Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಸತಿ ಯೋಜನೆ ವೆಚ್ಚ ಹೆಚ್ಚಳಕ್ಕೆ ಚಿಂತನೆ : ಜಮೀರ್ ಅಹಮದ್

ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.10:
ರಾಜ್ಯದಲ್ಲಿ ಮನೆ ನಿರ್ಮಾಣಕ್ಕೆೆ ನೀಡುತ್ತಿಿರುವ ಅನುದಾನ ಹೆಚ್ಚಿಿಸಲು ಮುಖ್ಯಮಂತ್ರಿಿ ಸಿದ್ದರಾಮಯ್ಯ ಆಸಕ್ತಿಿ ಹೊಂದಿದ್ದಾರೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.
ವಿಧಾನ ಪರಿಷತ್‌ನಲ್ಲಿ ಸದಸ್ಯ ಶಿವಕುಮಾರ್ ಕೆ ಅವರ ಪ್ರಶ್ನೆೆಗೆ ಉತ್ತರಿಸಿ ಮಾತನಾಡಿದ ಸಚಿವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ದವರಿಗೆ ರೂ. 4 ಲಕ್ಷ ಮತ್ತು ಸಾಮಾನ್ಯ ವರ್ಗದವರಿಗೆ ರೂ. 3.5 ಲಕ್ಷ ಕ್ಕೆೆ ಹೆಚ್ಚಳ ಮಾಡುವ ಚಿಂತನೆ ಇದೆ. ಮುಂದಿನ ಬಜೆಟ್‌ನಲ್ಲಿ ಮುಖ್ಯಮಂತ್ರಿಿಗಳು ಘೋಷಣೆ ಮಾಡಬಹುದು ಎಂದು ಹೇಳಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ 2018ರಲ್ಲಿ ರಾಜ್ಯದ ಗ್ರಾಾಮೀಣ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆ ಹಾಗೂ 2017ರಲ್ಲಿ ಪ್ರಧಾನ ಮಂತ್ರಿಿ ಆವಾಸ್ (ನಗರ) ಯೋಜನೆಯಡಿ ನಗರ ಪ್ರದೇಶದಲ್ಲಿ ವಸತಿ/ನಿವೇಶನ ರಹಿತರ ಸಮೀಕ್ಷೆಯನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಯಲ್ಲಿ ರಾಜ್ಯದಲ್ಲಿ ಒಟ್ಟು 37,48,766 ವಸತಿ ರಹಿತರು ಕಂಡು ಬಂದಿದ್ದು, ಇದರಲ್ಲಿ 17,31,633 ನಿವೇಶನ ರಹಿತರು ಮತ್ತು 20,17,133 ವಸತಿ ರಹಿತರು ಇದ್ದಾರೆ ಎಂದರು.
2024-2025ನೇ ಸಾಲಿನಲ್ಲಿ ವಿವಿಧ ವಸತಿ ಯೋಜನೆಗಳಡಿ ಒಟ್ಟು 7,38,881 ಮನೆಗಳ ಗುರಿ ನೀಡಿದ್ದು, ಇವುಗಳಲ್ಲಿ 3,27,747 ಅನುಮೋದನೆಗೊಂಡಿರುತ್ತವೆ. 411134 ಮನೆಗಳು ಅನುಮೋದನೆಗೆ ಬಾಕಿಯಿವೆ ಎಂದು ವಿವರಿಸಿದರು.
ಇದಕ್ಕೂ ಮುನ್ನ ಮಾತನಾಡಿದ ಶಿವಕುಮಾರ್ ಕೆ., ಸ್ವಾಾತಂತ್ರ್ಯ ಬಂದು ಇಷ್ಟು ವರ್ಷಕಳೆದರೂ ರಾಜ್ಯದಲ್ಲಿ 37 ಲಕ್ಷಕ್ಕೂ ಹೆಚ್ಚು ವಸತಿ ರಹಿತರು ಇದ್ದಾರೆ ಎಂಬುದು ಅವಮಾನಕರ ಸಂಗತಿ. ಸರ್ಕಾರ ಕೂಡಲೇ ವಿಶ್ವಬ್ಯಾಾಂಕ್ ಅಥವಾ ಬೇರೆ ಯಾವುದೇ ಮೂಲದಿಂದ ಒಂದು ಬಾರಿ ದೊಡ್ಡಮೊತ್ತದ ಸಾಲ ಪಡೆದು ಎಲ್ಲಾ ನಿರ್ವಸತಿಕರಿಗೂ ಆಶ್ರಯ ಸೌಲಭ್ಯ ಕಲ್ಪಿಿಸಬೇಕು ಎಂದು ಮನವಿ ಮಾಡಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ