Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಅಳಂದ ಕ್ಷೇತ್ರದಲ್ಲಿ ಮತಗಳವು: ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಆರೋಪಟ್ಟಿಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.13
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ವೇಳೆ ನಡೆದ ಮತಗಳವು ಪ್ರಕರಣದ ತನಿಖೆ ನಡೆಸುತ್ತಿಿರುವ ಎಸ್ಐಟಿ, ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಅವರ ಪುತ್ರ ಹರ್ಷಾನಂದ ಗುತ್ತೇದಾರ್ ಸೇರಿದಂತೆ ಏಳು ಜನರ ವಿರುದ್ಧ ಆರೋಪ ಪಟ್ಟಿಿ ಸಲ್ಲಿಸಿದೆ.
ವಿಶೇಷ ತನಿಖಾ ತಂಡ ಬೆಂಗಳೂರಿನ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋೋಪಾಲಿಟನ್ ಮ್ಯಾಾಜಿಸ್ಟ್ರೇಟ್ ಮುಂದೆ ಈ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. 5,994 ಮತದಾರರ ಹೆಸರುಗಳನ್ನು ತೆಗೆದುಹಾಕಲು ಮಾಡಿದ ಪ್ರಯತ್ನಗಳಿಗೆ ಸಂಬಂಧಿಸಿದೆ ಈ ಚಾರ್ಜ್‌ಶೀಟ್ ಸಲ್ಲಿಕೆ ಆಗಿದೆ.
ಸಿಐಡಿ ಮೂಲಗಳ ಪ್ರಕಾರ, ಈ ಚಾರ್ಜ್‌ಶೀಟ್ 22,000ಕ್ಕೂ ಹೆಚ್ಚು ಪುಟಗಳನ್ನು ಹೊಂದಿದ್ದು, ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಅಳವಡಿಸಿಕೊಂಡ ವಿಧಾನವನ್ನು ಆರೋಪಪಟ್ಟಿಿಯಲ್ಲಿ ವಿವರವಾಗಿ ವಿವರಿಸಲಾಗಿದೆ.
ಆರೋಪ ಪಟ್ಟಿಿಯಲ್ಲಿ ನಾಲ್ಕು ಬಾರಿ ಆಯ್ಕೆೆ ಆಗಿದ್ದ ಮಾಜಿ ಶಾಸಕ ಸುಭಾಷ್ ಗುತ್ತೇದಾರ್, ಅವರ ಮಗ ಹರ್ಷಾನಂದ ಗುತ್ತೇದಾರ್, ಅವರ ಆಪ್ತ ಕಾರ್ಯದರ್ಶಿ ತಿಪ್ಪೇರುದ್ರ, ಕಲಬುರಗಿ ಮೂಲದ ಮೂವರು ಡೇಟಾ ಸೆಂಟರ್ ನಿರ್ವಾಹಕರಾದ ಅಕ್ರಮ್ ಪಾಷಾ, ಮುಕರಾಮ್ ಪಾಷಾ ಮತ್ತು ಮೊಹಮ್ಮದ್ ಅಶ್ಫಾಾಕ್ ಹಾಗೂ ಪಶ್ಚಿಿಮ ಬಂಗಾಳದ ಬಾಪಿ ಅದ್ಯಾಾ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ ಎಂದು ಎಸ್ಐಟಿ ಮೂಲಗಳಿಂದ ತಿಳಿದು ಬಂದಿದೆ.
ಈ ಪ್ರಕರಣದಲ್ಲಿ ಆದ್ಯ ಎಂಬುವರನ್ನು ಮೊದಲಿಗೆ ಬಂಧನ ಮಾಡಲಾಗಿತ್ತು. ಈ ಆದ್ಯ ಒಟಿಪಿ ಬೈಪಾಸ್ ಸೌಲಭ್ಯವನ್ನು ಒದಗಿಸಲು ಅಮೆರಿಕ ಮೂಲದ ವೇದಿಕೆಯೊಂದಿಗೆ ಸಂಪರ್ಕ ಹೊಂದಿದ್ದ ಒಟಿಪಿ ಬಜಾರ್ ಎಂಬ ವೆಬ್‌ಸೈಟ್ ಅನ್ನು ನಡೆಸುತ್ತಿಿದ್ದರು ಎಂದು ಆರೋಪಿಸಲಾಗಿದೆ. ಈ ನಡುವೆ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆ ಕೂಡಾ ಮಾಡಲಾಗಿದೆ.
ವಿಶೇಷ ನ್ಯಾಾಯಾಲಯವು ಈ ಹಿಂದೆ ಗುತ್ತೇದಾರ್ ಹಾಗೂ ಅವರ ಪುತ್ರ ಮತ್ತು ತಿಪ್ಪೇರುದ್ರ ಅವರಿಗೆ ನಿರೀಕ್ಷಣಾ ಜಾಮೀನು ನೀಡಿತ್ತು ಎಂದು ಮೂಲಗಳು ತಿಳಿಸಿವೆ.
2023 ೆಬ್ರವರಿ ತಿಂಗಳಲ್ಲಿ 6,018 ಮತಗಳ ರದ್ದತಿಗಾಗಿ ಅಕ್ರಮ್ ಪಾಷಾ ಹಾಗೂ ಆತನ ಸಹೋದರರು ಅರ್ಜಿ ಸಲ್ಲಿಸಿದ್ದರು. ಒಟಿಪಿ ಬಳಸಿಕೊಂಡು ಮತಪಟ್ಟಿಿಯಿಂದ ಹೆಸರು ಡಿಲೀಟ್ ಮಾಡಲಾಗಿತ್ತು ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
ಘಟನೆಗೆ ಸಂಬಂಧಪಟ್ಟಂತೆ ಗುತ್ತೇರ್ದಾ ಅವರ ಮನೆ ಹಾಗೂ ಇನ್ನಿಿತರ ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ವಿಚಾರಣೆ ಸಹ ನಡೆಸಿತ್ತು.
ಎಸ್ಐಟಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿರುವ ಬಗ್ಗೆೆ ಪ್ರತಿಕ್ರಿಿಯೆ ನೀಡಿರುವ, ಮಾಜಿ ಶಾಸಕರ ಪುತ್ರ ಹರ್ಷಾನಂದ, ತಮ್ಮ ವಿರುದ್ಧದ ಆರೋಪಗಳನ್ನು ತಳ್ಳಿಿಹಾಕಿದ್ದಾರೆ. ತಮ್ಮ ತಂದೆಯನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಪ್ರಕರಣದ ಹಿನ್ನೆೆಲೆ: ಆಳಂದ ಕ್ಷೇತ್ರದಲ್ಲಿ 2023ರಲ್ಲಿ ಮತಗಳವು ನಡೆದಿದೆ ಎಂದು ಆರೋಪಿಸಿ ಶಾಸಕ ಬಿ.ಆರ್. ಪಾಟೀಲ್ ದೂರು ನೀಡಿದ್ದರು. ಅಲ್ಲದೇ ರಾಷ್ಟ್ರ ಮಟ್ಟದಲ್ಲಿ ರಾಹುಲ್ ಗಾಂಧಿ ಅವರು ಆಳಂದದಲ್ಲಿ ವೋಟ್ ಚೋರಿ ನಡೆದಿದೆ ಎಂದು ಆಪಾದಿಸಿದ್ದರು. ಸಮಗ್ರ ತನಿಖೆಗಾಗಿ ರಾಜ್ಯ ಸರ್ಕಾರ ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ.ಸಿಂಗ್ ನೇತೃತ್ವದಲ್ಲ ಎಸ್ಐಟಿ ತಂಡ ರಚಿಸಿದೆ.
ಬಾಕ್ಸ್
ಆಳಂದದಲ್ಲಿ ಮತಗಳವು ನಡೆದಿರುವುದು ಸತ್ಯ: ಡಿಕೆಶಿ
ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ಮತ ಕಳ್ಳತನ ನಡೆದಿರುವುದು ಸತ್ಯ. ಹೀಗಾಗಿ ಬಿಜೆಪಿ ಮಾಜಿ ಶಾಸಕ ಗುತ್ತೇದಾರ್ ಅವರ ವಿರುದ್ಧ ಆರೋಪ ಪಟ್ಟಿಿ ಸಲ್ಲಿಕೆ ಮಾಡುವ ಮೂಲಕ ಮತ ಕಳ್ಳತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಸದಾಶಿವನಗರ ನಿವಾಸ ಹಾಗೂ ವಿಧಾನಸೌಧದಲ್ಲಿ ಬಳಿ ಮಾಧ್ಯಮಗಳ ಪ್ರಶ್ನೆೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಿಯೆ ನೀಡಿದರು.
ಈ ಪ್ರಕರಣದಲ್ಲಿ ಯಾವುದೇ ಮುಚ್ಚುಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ ಚಾರ್ಜ್ ಶೀಟ್ ಹಾಕಿದ್ದಾರೆ. ಈ ವಿಚಾರದ ಬಗ್ಗೆೆ ನಮ್ಮ ಶಾಸಕರು ಮಂಗಳವಾರದಂದು ಸದನದಲ್ಲಿ ದನಿ ಎತ್ತಲಿದ್ದಾರೆ. ಇದು ಕೇವಲ ಕರ್ನಾಟಕದ ದನಿಯಲ್ಲ. ಇಡೀ ಭಾರತದ ದನಿ. ಜನರ ಕೃಪೆಯಿಂದ ನಾವು ಇಲ್ಲಿ ಅಧಿಕಾರಕ್ಕೆೆ ಬಂದಿದ್ದೇವೆ ಎಂದರು.
ತನಿಖೆ ನಡೆಸಿ ಕ್ರಮ ತೆಗದುಕೊಂಡಿದ್ದಾರೆ. ೆನ್ ಅಲ್ಲಿ ದಾಖಲೆಗಳು ಡಿಲೀಟ್ ಆಗಿವೆ ಎಂದು ಇದೆ. ಇದರ ಬಗ್ಗೆೆ ವರದಿ ತರಿಸಿಕೊಂಡು ನೋಡಿ ಆನಂತರ ಮಾತನಾಡುತ್ತೇನೆ. ರಾಹುಲ್ ಗಾಂಧಿ ಅವರ ಸಲಹೆಯಂತೆ ಲೀಗಲ್ ಬ್ಯಾಾಂಕ್ ಅನ್ನು ಪ್ರತಿ ಕ್ಷೇತ್ರದಲ್ಲೂ ಪ್ರಾಾರಂಭ ಮಾಡಬೇಕು. ಈ ವಿಚಾರದ ಬಗ್ಗೆೆ ನಾವು ಹೋರಾಟ ಮಾಡುತ್ತೇವೆ ಎಂದು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ