Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಯೂಟ್ಯೂಬರ್‌ 'ಪ್ರೊ ರೈಡರ್' ಅಗಸ್ತೆ ಚೌಹಾಣ್ ಸಾವು

ಸುದ್ದಿಮೂಲ ವಾರ್ತೆ

ಉತ್ತರಪ್ರದೇಶ,ಮೇ.5: ಯೂಟ್ಯೂಬರ್‌ ಅಗಸ್ತೆ ಚೌಹಾಣ್‌ ಭೀಕರ ಅಪಘಾತದಲ್ಲಿ ಸಾವನಪ್ಪಿದ್ದಾರೆ. ಸುಮಾರು 300 ಕಿಮೀ ವೇಗದಲ್ಲಿ ಬೈಕ್ ಚಲಾಯಿತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿ ಸಾವನ್ನಪ್ಪಿದ್ದಾರೆ.

ಈ ಘಟನೆ ಉತ್ತರ ಪ್ರದೇಶದ ಯಮುನಾ ಎಕ್ಸ್‌ಪ್ರೆಸ್‌ವೇ ನಲ್ಲಿ ನಡೆದಿದೆ.

ʻಪ್ರೊ ರೈಡರ್ 1000ʼ ಎಂಬ ಶೀರ್ಷಿಕೆಯ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಆಗಸ್ತೆ ಚೌಹಾಣ್ ತನ್ನ ಯೂಟ್ಯೂಬ್ ಚಾನೆಲಗೆ ವೀಡಿಯೋ ಅಪ್ಲೋಡ್‌ ಮಾಡುವ ಸಲುವಾಗಿ 300 ಕಿಮೀ ವೇಗದಲ್ಲಿ ಬೈಕ್‌ ಚಲಿಸುತ್ತಿದ್ದು, ಈ ವೇಳೆಯಲ್ಲಿ ಭೀಕರ ಅಪಘಾತ ನಡೆದಿದೆ. ತನ್ನ ಬೈಕ್ ZX10R – 1,000CC ಸೂಪರ್ ಬೈಕ್ ನಲ್ಲಿ ಆಗ್ರದಿಂದ ದೆಹಲಿಗೆ ಬರುತ್ತಿದ್ದಂತಹ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಚಾಲಕನು ಬೈಕ್‌ ನಿಯಂತ್ರಣ ತಪ್ಪಿ ಯಮುನಾ ಎಕ್ಸ್‌ಪ್ರೆಸ್‌ವೇ ಡಿವೈಡರ್‌ಗೆ ಡಿಕ್ಕಿ ಹೊಡೆದ್ದಾನೆ. ಬೈಕ್‌ ಡಿಕ್ಕಿ ಹೊಡೆದ ರಭಸಕ್ಕೆ ಹೆಲ್ಮೆಟ್‌ ತುಂಡುತುಂಡಾಗಿದೆ, ತಲೆಗೆ ಗಂಭೀರ ಪೆಟ್ಟಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಲಿಘರ್‌ನ ತಪ್ಪಲ್ ಪೊಲೀಸ್ ಠಾಣೆ ವ್ಯಾಪ್ತಿಯ 47 ಮೈಲ್ ಪಾಯಿಂಟ್‌ನಲ್ಲಿ ಅಪಘಾತ ಸಂಭವಿಸಿದೆ.

ಯೂಟ್ಯೂಬ್ ಚಾನೆಲಲ್ಲಿ ಸುಮಾರು 12 ಲಕ್ಷ ಚಂದಾದಾರರನ್ನ ಹೊಂದಿದ್ದ. ತಾನು ದೆಹಲಿಗೆ ಹೋಗುತ್ತಿರುವುದಾಗಿ ತನ್ನ ಚಾನೆಲ್‌ಗೆ ಕೊನೆಯ ವೀಡಿಯೋ ಅಪ್ಲೋಡ್‌ ಮಾಡಿದ್ದ. ದೆಹಲಿಗೆ ಮರಳುವಾಗ 300 ಕಿಮೀ ವೇಗದಲ್ಲಿ ಬೈಕ್‌ ಓಡಿಸುವುದನ್ನ ತೋರಿಸುತ್ತೇನೆ ಎಂದು ತನ್ನ ವೀಡಿಯೋ ಒಂದರಲ್ಲಿ ಹೇಳಿದ್ದ. ಈ ಹಿನ್ನೆಲೆ ವೀಡಿಯೋ ಮಾಡಲು ಹೋಗಿ ಬೈಕ್‌ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ