Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪೋಕ್ಸೋೋ ಪ್ರಕರಣ: ಯಡಿಯೂರಪ್ಪ ಖುದ್ದು ಹಾಜರಾಗುವಂತೆ ಸಮನ್ಸ್

ಸುದ್ದಿಮೂಲ ವಾರ್ತೆ ಬೆಂಗಳೂರು, ನ.18:
ಪೋಕ್ಸೋೋ ಪ್ರಕರಣ ಸಂಬಂಧ ವಿಚಾರಣೆಗೆ ಖುದ್ದು ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನ್ಯಾಾಯಾಲಯವು ಸಮನ್‌ಸ್‌ ಜಾರಿ ಮಾಡಿದೆ.
ಹೈಕೋರ್ಟ್‌ನ ತಡೆಯಾಜ್ಞೆ ತೆರವಾದ ಹಿನ್ನೆೆಲೆಯಲ್ಲಿ ಎಸ್‌ಪಿ ಅಶೋಕ್ ನಾಯ್ಕ್ ಅವರು ಅರ್ಜಿ ಸಲ್ಲಿಸಿ ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಬೇಕು ಎಂದು ಮನವಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಆರಂಭವಾದ ಹಿನ್ನೆೆಲೆಯಲ್ಲಿ ಆರೋಪಿಗಳಾದ ಬಿಎಸ್ ಯಡಿಯೂರಪ್ಪನವರ ಜೊತೆಗೆ ಇತರೆ ಮೂವರು ಆರೋಪಿಗಳಾದ ವೈ.ಎಂ. ಅರುಣ, ರುದ್ರೇೇಶ್ ಮರುಳಸಿದ್ದಯ್ಯ, ಜಿ. ಮರಿಸ್ವಾಾಮಿ ಅವರಗಳು ಡಿ.2ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಸಮನ್ಸ್ ನೀಡಲಾಗಿದೆ.
ಪೋಕ್ಸೋೋ ಪ್ರಕರಣಕ್ಕೆೆ ಸಂಬಂಧಿಸಿದಂತೆ ತಮಗೆ ಕೆಳಹಂತದ ನ್ಯಾಾಯಾಲಯ ತಮಗೆ ಸಮನ್ಸ್ ಜಾರಿ ಮಾಡಿದ್ದನ್ನು ಪ್ರಶ್ನಿಿಸಿ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಿಲೇರಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಯಡಿಯೂರಪ್ಪನವರ ಅರ್ಜಿಯನ್ನು ವಜಾಗೊಳಿಸಿ ವಿಚಾರಣೆಗೆ ಅನುಮತಿ ನೀಡಿತ್ತು. ವಿಚಾರಣಾಧೀನ ನ್ಯಾಾಯಾಲಯವು ಸಮನ್ಸ್ ಜಾರಿಗೊಳಿಸಿರುವುದನ್ನು ನ್ಯಾಾಯಮೂರ್ತಿ ಎಂ.ಐ. ಅರುಣ್ ಅವರ ಏಕಸದಸ್ಯ ಪೀಠ ಎತ್ತಿಿಹಿಡಿದಿತ್ತು. ಇದರ ಪರಿಣಾಮವಾಗಿ, ಯಡಿಯೂರಪ್ಪ ಅವರು ಸಿಐಡಿ ವಿಚಾರಣೆಯನ್ನು ಎದುರಿಸಲೇಬೇಕಾಗಿದೆ.
2024ರಲ್ಲಿ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪವನ್ನು ಯಡಿಯೂರಪ್ಪ ಎದುರಿಸುತ್ತಿಿದ್ದಾರೆ. ಅವರ ಬಳಿ ಸಹಾಯ ಕೇಳಿ ಹೋದಾಗ ಯಡಿಯೂರಪ್ಪನವರು ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾರ್ಚ್ 2024ರಲ್ಲಿ ಆ ಬಾಲಕಿಯ ತಾಯಿ ದೂರು ನೀಡಿದ್ದರು. ಹೀಗಾಗಿ, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆೆಯಡಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ