟ್ರಿಕ್ ವೈರ್‌ಗಳು ಕೈಗೆಟಕದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಿಲಯದ ಮೇಲ್ಮಹಡಿ ಮೇಲೆ ವಿದ್ಯಾರ್ಥಿಗಳು ವ್ಯಾಸಂಗ ಮಾಡಲು ಅನುಕೂಲವಾಗುವಂತೆ ಛಾವಣಿ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು. ಇದರಿಂದ ಕಟ್ಟಡ ಮಳೆ ನೀರಿನಿಂದಾಗಿ ಸೋರಿಕೆಯಾಗುವುದನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಪ್ಪ ಹಾಗೂ ತಾಲ್ಲೂಕು ಅಧಿಕಾರಿ ಗೀತಮ್ಮ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ನಂತರ ಜಿಲ್ಲಾಸ್ಪತ್ರೆಯಲ್ಲಿರುವ ಟ್ರಾಮಾಕೇರ್ ಸೆಂಟರ್‌ಗೆ ಭೇಟಿ ನೀಡಿದ ಅವರು, ಉದ್ಘಾಟನೆಯಾಗಿದ್ದರೂ ರೋಗಿಗಳಿಗೆ ಈವರೆಗೂ ಸೇವೆ ಒದಗಿಸದೇ ಇರುವ ಬಗ್ಗೆ ಪ್ರಶ್ನಿಸಿದಾಗ ಜಿಲ್ಲಾ ಶಸ್ತ್ರ ಚಿಕಿತ್ಸಕಿ ಡಾ. ವೀಣಾ ಉತ್ತರಿಸಿ ಟ್ರಾಮಕೇರ್ ಸೆಂಟರ್‌ಗೆ ನೇಮಕ ಮಾಡಿಕೊಂಡಿರುವ ಮನವಸಂಪನ್ಮೂಲದವರಿಗೆ ತರಬೇತಿ ನೀಡಲಾಗುತ್ತಿದೆ ಹಾಗೂ ಅಪಘಾತ ಚಿಕಿತ್ಸಾ ಕೇಂದ್ರಕ್ಕೆ ಅಗತ್ಯವಿರುವ ಉಪಕರಣಗಳ ಸ್ಥಳಾಂತರ ಕಾರ್ಯ ನಡೆಯುತ್ತಿರುವುದರಿಂದ ಅ.5 ರಿಂದ ಸೇವೆ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ