Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಬೆಸ್ಕಾಂ ಬಳಿ ಪ್ರತಿಭಟನಾನಿರತ ರೈತರ ಭೇಟಿ

ಸುದ್ದಿಮೂಲ ವಾರ್ತೆ

ಮೈಸೂರು, ಅ.19:ರೈತರಿಗೆ ಅಗತ್ಯವಿರುವ ವಿದ್ಯುತ್‌ ಅನ್ನು ಸರ್ಕಾರ ನೀಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ ರೈತರಿಗೆ ಭರವಸೆ ನೀಡಿದ್ದಾರೆ.

ಗುರುವಾರ ರಾಜ್ಯ ರೈತ ಸಂಘದ ವತಿಯಿಂದ ಮೈಸೂರು ವಿಜಯನಗರ ಎರಡನೇ ಹಂತದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಕಚೇರಿಯಲ್ಲಿ ಪ್ರತಿಭಟನಾ ಸ್ಥಳಕ್ಕೆ ಸಚಿವರು ಭೇಟಿ ನೀಡಿ ರೈತರಿಂದ ಮನವಿ ಪತ್ರ ಸ್ವೀಕರಿಸಿದರು.

ಬಳಿಕ ಮಾತನಾಡಿದ ಸಚಿವರು, ರಾಜ್ಯ ಸರ್ಕಾರವು ರೈತರ ಬೇಡಿಕೆಯ ಪರವಾಗಿಯೇ ಇದೆ. ಈಗಾಗಲೇ ರೈತರ ಸಮಸ್ಯೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದೇ‌ನೆ. ರೈತರಿಗೆ ಅಗತ್ಯವಿರುವ ಸಮಯಕ್ಕೆ ವಿದ್ಯುತ್ ನೀಡಲು ತಿಳಿಸಿದ್ದಾರೆ. ಅದರಂತೆ ಚೆಸ್ಕಾಂ ಅಧಿಕಾರಿಗಳೊಂದಿಗೆ ವಿದ್ಯುತ್ ಸಮಸ್ಯೆ ಕುರಿತು ಚರ್ಚಿಸಿ ರೈತರಿಗೆ ಬೆಳೆ ಬೆಳೆಯಲು ಪಂಪ್ ಸೆಟ್‌ಗಳಿಗೆ ಅಗತ್ಯಗನುಸಾರ ಗುಣಾತ್ಮಕ ವಿದ್ಯುತ್ ನೀಡುವಂತೆ ಸೂಚಿಸಲಾಗುವುದು ಎಂದು ಅಭಯ ನೀಡಿದರು.

ನೂರು ವರ್ಷಗಳಿಂದ ಇಲ್ಲದ ಬರ ರಾಜ್ಯದಲ್ಲಿ ಉಂಟಾಗಿದೆ. ಅನೇಕ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದೆ. ನಮ್ಮ ರೈತರು ಸಂಕಷ್ಟಕ್ಕೆ ಸಿಲುಕಿರುವುದು ಸರ್ಕಾರದ ಗಮನದಲ್ಲಿದೆ. ಇಂತಹ ಸಂದರ್ಭದಲ್ಲಿ ಸರ್ಕಾರವು ರೈತರ ಜೊತೆ ಇರುತ್ತದೆ. ಎಂದಿಗೂ ಕೈಬಿಡುವುದಿಲ್ಲ. ರೈತರಿಗೆ ಅನುಕೂಲವಾಗುವ ಎಲ್ಲಾ ಕ್ರಮಗಳನ್ನು ಸರ್ಕಾರ ಅನುಸರಿಸಲಿದೆ ಎಂದು ಹೇಳಿದರು.

ಪ್ರಸ್ತುತ ತಾವು ನೀಡಿರುವ ಎಂಟು ಅಂಶಗಳ ಬೇಡಿಕೆಯನ್ನು ಈಡೇರಿಸಲು ಪ್ರಮಾಣಿಕ ಪ್ರಯತ್ನ ಮಾಡಲಾಗುವುದು. ಎಲ್ಲಾ ಅಂಶಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗುವುದು. ಜಿಲ್ಲಾ ಮಟ್ಟದ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಅಧಿಕಾರಿಗಳಗೆ ಸೂಚಿಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ರೈತ ಮುಖಂಡ ಹೊಸಕೋಟೆ ಬಸವರಾಜು ಸೇರಿದಂತೆ ವಿವಿಧ ತಾಲ್ಲೂಕಿನ ರೈತ ಮುಖಂಡರು ಇದ್ದರು‌ .

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ