Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಪೂರ್ವ ವಲಯ ಇಂದಿರಾ ಕ್ಯಾಂಟೀನ್ ಪರಿಶೀಲಿಸಿದ ತುಷಾರ್ ಗಿರಿನಾಥ್


ಸುದ್ದಿಮೂಲ ವಾರ್ತೆ





ಬೆಂಗಳೂರು, ಜು.12: ನಗದರ ಪೂರ್ವ ವಲಯದ ಹೆಬ್ಬಾಳ ಹಾಗೂ ವಿಶ್ವನಾಥ ನಾಗೇನಹಳ್ಳಿ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಎರಡು ಇಂದಿರಾ ಕ್ಯಾಂಟೀನ್ ಗಳಿಗೆ ಭೇಟಿ ನೀಡಿ ಇರುವಂತಹ ದುರಸ್ಥಿಕಾರ್ಯಗಳನ್ನು ಕೂಡಲೆ ಕೈಗೆತ್ತಿಕೊಂಡು ಸರಿಪಡಿಸಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪೂರ್ವ ವಲಯ ವ್ಯಾಪ್ತಿಯಲ್ಲಿ ಹೆಬ್ಬಾಳ ವಾರ್ಡ್ ಬಳ್ಳಾರಿ ಮುಖ್ಯ ರಸ್ತೆಯಲ್ಲಿ ಇರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನೀಡಿದ ಅವರು, ಇಂದಿರಾ ಕ್ಯಾಂಟೀನ್ ನಿರ್ವಹಣೆ ಹಾಗೂ ಆಹಾರದ ಗುಣಮಟ್ಟವನ್ನು ಪರಿಶೀಲಿಸಿದರು.

ಈ ವೇಳೆ ಇಂದಿರಾ ಕ್ಯಾಂಟೀನ್ ನಲ್ಲಿ ದುರಸ್ಥಿಯಲ್ಲಿರುವ ಬಲ್ಬ್ ಸರಿಪಡಿಸಬೇಕು, ಕೈ ತೊಳೆಯುವ ನೀರಿನ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಬೇಕು. ಇರುವ ಶೌಚಾಲಯವನ್ನು ಸಾರ್ವಜನಿಕರ ಉಪಯೋಗಕ್ಕಾಗಿ ತೆರೆಯಲು ಕ್ಯಾಂಟೀನ್ ನಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗಳಿಗೆ ಸೂಚನೆ ನೀಡಿದರು

ಇಂದಿರಾ ಕ್ಯಾಂಟೀನ್ ತಪಾಸಣೆಯ ವೇಳೆ ಸಾರ್ವಜನಿಕರ ಬಳಿ ತಿಂಡಿಯ ಗುಣಮಟ್ಟ ವಿಚಾರಿಸಿದಾಗ ಪ್ರತಿನಿತ್ಯ ಅಕ್ಕಿಯಿಂದ ಮಾಡಿದಂತಹ ಆಹಾರ ಮಾತ್ರ ಲಭ್ಯವಾಗಲಿದ್ದು, ಅದನ್ನು ಬದಲಿಸಲು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ಆಯುಕ್ತರು, ಇಂದಿರಾ ಕ್ಯಾಂಟೀನ್ ಗಳಲ್ಲಿ ನೀಡುವ ಆಹಾರದ ಮೆನು ಶೀಘ್ರವೇ ಬದಲಾಗಲಿದ್ದು, ದಿನನಿತ್ಯ ಬೇರೆ-ಬೇರೆ ತಿಂಡಿ-ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

ಇಂದಿರಾ ಕ್ಯಾಂಟೀನ್ ಗಳಿಗೆ ನಿಯೋಜಿಸಿರುವ ಮಾರ್ಷಲ್‌ಗಳನ್ನು ಬರೀ ಇಂದಿರಾ ಕ್ಯಾಂಟೀನ್ ನೋಡಿಕೊಳ್ಳುವುದು ಮಾತ್ರವಲ್ಲದೇ ಬೇರೆ-ಬೇರೆ ಜವಾಬ್ದಾರಿಗಳನ್ನು ಸಹ ನೀಡುಬೇಕೆಂದು ವಲಯ ಜಂಟಿ ಆಯುಕ್ತರಿಗೆ ಸೂಚನೆ ನೀಡಲಾಯಿತು. ಜೊತೆಗೆ ಇಂದಿರಾ ಕ್ಯಾಂಟೀನ್/ಆಹಾರದ ಗುಣಮಟ್ಟ/ಹೆಚ್ಚು ಹಣ ಪಡೆಯುವ ವಿಚಾರವಾಗಿ ದೂರುಗಳಿದ್ದಲ್ಲಿ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533 ಗೆ ಕರೆ ಮಾಡಿ ದೂರುಗಳನ್ನು ನೀಡಬಹುದು ಎಂದು ತಿಳಿಸಿದರು.

ಕೊನೆಯದಾಗಿ, ವಿಶ್ವನಾಥ ನಾಗೇನಹಳ್ಳಿ ವಾರ್ಡ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ಗೆ ಭೇಟಿ ನಿಡಿ ಪರಿಶೀಲನೆ ನಡೆಸಿ, ಇಂದಿರಾ ಕ್ಯಾಂಟೀನ್ ನ ನಾಮ ಫಲಕ ಹಾಳಾಗಿದ್ದು, ಅದನ್ನು ಕೂಡಲೆ ಬದಲಿಸಬೇಕು. ಇಂದಿರಾ ಕ್ಯಾಂಟೀನ್ ಗೆ ಅಳವಡಿಸಿರುವ ಮೆಟ್ಟಿಗಳು ದುರಸ್ಥಿಯಾಗಿದ್ದು, ಅದನ್ನು ಕೂಡಲೆ ಬದಲಿಸುವ ಜೊತೆ ಬೇರೆ ಸಣ್ಣ-ಪುಟ್ಟ ದುರಸ್ಥಿಗಳನ್ನು ಕಾರ್ಯಗಳನ್ನು ಕೈಗೊಂಡು ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಲಯ ಜಂಟಿ ಆಯುಕ್ತರಾದ ಪಲ್ಲವಿ, ಪ್ರಧಾನ ಅಭಿಯಂತರರಾದ ಪ್ರಹ್ಲಾದ್, ವಲಯ ಮುಖ್ಯ ಅಭಿಯಂತರರಾದ ಸುಗುಣಾ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.





Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ